ಕಿಮ್ಮನೆ ರತ್ನಾಕರ್ ನೇತ್ರತ್ವದ ಪಾದಯಾತ್ರೆಗೆ ಬೆಂಬಲ ಸೂಚಿಸಿದ ಮಂಜುನಾಥ್ ಗೌಡ :ಕಿಮ್ಮನೆ & ಆರ್ ಎಂಎಂ ಅಭಿಮಾನಿಗಳಲ್ಲಿ ಚಿಮ್ಮಿದ ಉತ್ಸಾಹ
ತೀರ್ಥಹಳ್ಳಿ : ರಾಜ್ಯ ಸರ್ಕಾರದ ಪಠ್ಯ ಪರಿಷ್ಕರಣೆ ಎಡವಟ್ಟುಗಳ ಬಗ್ಗೆ ರಾಜ್ಯಾದ್ಯಂತ ಪ್ರತಿಭಟನೆ ನೆಡೆಯುತ್ತಿದ್ದು ಸಾಹಿತ್ಯದ ಬಗ್ಗೆ ಸರ್ಕಾರ ತೋರಿರುವ ಅಸಡ್ಡೆಯನ್ನು ಖಂಡಿಸಿ ಜೂನ್ 15 ರ ಬುಧವಾರ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ನೆಡೆಯುವ ಕುಪ್ಪಳ್ಳಿಯ ಕವಿಶೈಲದಿಂದ ಪಾದಯಾತ್ರೆಗೆ ನಾನು ಸಹ ಬೆಂಬಲ ಕೊಡುತ್ತಿದ್ದೇನೆ ಎಂದು ತಿಳಿಸಿದರು. ಪಟ್ಟಣದ ಬೆಟ್ಟಮಕ್ಕಿಯ ತಮ್ಮ ಮನೆಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ರಾಷ್ಟ್ರಕವಿ ಎಂದೇ ಹೆಸರುವಾಸಿಯಾಗಿರುವ ಕುವೆಂಪು ಅವರ ಗೀತೆಯನ್ನು ನಾವೆಲ್ಲರೂ ನಾಡಗೀತೆಯಾಗಿ ಒಪ್ಪಿಕೊಂಡಿದ್ದೆವೆ. ಆದರೆ ಅಧಿಕೃತ…