ಶಿವಮೊಗ್ಗದಲ್ಲಿ ಪ್ರಾರಂಭವಾಗದ ಆಯುಷ್ ವಿಶ್ವವಿದ್ಯಾಲಯ : ಶಾಂತವೇರಿ ಗೋಪಾಲಗೌಡ ಅಧ್ಯಯನ ಕೇಂದ್ರ ಖಂಡನೆ

ಶಿವಮೊಗ್ಗ ನಗರದಲ್ಲಿ ಆಯುಷ್ ವಿಶ್ವವಿದ್ಯಾನಿಲಯವನ್ನು ಅಂದಿನ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ಮಂಜೂರು ಮಾಡಿದ್ದು, ದಿನಾಂಕ: 17-022022ರಂದು ರಾಜ್ಯಪತ್ರದಲ್ಲಿ ಮಂಜೂರಾತಿ ಆದೇಶ ಪ್ರಕಟವಾಗಿದ್ದು, ಹಲವು ತಿಂಗಳು ಕಳೆದರೂ ಆಯುಷ್ ವಿವಿ ಪ್ರಾರಂಭವಾಗದೇ ಇರುವುದನ್ನು ನಮ್ಮ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ಮುಖಂಡರಾದ ಕಲ್ಲೂರು ಮೇಘರಾಜ್ ಮತ್ತು ಆರ್ ಎ ಚಾಬುಸಾಬ್ ಜಂಟಿ ಪತ್ರೀಕಾ ಗೋಷ್ಠಿಯಲ್ಲಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ನಗರ ಸಮೀಪದ ಸೋಗಾನೆಯಲ್ಲಿ ಅಂದಿನ ಸಭಾಪತಿ ಡಿ.ಹೆಚ್.ಶಂಕರಮೂರ್ತಿಯವರ ಶಿಫಾರಸ್ಸಿನ ಮೇರೆಗೆ ಮತ್ತು ನಮ್ಮ ಸಂಘಟನೆಯ ಪ್ರಯತ್ನದಿಂದ ಆಯುಷ್ ವಿವಿ ಶಿವಮೊಗ್ಗಕ್ಕೆ ಮಂಜೂರಾಗಿತ್ತು. ಸೋಗಾನೆಯ ಸರ್ವೆ ನಂ.120ರಲ್ಲಿ ಈ ಉದ್ದೇಶಕ್ಕೆ 100 ಎಕರೆ ಜಾಗ ಮಂಜೂರಾಗಿದ್ದು, 21-22ರ ಬಜೆಟ್‌ನಲ್ಲಿ 20 ಕೋಟಿ ರೂ. ಅನುದಾನವನ್ನು ಘೋಷಣೆ
ಮಾಡಲಾಗಿತ್ತು.

ವಿಶ್ವವಿದ್ಯಾನಿಲಯವನ್ನು 500 ಕೋಟಿ ರೂ. ಮೊತ್ತದಲ್ಲಿ ಸ್ಥಾಪಿಸಲಾಗುವುದು ಎಂದು ಹೇಳಲಾಗಿತ್ತು. ಆದರೆ, ಬೊಮ್ಮಾಯಿ ಸರ್ಕಾರ ಈ ಎಲ್ಲಾ ಯೋಜನೆಗಳಿಗೆ ತಿಲಾಂಜಲಿ ಇಟ್ಟಿದೆ ಎನ್ನುವ ಸಂದೇಹ ಬರುತ್ತಿದೆ ಎಂದರು.

ಈ ಬಗ್ಗೆ ಜಿಲ್ಲೆಯವರೇ ಆದ ಬಿ.ಎಸ್. ಯಡಿಯೂರಪ್ಪ, ಗೃಹ ಸಚಿವ ಆರಗ ಜ್ಞಾನೇಂದ್ರ ಮಾಜಿ ಸಭಾಪತಿ ಡಿ.ಹೆಚ್. ಶಂಕರಮೂರ್ತಿ, ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಕೆ.ಎಸ್.ಈಶ್ವರಪ್ಪ ಹಾಗೂ ಶಿವಮೊಗ್ಗದ ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರು ಈ ಬಗ್ಗೆ ಕಾಳಜಿ ವಹಿಸಿ ಕೂಡಲೇ ಶಿವಮೊಗ್ಗದಲ್ಲಿ ಆಯುಷ್ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟ್‌ನ ಮುಖಂಡರಾದ ಹೊಳೆಮಡಿಲು ವೆಂಕಟೇಶ್, ಎಲ್.ಆರ್. ಗೋಪಾ ಲಕೃಷ್ಣ, ಶಂಕರನಾಯ್ಕ, ಮೋಹಿದ್ದೀನ್ ಮೊದಲಾದವರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

2 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

6 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

9 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

21 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

21 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

23 hours ago