ಹೊಸನಗರ ತಾಲೂಕಿನ ಕುಗ್ರಾಮ ನಿಟ್ಟೂರಿನ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಪಿಯುಸಿ ಯಲ್ಲಿ ಶೇಕಡ 91.93 ಫಲಿತಾಂಶ.

ನಿಟ್ಟೂರು: ಗ್ರಾಮೀಣ ಪ್ರದೇಶದಲ್ಲಿ ಪ್ರತಿಭೆಗಳಿದ್ದಾರೆ ಆದರೆ ಅವಕಾಶಗಳಿಲ್ಲ. ಉತ್ತಮ ಅವಕಾಶ ದೊರೆತರೆ ಸಾಧನೆಯನ್ನು ಮಾಡುತ್ತಾರೆ ಎನ್ನುವುದಕ್ಕೆ ಅತ್ಯುತ್ತಮ ಉದಾಹರಣೆಯಾಗಿ ಹೊಸನಗರ ತಾಲೂಕಿನ ಕುಗ್ರಾಮದಲ್ಲಿರುವ  ಸಂಪೆಕಟ್ಟೆ  ನಿಟ್ಟೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು 2021 -22 ನೇ ಸಾಲಿನಲ್ಲಿ ನಡೆದ ದ್ವಿತೀಯ  ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ.


ಸ್ನೇಹಮಯಿ ಮತ್ತು ಕರ್ತವ್ಯ ನಿಷ್ಠೆ ಇರುವ ಉಪನ್ಯಾಸಕರುಗಳಿದ್ದು ಒಳ್ಳೆಯ ಮಾರ್ಗದರ್ಶನ ನೀಡಿದರೆ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಚಟುವಟಿಕೆಗಳಲ್ಲಿ ಅಭೂತಪೂರ್ವ ಸಾಧನೆಯನ್ನು ಮಾಡುತ್ತಾರೆ ಎನ್ನುವುದಕ್ಕೆ  ನಿಟ್ಟೂರು ಸರಕಾರಿ ಪದವಿ ಪೂರ್ವ ಕಾಲೇಜಿನ  ವಿದ್ಯಾರ್ಥಿಗಳು ಸಾಕ್ಷಿಯಾಗಿದ್ದಾರೆ.

ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಶೇಕಡ 91.93 ಫಲಿತಾಂಶ ಈ ಕಾಲೇಜಿಗೆ ಲಭಿಸಿದೆ.ಈ ಬಾರಿಯ ದ್ವಿತೀಯ  ಪಿಯುಸಿ ಪರೀಕ್ಷೆಯನ್ನು 62 ವಿದ್ಯಾರ್ಥಿಗಳು ಬರೆದಿದ್ದು  ಅದರಲ್ಲಿ 57 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

12 ವಿದ್ಯಾರ್ಥಿಗಳು ಉನ್ನತ ಶ್ರೇಣಿ ಪಡೆಯುವುದರ ಜೊತೆಗೆ ಕಲಾ ವಿಭಾಗದ  ಗಣೇಶ್. ಜಿ. ಆರ್. ಎಂಬ ವಿದ್ಯಾರ್ಥಿ ಕಲಾವಿಭಾಗದಲ್ಲಿ 573 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಜಿಲ್ಲಾಮಟ್ಟದ ರಾಂಕ್ ಅನ್ನು ಸಹ ಪಡೆದುಕೊಂಡಿದ್ದಾನೆ.


ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಈ ಅದ್ಭುತ ಸಾಧನೆಗೆ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ , ಕಾಲೇಜಿನ ಪ್ರಾಚಾರ್ಯರಾದ ವೆಂಕಟೇಶ್ ರವರಿಗೆ,
ಕಾಲೇಜಿನ ಹಿರಿಯ ಉಪನ್ಯಾಸಕರಾದ ಗಣೇಶ್ ಮತ್ತು ಉಪನ್ಯಾಸಕರು ಹಾಗೂ ಸಿಬ್ಬಂದಿಗಳ ವೃಂದದವರಿಗೆ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕರಾದ  ಹರತಾಳು ಹಾಲಪ್ಪ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಅಶೋಕ್ ಹಾಗೂ  ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರುಗಳು ನಿಟ್ಟೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರು ಮತ್ತು ಗ್ರಾಮಸ್ಥರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಕುಗ್ರಾಮದ ವಿದ್ಯಾರ್ಥಿಗಳ ಈ ಸಾಧನೆಗೆ ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವತಿಯಿಂದ ಅಭಿನಂದನೆಗಳು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

1 hour ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

6 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

8 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

20 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

20 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

22 hours ago