ರಿಪ್ಪನ್‌ಪೇಟೆ ಆರೋಗ್ಯ ಕೇಂದ್ರದಲ್ಲಿ 108 ಆಂಬುಲೆನ್ಸ್ ಸೌಲಭ್ಯವಿಲ್ಲದೆ ನರಳಾಡಿದ ಅಪಘಾತಗೊಂಡ ಗಾಯಾಳುಗಳು :
ಹೊಸನಗರ ತಾಲೂಕಿನ ಅತಿದೊಡ್ಡ ಗ್ರಾಮ ಪಂಚಾಯಿತಿ ಎಂದು ಹೆಗ್ಗಳಿಕೆಯನ್ನು ಹೊಂದಿರುವ ರಿಪ್ಪನ್ ಪೇಟೆ ಪಟ್ಟಣದ ಆರೋಗ್ಯ ಕೇಂದ್ರದಲ್ಲಿ 108 ಆಂಬುಲೆನ್ಸ್ ಸೌಲಭ್ಯವಿಲ್ಲದೆ ಕಳೆದ ಮೂರು ತಿಂಗಳುಗಳಾಗಿವೆ. ಈ ಬಗ್ಗೆ ಸ್ಥಳೀಯ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಸಂಬಂಧ ಪಟ್ಟ ಹಿರಿಯ ಅಧಿಕಾರಿಗಳಿಗೆ ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಹಲವಾರು ಬಾರಿ ಸಾರ್ವಜನಿಕರು ಮನವಿ ಸಲ್ಲಿಸಿದರೂ ಸಹ ಯಾವುದೇ ರೀತಿಯ ಸ್ಪಂದನೆಯನ್ನು ನೀಡಿರಲಿಲ್ಲ. ರಸ್ತೆ ಅಪಘಾತದಲ್ಲಿ ಬೈಕುಗಳ ಮುಖಾಮುಖಿ ಡಿಕ್ಕಿಯಿಂದ ತಂದೆ ಸ್ಥಳದಲ್ಲೇ ಮೃತಪಟ್ಟರೆ ಬದುಕುಳಿದ ಮಗನಿಗೆ…