ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ರಿಪ್ಪನ್‌ಪೇಟೆಯ ಅಮೀರ್ ಹಂಜಾ ರವರನ್ನು ನೇಮಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಆದೇಶಿಸಿದ್ದಾರೆ.
ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಜಿಲ್ಲಾಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ರವರು ಅಮೀರ್ ಹಂಜಾ ರವರಿಗೆ ಆದೇಶ ಪ್ರತಿಯನ್ನು ವಿತರಿಸಿದರು.
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ರವರ ಒಡನಾಡಿಯಾಗಿದ್ದ ರಿಪ್ಪನ್‌ಪೇಟೆಯ ಅಮೀರ್ ಹಂಜಾ ಪ್ರಸ್ತುತ ಮಧು ಬಂಗಾರಪ್ಪ ರ ಬೆಂಬಲಿಗ ಮುಖಂಡರಲ್ಲಿ ಮುಂಚೂಣಿಯಲ್ಲಿದ್ದಾರೆ.ಈ ಹಿಂದೆ ಜಿಲ್ಲಾ ವಕ್ಪ್ ಬೋರ್ಡ್ ಉಪಾಧ್ಯಕ್ಷರಾಗಿದ್ದ ಇವರು ವಿವಿಧ ಸಂಘ ಸಂಸ್ಥೆಗಳಲ್ಲಿ ಹಲವಾರು ಸ್ಥಾನಮಾನಗಳನ್ನು ಪಡೆದು ಸಂಘಟನೆಯಲ್ಲಿ ಮುಂಚೂಣಿಯಲ್ಲಿದ್ದಾರೆ.
ನಂತರ ಮಾತನಾಡಿದ ಅವರು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಳಿಸುವಲ್ಲಿ ಸಹಕರಿಸಿದ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಉಪಾಧ್ಯಕ್ಷರಾದ ಮಧು ಬಂಗಾರಪ್ಪ,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸುಂದರೇಶ್,ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ಬೇಳೂರು,ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಹಕಾರ ವಿಭಾಗದ ರಾಜ್ಯ ಸಂಚಾಲಕರಾದ ಡಾ.ಆರ್ ಎಂ ಮಂಜುನಾಥ್ ಗೌಡ,ಜಿಪಂ ಮಾಜಿ ಅಧ್ಯಕ್ಷರಾದ ಕಲಗೋಡು ರತ್ನಾಕರ್ ರವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ಅಮೀರ್ ಹಂಜಾ ರವರಿಗೆ ಜಿಪಂ ಮಾಜಿ ಸದಸ್ಯರಾದ ಬಿ ಪಿ ರಾಮಚಂದ್ರ , ರಿಪ್ಪನ್‌ಪೇಟೆ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಆಸೀಫ಼್ ಭಾಷಾಸಾಬ್,ಸಹಕಾರಿ ಮುಖಂಡರಾದ ಎಂ ಎಂ ಪರಮೇಶ್, ಮುಖಂಡರಾದ ಮಳವಳ್ಳಿ ಮಂಜುನಾಥ್ ಸೇರಿದಂತೆ ಅನೇಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್