ತೀರ್ಥಹಳ್ಳಿ : ಪ್ರತಿಭಾನ್ವಿತ ವಿದ್ಯಾರ್ಥಿನಿ ಡಾ ಎಸ್. ಆರ್. ತೇಜಸ್ವಿನಿಯವರು ಎಂ ಬಿ ಬಿ ಎಸ್ ಪದವಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ತೀರ್ಥಹಳ್ಳಿಗೆ ಕೀರ್ತಿ ತಂದಿದ್ದಾರೆ. ತೀರ್ಥಹಳ್ಳಿಯ ಹೆಸರು ರಾಜ್ಯ ಮಟ್ಟದಲ್ಲಿ ರಾರಾಜಿಸುವಂತೆ ಮಾಡಿದ ತೇಜಸ್ವಿನಿ ತೀರ್ಥಹಳ್ಳಿಯ ಸೇವಾಭಾರತಿ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದರು.
ಇವರು ಪಿಯುಸಿ ಪರೀಕ್ಷೆಯಲ್ಲಿಯೂ ಪ್ರಥಮ ಸ್ಥಾನ ಪಡೆದುಕೊಂಡಿದ್ದರು. ಕಡು ಬಡತನದಲ್ಲಿ ಬೆಳೆದು ವೈದ್ಯೆಯಾಗುವ ಕನಸು ಕಂಡು ನಿರಂತರ ಪರಿಶ್ರಮದಿಂದ ಹಗಲು ರಾತ್ರಿ ಎನ್ನದೆ ಓದಿ ಈಗ ರಾಜ್ಯ ಮಟ್ಟಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ತನ್ನ ಕನಸನ್ನು ನನಸು ಮಾಡಿಕೊಂಡಿದ್ದಾರೆ.
ಇವರು ಮೂಲತಃ ತೀರ್ಥಹಳ್ಳಿಯ ಕುರುವಳ್ಳಿಯ ನಿವಾಸಿಗಿದ್ದು ತಂದೆ ಸುರೇಶ ತಾಯಿ ನಾಗರತ್ನ ಇವರ ಪುತ್ರಿಯಾಗಿರುತ್ತಾರೆ. ರಾಯಚೂರಿನಲ್ಲಿ ವೈದ್ಯೆಯಾಗಿ ವ್ಯಾಸಂಗ ಮಾಡಿದ ಇವರನ್ನು ಬೆಂಗಳೂರಿನಲ್ಲಿ ಸನ್ಮಾನಿಸಲಾಗಿದೆ. ವಿಷಯ ತಿಳಿದ ಗೃಹಸಚಿವ ಆರಗ ಜ್ಞಾನೇಂದ್ರ ರವರು ಇವರಿಗೆ ಅಭಿನಂದನೆ ತಿಳಿಸಿದ್ದಾರೆ.
ವರದಿ : ಅಕ್ಷಯ್ ಕುಮಾರ್
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್