ಮಾದಾಪುರ ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ :
ಹೊಸನಗರ ತಾಲೂಕಿನ ಮಾದಾಪುರ ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ತಾಲೂಕು ವೃಕ್ಷ ಜಾಗೃತಿ ಸಂಘ ಮತ್ತು ಶನಿಪರಮೇಶ್ವರ ಯುವಕ ಸಂಘದ ಜಂಟಿ ಆಶ್ರಯದಲ್ಲಿ ನಡೆಸಲಾಯಿತು. ಮಾದಪುರ ಗ್ರಾಮದಲ್ಲಿ ನಡೆದ ಕಾರ್ಯಕ್ರಮವನ್ನು ರೇವಣಪ್ಪ ಸ್ವರಚಿತ ಪರಿಸರ ಗೀತೆ ಹಾಡುವ ಮೂಲಕ ಉದ್ಘಾಟಿಸಿದರು.ಈ ಸಂಧರ್ಭದಲ್ಲಿ ಊರಿನ ಹಿರಿಯರು ಹಾಗೂ ಗ್ರಾಪಂ ಮಾಜಿ ಸದಸ್ಯರಾದ ಕೆ ಎಲ್ ವಿಜಯ್ ಮಾತನಾಡಿ ಪ್ರಸ್ತುತ ದಿನಗಳಲ್ಲಿ ಯುವ ಪೀಳಿಗೆಯು ಪರಿಸರ ಉಳಿಸುವ ನಿಟ್ಟಿನಲ್ಲಿ ಒಂದೊಂದು ಗಿಡ ನೆಡುವ ಮೂಲಕ ಗಾಂಧೀಜಿ ಕಂಡ ಕನಸು…