ಶಿವಮೊಗ್ಗ : ಗಾಂಧಿ ಬಜಾರ್ನ ಮಾರ್ಕೆಟ್ನಲ್ಲಿ ಚಾಕುವಿನಿಂದ ಇರಿತಕ್ಕೆ ಒಳಗಾಗಿದ್ದ ಸೆಂಧಿಲ್ ಕುಮಾರ್ ಇಂದು ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಒಂಬತ್ತು ತಿಂಗಳ ಹಿಂದೆ ಸೆಂಧಿಲ್ ನ ಸ್ನೇಹಿತ ಸಂತೋಷ್ (ಜೋಗಿ ಸಂತು) ವಿನ ಜೊತೆಯಲ್ಲಿ ಹಣದ ವ್ಯವಹಾರದ ವಿಚಾರವಾಗಿ ಜಗಳವಾಗಿದ್ದು ಆ ಕಾರಣಕ್ಕೆ ಸೆಂಧಿಲ್ ಮೇಲೆ ಅಟ್ಯಾಕ್ ಮಾಡಲಾಗಿತ್ತು. ಈ ಅಟ್ಯಾಕ್ ನಿಂದ ಗಾಯಗೊಂಡಿದ್ದ ಸೆಂಥಿಲ್ ನನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.
ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಕುಟುಂಬದವರು ಕರೆದುಕೊಂಡು ಹೋಗಿದ್ದರು. ಆದರೆ ಅಲ್ಲಿಯೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್