Headlines

ರಿಪ್ಪನ್‌ಪೇಟೆ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ರಾಕೇಶ್ ಸಿ ರವರಿಗೆ ಪಿಹೆಚ್‌ಡಿ ಪದವಿ ಪ್ರಧಾನ :

ರಿಪ್ಪನ್‌ ಪೇಟೆ:- ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ರಾಕೇಶ ಸಿ. ರವರಿಗೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಡಾ ರಾಕೇಶ್ ಸಿ ರವರು ಮಂಡಿಸಿದ “ಮೋಟಿವೇಶನಲ್ ಪಾಲಿಸಿಜ್ & ಪ್ರಾಕ್ಟಿಸಿಸ್ ಇನ್ ಎಂಎನ್ ಸಿಸ್ – ಎ ಕೇಸ್ ಸ್ಟಡಿ ಆಫ್ ಸೆಲೆಕ್ಟೆಡ್ ಎಂಎನ್ ಸಿಸ್ ಇನ್ ಕರ್ನಾಟಕ” ಎಂಬ ವಿಷಯದ ಮೇಲಿನ ಮಹಾ ಪ್ರಬಂಧಕ್ಕೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಯನ್ನು ನೀಡಿದೆ.  ರಾಕೇಶ್…

Read More

ರಿಪ್ಪನ್ ಪೇಟೆಯ ಮಹಿಳೆಯೊಬ್ಬರ ಮೊಬೈಲ್ ಗೆ ಅಶ್ಲೀಲ ಚಿತ್ರ ರವಾನೆ : ಅಪರಿಚಿತ ವ್ಯಕ್ತಿಗಳ ಪತ್ತೆಗೆ ಭರ್ಜರಿ ಬಲೆ ಬೀಸಿರುವ ಖಾಕಿ ಟೀಮ್

ರಿಪ್ಪನ್‌ಪೇಟೆಯ ಮಹಿಳೆಯೋರ್ವರ ಮೊಬೈಲ್ ಗೆ ಅಶ್ಲೀಲ ವಿಡಿಯೋ ರವಾನಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಅಪರಿಚಿತರ ವಿರುದ್ಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಾಗಿದೆ.  ಗವಟೂರು ಗ್ರಾಮದ ನಿವಾಸಿಯಾಗಿರುವ ಮಹಿಳೆಯೊಬ್ಬರ ಮೊಬೈಲ್ ಗೆ ಮೇ.10 ರಂದು ಅಶ್ಲೀಲ ವಿಡಿಯೋಗಳನ್ನ ಎರಡು ಅಪರಿಚಿತ ನಂಬರ್ ನಿಂದ ರವಾನಿಸಿ ಮೇಲಿಂದ ಮೇಲೆ ಕರೆ ಮಾಡಿ ಮಾನಸಿಕ ಕಿರುಕುಳ ನೀಡಿದ್ದಾರೆ. ಈ ಬಗ್ಗೆ ಅರ್ಜಿಯನ್ನೂ ಮೇ 10 ರಂದು ಮಹಿಳೆ ನೀಡಿದ್ದರು.  ಇದನ್ನು ತನಿಖೆ ನಡೆಸಿದ ಪೊಲೀಸರು ಎರಡು ಅಪರಿಚಿತ ಮೊಬೈಲ್…

Read More

ಬಸವಣ್ಣನವರ ಬಗ್ಗೆ ಪಠ್ಯಪುಸ್ತಕದಲ್ಲಿನ ತಪ್ಪು ಮಾಹಿತಿ ಸರಿಪಡಿಸುವಂತೆ ಮುಖ್ಯಮಂತ್ರಿಗಳಿಗೆ ಮೂಲೆಗದ್ದೇ ಶ್ರೀಗಳ ಪತ್ರ

ಲಿಂಗಾಯಿತ ಧರ್ಮಗುರು ಬಸವಣ್ಣನವರ ಬಗ್ಗೆ ಪಠ್ಯ ಪುಸ್ತಕದಲ್ಲಿ ತಪ್ಪು ಮಾಹಿತಿ ನೀಡಲಾಗಿದೆ. ಇದನ್ನು ಸರಿಪಡಿಸದಿದ್ದರೆ ಮುಂದಿನ ದಿನಗಳಲ್ಲಿ ನಾವುಗಳು ಹೋರಾಟ ನಡೆಸಬೇಕಾಗುತ್ತದೆಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. ಅವರು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿರುವ ಬಗ್ಗೆ ರಿಪ್ಪನ್‌ಪೇಟೆಯಲ್ಲಿ ಮಾಧ್ಯಮಗಳಿಗೆ ವಿವರಿಸಿ, 9ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದಲ್ಲಿ ಬಸವಣ್ಣನವರನ್ನು ಕುರಿತ ಪಾಠದಲ್ಲಿ ಕೆಲ ಬದಲಾವಣೆ ಮಾಡಿ ಪ್ರಕಟಿಸಿರುವುದನ್ನು ಕುಚೋದ್ಯದ ಸಂಗತಿ. ಈ ಅನೈತಿಕ ತಪ್ಪುಗಳನ್ನು ಸರಿಪಡಿಸಿ ಪ್ರಕಟಿಸಬೇಕು. ಇಲ್ಲದಿದ್ದರೆ…

Read More

ರಿಪ್ಪನ್‌ಪೇಟೆ ಸಮೀಪದ ಅಬ್ಬಿಗುಂಡಿಯಲ್ಲಿ ಕಾಲುಜಾರಿ ಹೊಳೆಯಲ್ಲಿ ಬಿದ್ದು ಪಿಯುಸಿ ವಿದ್ಯಾರ್ಥಿ ಸಾವು

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಶಾಂತಪುರ ಬಳಿ ಅಬ್ಬಿಗುಂಡಿ ಎಂಬ ಹೊಳೆಯಲ್ಲಿ ಕಾಲು ಜಾರಿ ನೀರಿನ ಸುಳಿಗೆ ಸಿಲುಕಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಶಾಂತಪುರ ಸಮೀಪದ ಸಿದ್ಧಗಿರಿ ನಿವಾಸಿ ಕೋರೆ ಮಂಜಣ್ಣ ಇವರ ಪುತ್ರ ಕಿರಣ್(17)  ಮೃತಪಟ್ಟ ದುರ್ದೈವಿಯಾಗಿದ್ದಾನೆ .ಈತನು ಹೊಸನಗರ ಸರ್ಕಾರಿ ಕಾಲೇಜಿನಲ್ಲಿ  ಪಿಯುಸಿ ವ್ಯಾಸಂಗ ಮಾಡುತ್ತಿದ್ದನು. ಇಂದು ಮಧ್ಯಾಹ್ನ ಹನ್ನೆರಡು ಗಂಟೆ ಸುಮಾರಿಗೆ ಸ್ನೇಹಿತ ಯಶವಂತ್ ಎಂಬಾತನೊಂದಿಗೆ ಶಾಂತಪುರ ಸಮೀಪದ ಅಬ್ಬಿಗುಂಡಿ ಹೊಳೆಯ ಸಮೀಪ ಹೋದಾಗ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ….

Read More

ಭೀಕರ ರಸ್ತೆ ಅಪಘಾತ : ಸ್ಥಳದಲ್ಲಿಯೇ ಇಬ್ಬರು ವಿದ್ಯಾರ್ಥಿಗಳ ಸಾವು

ಭದ್ರಾವತಿಯ ಹುಣಸೇಕಟ್ಟೆ ಜಂಕ್ಷನ್ ಬಳಿ ರಸ್ತೆ ಅಪಘಾತವಾಗಿದ್ದು  ಕುವೆಂಪು ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ನಿನ್ನೆ ರಾತ್ರಿ 10-30 ರ ಸಮಯದಲ್ಲಿ ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾದ ಉತ್ತಮ ಚಕ್ರವರ್ತಿ, ಮನೋಜ್ ಎಂಬ ಇಬ್ಬರು ಯುವಕರು ಶಂಕರಘಟ್ಟದಿಂದ ಭದ್ರಾವತಿಗೆ ಹೋಗುವಾಗ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.  ಉತ್ತಮ ಚಕ್ರವರ್ತಿ ಮತ್ತು ಮನೋಜ್ ಇಬ್ಬರು ಎನ್ ಆರ್ ಪುರದ ನಿವಾಸಿಗಳಾಗಿದ್ದು, ಉತ್ತಮ್ ಚಕ್ರವರ್ತಿ ಎಂಸಿಎ…

Read More

ತೀರ್ಥಹಳ್ಳಿಯಲ್ಲಿ ಸರಕಾರಿ ನೌಕರಿಯಲ್ಲಿರುವ ಯುವ ಪ್ರೇಮಿಗಳು ಆತ್ಮಹತ್ಯೆಗೆ ಯತ್ನ……! ಜಾತಿಯೆಂಬ ವಿಷಬೀಜ ಆತ್ಮಹತ್ಯೆ ಪ್ರಯತ್ನಕ್ಕೆ ಕಾರಣವಾಯಿತೆ..? ಇಬ್ಬರೂ ಸರ್ಕಾರಿ ನೌಕರರು ಅವಳು ಪೊಲೀಸ್-ಇವನು ಫಾರೆಸ್ಟರ್..!!!!

ಪ್ರೀತಿಸಿ ಮದುವೆಯಾಗಲು ಮನೆಯವರು ಒಪ್ಪದೇ ಇರುವ ಕಾರಣ ಪ್ರೇಮಿಗಳಿಬ್ಬರು ವಿಷ ಸೇವಿಸಿ  ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಪೋಷಕರ ಆಶೀರ್ವಾದ ಪಡೆದು ಹೊಸ ಜೀವನವನ್ನು ಆರಂಭಿಸಬೇಕಾಗಿದ್ದ  ಯುವ ಪ್ರೇಮಿಗಳ ಮದುವೆಯ ಪ್ರಸ್ತಾಪಕ್ಕೆ ಪೋಷಕರು ವಿರೋಧಿಸಿದ ಹಿನ್ನೆಲೆಯಲ್ಲಿ  ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ ಘಟನೆಯ ಹಿನ್ನಲೆ : ತೀರ್ಥಹಳ್ಳಿ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಪೇದೆ  ಹಾಗೂ ಬೆಳಗಾವಿ ಮೂಲದ ಪ್ರವೀಣ್ ಎಂಬ ಅರಣ್ಯ ಫಾರೆಸ್ಟರ್ ಇಬ್ಬರು ಸುಮಾರು ವರ್ಷಗಳಿಂದ ಪ್ರೀತಿಸುತಿದ್ದು ಈಗ ಮನೆಯಲ್ಲಿ…

Read More

ಜನಪ್ರತಿನಿಧಿ ಹಾಗೂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ನಶಿಸುತ್ತಿದೆ ಇತಿಹಾಸ ಪ್ರಸಿದ್ದ ಆಂಜನೇಯ ದೇವಸ್ಥಾನ :

ತೀರ್ಥಹಳ್ಳಿ : ತಾಲೂಕಿನ ಮಾಳೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿರುವ ಶಿವಮೊಗ್ಗ – ತೀರ್ಥಹಳ್ಳಿಯ ಮುಖ್ಯ ರಸ್ತೆಯ ಪಕ್ಕದಲ್ಲಿರುವ ಮುಜರಾಯಿ ಇಲಾಖೆಗೆ ಸಂಬಂಧಪಟ್ಟ ಇತಿಹಾಸ ಪ್ರಸಿದ್ದ ಆಂಜನೇಯ ದೇವಸ್ಥಾನ ಸರ್ಕಾರದ ಯಾವುದೇ ಸೌಲಭ್ಯವಿಲ್ಲದೆ ನಶಿಸುತ್ತಿದೆ. ಆಂಜನೇಯ ದೇವಸ್ಥಾನದಲ್ಲಿ ಪ್ರತಿದಿನ ಪೂಜೆ ಏನೋ ನೆಡೆಯುತ್ತಿದೆ. ಆದರೆ ಸರ್ಕಾರದಿಂದ ಯಾವುದೇ ಸೌಲಭ್ಯ ಕೂಡ ದೇವಸ್ಥಾನಕ್ಕೆ ದೊರಕುತ್ತಿಲ್ಲ. ಚುನಾವಣೆ ಸಮಯದಲ್ಲಿ ದೇವಸ್ಥಾನಕ್ಕೆ ಹಲವು ಬಾರಿ ಈಗಿನ ಗೃಹ ಸಚಿವರು ಅದ ಆರಗ ಜ್ಞಾನೇಂದ್ರ  ಮತ್ತು ಮಾಜಿ ಶಾಸಕರು ಆಗಿರುವ ಕಿಮ್ಮನೆ ರತ್ನಾಕರ್ ಭೇಟಿ ನೀಡಿದ ದೇವಸ್ಥಾನವನ್ನು…

Read More

ರಾಷ್ಟ್ರಕವಿ ಕುವೆಂಪುರವರನ್ನು ಅಪಮಾನಿಸಿರುವ ರೋಹಿತ್ ಚಕ್ರತೀರ್ಥ ನನ್ನು ವಜಾಗೊಳಿಸಿ ಪ್ರಕರಣ ದಾಖಲಿಸುವಂತೆ ಹೊಸನಗರ ತಾಲೂಕಿನ ವಿವಿಧ ಪಕ್ಷ ಹಾಗೂ ಸಂಘಟನೆಗಳಿಂದ ಪ್ರತಿಭಟನೆ

ಪಠ್ಯಪುಸ್ತಕದಲ್ಲಿ ರಾಷ್ಟ್ರಕವಿ ಕುವೆಂಪುರವರನ್ನು ಅವಮಾನಿಸುವ ರೀತಿಯಲ್ಲಿ ಪಠ್ಯಪುಸ್ತಕವನ್ನು ರಚಿಸಿ ನಾಡ ಕವಿಯನ್ನು ಅವಮಾನಿಸುತ್ತಿರುವ ಕರ್ನಾಟಕ ರಾಜ್ಯ ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯಿಂದ ರೋಹಿತ್ ಚಕ್ರತೀರ್ಥರವರನ್ನು ವಜಾ ಮಾಡುವುದರ ಜೊತೆಗೆ ದೇಶ ದ್ರೋಹಿ ಕೇಸು ಹಾಕಿ ಜೈಲಿಗೆ ಕಳುಹಿಸಬೇಕೆಂದು ಹೊಸನಗರ ತಾಲೂಕಿನ ವಿವಿಧ ಪಕ್ಷ ಹಾಗೂ ಸಂಘಟನೆಗಳು ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನಗರ ಕಾಲೇಜಿನ ಪ್ರಾಂಶುಪಾಲರಾದ ಸೊನಲೆ ಶ್ರೀನಿವಾಸ್‌, ರೋಹಿತ್ ಚಕ್ರತೀರ್ಥನು ಅಪ್ರಭುದ್ಧ ಹಾಗೂ ನಾಡಪ್ರಜ್ಞೆ ಇಲ್ಲದ ವ್ಯಕ್ತಿಯಾಗಿದ್ದು ಈತನ ಮಾತು…

Read More