Headlines

ರಿಪ್ಪನ್ ಪೇಟೆಯ ರಿಂಗ್ ಸುಧಾಕರ್ ಹೃದಯಾಘಾತದಿಂದ ನಿಧನ.

ರಿಪ್ಪನ್ ಪೇಟೆ : ಪಟ್ಟಣ ಸೇರಿದಂತೆ ಹೊಸನಗರ, ಸಾಗರ, ತೀರ್ಥಹಳ್ಳಿ ತಾಲೂಕುಗಳಲ್ಲಿ  ಕಳೆದ ಕೆಲವು ದಶಕಗಳಿಂದ ರಿಂಗ್ ಬಾವಿ ನಿರ್ಮಾಣದಿಂದ ಖ್ಯಾತರಾಗಿದ್ದ ರಿಂಗ್ ಸುಧಾಕರ್ ರವರು ಇಂದು ಮಧ್ಯಾಹ್ನ ಕೇರಳದ ಕೊಲ್ಲಂ ಜಿಲ್ಲೆಯ ಅವರ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೇರಳ ಮೂಲದ ರಿಂಗ್ ಸುಧಾಕರ್ ಅವರು ಮೂರು ದಶಕಗಳಿಂದ ರಿಪ್ಪನ್  ಪೇಟೆಯಲ್ಲಿ ನೆಲೆ ನಿಂತು ರಿಂಗ್ ಬಾವಿ ನಿರ್ಮಾಣ ಮಾಡುವುದರ ಮೂಲಕ ರಿಂಗ್ ಸುಧಾಕರ ಎಂದು ಜನಪ್ರಿಯರಾಗಿದ್ದರು. ವಿವಿಧ ಸಮಾಜಸೇವೆಯಲ್ಲಿ ತೊಡಗಿಕೊಂಡಿದ್ದ ಅವರು ವಿವಿಧ ಸಂಘ ಸಂಸ್ಥೆಗಳಿಗೆ…

Read More

ಅಮೃತ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಮಂಜುಳಾ ರಾಘವೇಂದ್ರ ಆಚಾರ್ ಅವಿರೋಧವಾಗಿ ಆಯ್ಕೆ

ರಿಪ್ಪನ್‌ಪೇಟೆ: ಅಮೃತ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿದ್ದ ಮಂಜುಳಾ ರಾಜು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ನಡೆದ ಅಧ್ಯಕ್ಷರ ಆಯ್ಕೆಯಲ್ಲಿ ಮಂಜುಳಾ ರಾಘವೇಂದ್ರ ಆಚಾರ್ ಆಯ್ಕೆಯಾಗಿದ್ದಾರೆ. 11 ಜನ ಸದಸ್ಯರಿರುವ ಗ್ರಾಮ ಪಂಚಾಯತಿ 2 ಕಾಂಗ್ರೆಸ್ ಸದಸ್ಯರಿದ್ದು 9 ಸ್ಥಾನ ಬಿಜೆಪಿ ಪಾಲಾಗಿತ್ತು. ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರರವರ ನೇತೃತ್ವದಲ್ಲಿ ಇಂದು ಗ್ರಾಮ ಪಂಚಾಯ್ತಿ ಅಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮಂಜುಳಾ ರಾಘವೇಂದ್ರ ಆಚಾರ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ರಿಪ್ಪನ್‌ಪೇಟೆ- ಹುಂಚಾ ಬಿಜೆಪಿ ಮಹಾಶಕ್ತಿ…

Read More

ಅಗ್ನಿಪಥ್ ಯೋಜನೆ ಹಿಂಪಡೆಯುವಂತೆ ಆಗ್ರಹಿಸಿ ಕಿಮ್ಮನೆ ರತ್ನಾಕರ್ ನೇತ್ರತ್ವದಲ್ಲಿ ತೀರ್ಥಹಳ್ಳಿಯಲ್ಲಿ ಪ್ರತಿಭಟನೆ :

ತೀರ್ಥಹಳ್ಳಿ : ತಾಲೂಕಿನಲ್ಲಿ ಲಂಚವಿಲ್ಲದೆ ಎಲ್ಲೂ ಕೂಡ ಕೆಲಸ ನೆಡೆಯುತ್ತಿಲ್ಲ. ಜ್ಞಾನೇಂದ್ರರವರ ಇಲಾಖೆಯ ಪಿಎಸ್ಐ ನೇಮಕಾತಿಯಲ್ಲೂ ಹಗರಣ ಮಾಡಿ ಮೋಸ ಮಾಡಿದರು ಎಂದು ಆರಗ ಜ್ಞಾನೇಂದ್ರ ವಿರುದ್ಧ ವಾಗ್ದಾಳಿ ನೆಡೆಸಿದರು. ಪಟ್ಟಣದ ತಾಲೂಕು ಕಚೇರಿ ಎದುರು ಕೇಂದ್ರ ಬಿಜೆಪಿ  ಸರ್ಕಾರದ ಅವೈಜ್ಞಾನಿಕ ಅಗ್ನಿಪಥ್ ಯೋಜನೆಯನ್ನು ಹಿಂಪಡೆಯುವಂತೆ ಆಗ್ರಹಿಸಿ  ನೆಡೆದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿ ಭಾರತೀಯ ಸೇನೆಯಲ್ಲಿ ನೇಮಕಾತಿ ಸಂಬಂಧ ಕೇಂದ್ರದ ಬಿಜೆಪಿ ಸರ್ಕಾರ ಇತ್ತೀಚಿಗೆ ಅನುಷ್ಠಾನಗೊಳಿಸಿರುವ ಅಗ್ನಿಪಥ್ ಯೋಜನೆ ಜನವಿರೋಧಿಯಾಗಿದ್ದು ದೇಶದ ಯುವಜನತೆಯ ನಿರುದ್ಯೋಗ ಸಮಸ್ಯೆಯನ್ನು…

Read More

ಸಾಗರದಲ್ಲಿ ಇಂಜೆಕ್ಷನ್‌ ಪಡೆದ 14 ಮಕ್ಕಳು ಅಸ್ವಸ್ಥ : ಸ್ಥಳಕ್ಕೆ ದೌಡಾಯಿಸಿದ ಶಾಸಕ ಹರತಾಳು ಹಾಲಪ್ಪ

ಸಾಗರ : ಜ್ವರ, ಕೆಮ್ಮು, ನೆಗಡಿಗೆ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಾಗಿದ್ದ 14  ಮಕ್ಕಳು ಅಸ್ವಸ್ಥಗೊಂಡ ಘಟನೆ ರವಿವಾರ ಸಂಜೆ ನಡೆದಿದೆ. ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳಿಗೆ ಸಂಜೆ ವೇಳೆ ಆಸ್ಪತ್ರೆಯ ದಾದಿ ಆಂಟಿಬಯೋಟಿಕ್ ಇಂಜೆಕ್ಷನ್ ನೀಡಿದ್ದಾರೆ. ಇಂಜೆಕ್ಷನ್ ಕೊಟ್ಟ ತಕ್ಷಣ ಮಕ್ಕಳು ಚಳಿ ಚಳಿ ಎಂದು ನಡುಗುತ್ತ ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗಿದೆ.  ಕರ್ತವ್ಯದಲ್ಲಿದ್ದ ವೈದ್ಯರು ಅಸ್ವಸ್ಥಗೊಂಡ 14 ಮಕ್ಕಳಲ್ಲಿ 4 ಮಕ್ಕಳನ್ನು ಆ್ಯಂಬುಲೆನ್ಸ್ ಮೂಲಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾರೆ. ಇನ್ನುಳಿದ ಮಕ್ಕಳಿಗೆ ಉಪವಿಭಾಗೀಯ ಆಸ್ಪತ್ರೆಯಲ್ಲೇ ಚಿಕಿತ್ಸೆ…

Read More

ರಿಪ್ಪನ್‌ಪೇಟೆ : ಅಕ್ರಮ ಜಾನುವಾರು ಸಾಗಾಟ : ಮೂವರ ಬಂಧನ

ರಿಪ್ಪನ್‌ಪೇಟೆ : ಅಕ್ರಮವಾಗಿ ಜಾನುವಾರು ಗಳನ್ನು ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೆರೆಗೆ  ಜಯಕರ್ನಾಟಕ ಸಂಘಟನೆ ಹಾಗೂ ಹಿಂದೂಪರ ಸಂಘಟನೆಗಳು ಎರಡು ವಾಹನಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 9 ಜಾನುವಾರುಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಹೊಸನಗರ ತಾಲೂಕಿನ ನಿವಣೆ ಗ್ರಾಮದಲ್ಲಿ ನಡೆದಿದೆ. ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಪ್ರಮುಖ ಆರೋಪಿಗಳಾದ ಕಲ್ಲುಕೊಪ್ಪ ಗ್ರಾಮದ ಕೃಷ್ಣಮೂರ್ತಿ ಮತ್ತು ಎಣ್ಣೆನೋಡ್ಲು ಗ್ರಾಮದ ಮಹಮ್ಮದ್ ಇರ್ಫಾನ್ ಮತ್ತು ಮಹಮ್ಮದ್ ವಸೀಮ್ ನನ್ನು ಬಂಧಿಸಿ 9  ಜಾನುವಾರುಗಳನ್ನು ರಕ್ಷಿಸಲಾಗಿದೆ. ಹುಂಚಾ ಕಡೆಯಿಂದ ಎರಡು ಗೂಡ್ಸ್ ಆಟೋ…

Read More

ಯಾವುದೇ ಕಾರಣಕ್ಕೂ ಮುಸ್ಲಿಂ ಮತ ಕೇಳಲ್ಲ – ಕೆ ಎಸ್ ಈಶ್ವರಪ್ಪ

ಶಿವಮೊಗ್ಗ : ನಾನು ಶಿವಮೊಗ್ಗದಲ್ಲಿ ಯಾವುದೇ ಕಾರಣಕ್ಕೂ ಮುಸ್ಲೀಂ ಜನರ ಬಳಿ ಮತ ಕೇಳುವುದಿಲ್ಲವೆಂದು ಮಾಜಿ ಶಾಸಕ ಕೆ.ಎಸ್.ಈಶ್ವರಪ್ಪ ಗುಡುಗಿದ್ದಾರೆ. ಅವರು ತಮ್ಮ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ಮುಸ್ಲೀಂ ಮತಗಳ ಮೇಲೆ ಬಿಜೆಪಿ ಅವಲಂಬಿತವಾಗಿಲ್ಲ. ನಾನಂತು ಯಾವುದೇ ಕಾರಣಕ್ಕೂ ಶಿವಮೊಗ್ಗದಲ್ಲಿ ಮುಸ್ಲೀಂ ಜನರ  ಮತವನ್ನ ಕೇಳೊಲ್ಲ. 60 ಬೂತ್ ಗಳಲ್ಲಿ ಮುಸ್ಲೀಂ ಮತಗಳು ಬಿದ್ದಿವೆ. ಆದರೆ ವಿರೋಧ ಪಕ್ಷಗಳು ಮುಸ್ಲೀಂ ಮತಗಳ ಮೇಲೆ ಕಣ್ಣಿಟ್ಟು ಅವರನ್ನ ಓಲೈಸುತ್ತಿದೆ. ಹಾಗಾಗಿ ಆರ್ ಎಸ್ ಎಸ್ ನ್ನ‌ ಬೈದರೆ…

Read More

ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಆದರ್ಶ್ ಹುಂಚದಕಟ್ಟೆ ರವರ ಮನೆಗೆ ದಿಡೀರ್ ಭೇಟಿ ನೀಡಿದ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸ್

ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ ವಿ ಶ್ರೀನಿವಾಸ್ ರವರು ಇಂದು ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರರಾದ ಆದರ್ಶ ಹುಂಚದಕಟ್ಟೆಯವರ ಮನೆಗೆ ಭೇಟಿ ನೀಡಿದ್ದರು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹುಂಚದಕಟ್ಟೆ ಯಲ್ಲಿರುವ ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಆದರ್ಶ್ ಹುಂಚದಕಟ್ಟೆರವರ ಮನೆಗೆ ದಿಡೀರ್ ಭೇಟಿ ನೀಡಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿದ್ದ ರಾಹುಲ್ ಗಾಂಧಿಯವರ ಮೇಲಿನ ಈಡಿ ವಿಚಾರಣೆ  ಅಗ್ನಿಪಥ್ ಯೋಜನೆಗಳನ್ನು ವಿರೋಧಿಸಿ ಪ್ರತಿಭಟನೆಗಳಲ್ಲಿ ತೊಡಗಿಸಿಕೊಂಡಿದ್ದ ಬಿ ವಿ ಶ್ರೀನಿವಾಸ್ ರವರ ದಿಡೀರ್ ಭೇಟಿ ಕುತೂಹಲ ಕೆರಳಿಸಿದೆ….

Read More

ಕಾಂಗ್ರೆಸ್ ಮುಖಂಡ ಅರಸಾಳಿನ ಪಿಯೂಸ್ ಡಿಸೋಜ ಇನ್ನಿಲ್ಲ …

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಗ್ರಾಮ ಪಂಚಾಯತಿ ಮಾಜಿ ಪ್ರಧಾನರು ಹಾಗೂ ಕಾಂಗ್ರೆಸ್ ಮುಖಂಡರಾದ ಪಿಯೂಸ್ ಡಿಸೋಜ ರವರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಅನಾರೋಗ್ಯದಿಂದ ಬಳಲುತಿದ್ದ ಅವರನ್ನು ಎರಡು ದಿನಗಳ ಹಿಂದೆ ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನಿನ್ನೆ ರಾತ್ರಿ 10.30ಕ್ಕೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅರಸಾಳು ಗ್ರಾಮ ಪಂಚಾಯತಿಯ ಮಾಜಿ ಪ್ರಧಾನರಾಗಿದ್ದ ಅವರು ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಖಂಡರಾಗಿದ್ದರು.ರಾಜಕಾರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಇವರು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಬಂಗಾರಪ್ಪ, ಕಾಗೋಡು ತಿಮ್ಮಪ್ಪ…

Read More

ಡಿ.ಕೆ.ಶಿವಕುಮಾರ್ ED ಪ್ರಕರಣ: ಧರ್ಮಸ್ಥಳದಲ್ಲಿ ಮುಡಿಕೊಟ್ಟು ಹರಕೆ ತೀರಿಸಿದ ಸೂಡೂರು ಶಿವಣ್ಣ

 ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಇಡಿ ಪ್ರಕರಣದಲ್ಲಿ ಬಂಧನಕ್ಕೊಳಗಾದ ಸಂದರ್ಭದಲ್ಲಿ ಅವರು ಬಿಡುಗಡೆಯಾಗಿ ಬಂದರೆ ತನ್ನ ಮುಡಿಯನ್ನು ಧರ್ಮಸ್ಥಳದ ಮಂಜುನಾಥ ಸ್ವಾಮಿಗೆ ಕೊಡುವುದಾಗಿ ಹರಕೆ ಕಟ್ಟಿಕೊಂಡಿದ್ದ ಅಭಿಮಾನಿಯೊಬ್ಬರು ಇಂದು ತನ್ನ ಮುಡಿಕೊಡುವ ಮೂಲಕ ಹರಕೆ ತೀರಿಸಿದ ವಿಶೇಷ ಪ್ರಸಂಗ ನಡೆದಿದೆ. ಈ ರೀತಿ ಮಂಜುನಾಥಸ್ವಾಮಿಗೆ ಹರಕೆ ಮಾಡಿಕೊಂಡವರು ಬೇರೆ ಯಾರು ಅಲ್ಲ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಸಂಘಟನಾ ಕಾರ್ಯದರ್ಶಿ ಸೂಡೂರು ಶಿವಣ್ಣ(ಶಿವಕುಮಾರ್) ಕೊವಿಡ್ ಮುಂತಾದ ಕಾರಣಕ್ಕಾಗಿ ಹರಕೆ ತೀರಿಸುವುದು ಹಾಗೇ ಬಾಕಿ ಉಳಿಸಿಕೊಂಡು ಬಿಟ್ಟಿದ್ದೆ. ಮೊನ್ನೆ…

Read More

ರಿಪ್ಪನ್‌ಪೇಟೆ : ವಿಷ ಸೇವಿಸಿ ಗೃಹಣಿ ಆತ್ಮಹತ್ಯೆ

ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯ ನಿವಾಸಿ ರಫೀಕ್‌ ಎಂಬುವವರ ಪತ್ನಿ ಬುಶೀರಾ (33) ಜೀವನದಲ್ಲಿ ಜಿಗುಪ್ಸೆಗೊಂಡು ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.  ಶುಕ್ರವಾರ ಬೆಳಿಗ್ಗೆ ಖಿನ್ನತೆಗೆ ಒಳಗಾದ ಅವರು ಮನೆಯಲ್ಲಿ ಯಾರು ಇಲ್ಲದೆ ವೇಳೆ ಮನೆಯ ಸುತ್ತಾಮುತ್ತ ಬೆಳೆದಿದ್ದ ಕಳೆ ತೆಗೆಯಲು ತಂದಿಟ್ಟಿದ್ದ ಕಳೆನಾಶಕ ಸೇವಿಸಿದ್ದಾರೆ ಎನ್ನಲಾಗಿದೆ.   ತಕ್ಷಣವೇ ಅವರನ್ನು ಶಿವಮೊಗ್ಗ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ನಾರಾಯಣ ಹೃದಯಾಲಯಕ್ಕೆ ದಾಖಲು ಮಾಡಿದರೂ, ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಸಾವನ್ನಪ್ಪಿದ್ದಾರೆ. ಮೃತರಿಗೆ ‍ಪತಿ, ಪುತ್ರ ಹಾಗೂ…

Read More