ಕನ್ನಡದ ಪ್ರಖ್ಯಾತ ನಟ ದಿಗಂತ್ ಸ್ಥಿತಿ ಗಂಭೀರ : ಕೆಲವೇ ಗಂಟೆಗಳಲ್ಲಿ ಗೋವಾದಿಂದ ಬೆಂಗಳೂರಿಗೆ ಏರ್ ಲಿಫ್ಟ್
ಮುಂಗಾರು ಮಳೆ, ಗಾಳಿಪಟ, ಮನಸಾರೆ ಸೇರಿದಂತೆ ಹಲವು ಯಶಸ್ವಿ ಚಿತ್ರಗಳಲ್ಲಿ ನಟಿಸಿದ್ದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ನಟ ದಿಗಂತ್ ಅವರಿಗೆ ಚಿತ್ರೀಕರಣದ ವೇಳೆ ಅಪಘಾತವಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟ ದಿಗಂತ್ ಗೋವಾದಲ್ಲಿ ಪ್ರವಾಸದಲ್ಲಿದ್ದಾಗ ಈ ಘಟನೆ ನಡೆದಿದ್ದು, ಗೋವಾದಲ್ಲಿ ನಟ ದಿಗಂತ್ ತನ್ನ ಆಪ್ತರು ಹಾಗೂ ಗೆಳೆಯರೊಡನೆ ಪ್ರವಾಸಕ್ಕೆ ತೆರಳಿದ್ದರು. ಟ್ರೆಕ್ಕಿಂಗ್ ಸೇರಿದಂತೆ ಇನ್ನಿತರೆ ಸಾಹಸ ಕ್ರೀಡೆಗಳಲ್ಲಿ ಅವರು ತೊಡಗಿಕೊಂಡಿದ್ದರು. ಸಾಹಸ ಕ್ರೀಡೆಗಳನ್ನು ಆಡುವ ವೇಳೆ ಅಚಾನಕ್ಕಾಗಿ ದಿಗಂತ್‌ರ ಕತ್ತಿಗೆ ತೀವ್ರ ಪೆಟ್ಟಾಗಿದೆ…