Headlines

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹಳ್ಳಿ ಮಕ್ಕಳ ಅದ್ಭುತ ಸಾಧನೆ…ವಿಜ್ಞಾನ ವಿಭಾಗದಲ್ಲಿ 586 ಅಂಕ ಪಡೆದ ವಿದ್ಯಾರ್ಥಿ

ರಿಪ್ಪನ್ ಪೇಟೆ : ಈ ಬಾರಿ  ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ  ಹಳ್ಳಿಗಾಡಿನ ಪ್ರದೇಶದ ವಿದ್ಯಾರ್ಥಿಗಳು ಅದ್ಭುತ ಸಾಧನೆಗಳನ್ನು ಮಾಡಿದ್ದಾರೆ.

ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್ ವಿಜ್ಞಾನ ವಿಭಾಗದ  ವಿದ್ಯಾರ್ಥಿ ಹರ್ಷ 586 ಅಂಕಗಳನ್ನು ಪಡೆದಿದ್ದು. ಅಮೃತ ಸರಕಾರಿ  ಪದವಿ ಪೂರ್ವ ಕಾಲೇಜು ಶೇಕಡ 84 ಫಲಿತಾಂಶವನ್ನು ಪಡೆದರೆ. ಸರ್ಕಾರಿ ಪದವಿ ಪೂರ್ವ ಕಾಲೇಜು ರಿಪ್ಪನ್ ಪೇಟೆ  75.37 ಫಲಿತಾಂಶ ಪಡೆದಿದೆ.

 ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ  ಹರ್ಷ. ಡಿ. ಟಿ.586ಅಂಕಗಳನ್ನು ಪಡೆದಿದ್ದಾನೆ.ವಾಣಿಜ್ಯ ವಿಭಾಗದಲ್ಲಿ ಕುಮಾರಿ  ನಾಗವೇಣಿ 570 ಅಂಕಗಳನ್ನು ಪಡೆದಿದ್ದಾರೆ.  ಕಲಾವಿಭಾಗದಲ್ಲಿ ಕುಮಾರಿ ಸಂಧ್ಯಾ 568ಅಂಕಗಳನ್ನು ಪಡೆದಿದ್ದಾರೆ.

 ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಮೃತ ಸರಕಾರಿ ಪದವಿ ಪೂರ್ವ ಕಾಲೇಜಿನ 179ವಿದ್ಯಾರ್ಥಿಗಳು  ಪರೀಕ್ಷೆಗೆ ಹಾಜರಾಗಿದ್ದರು. 149ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅತ್ಯುನ್ನತ ಶ್ರೇಣಿ.31ಪ್ರಥಮ ದರ್ಜೆ83.  ದ್ವಿತೀಯ ದರ್ಜೆ33  ಹಾಗೂ 3 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

 ಉತ್ತಮ ಅಂಕಗಳನ್ನು ಪಡೆದು ಅಮೃತ ಕಾಲೇಜಿಗೆ  ಕೀರ್ತಿ ತಂದ ವಿದ್ಯಾರ್ಥಿಗಳಿಗೆ. ಪೋಷಕರುಗಳಿಗೆ. ಕಾಲೇಜಿನ ಪ್ರಾಚಾರ್ಯ ಮೊಹಮ್ಮದ್ ನಜ್ ಹತ್ ಉಲ್ಲಾ ಹಾಗೂ ಉಪನ್ಯಾಸಕ ವೃಂದಕ್ಕೆ  ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಾಜ್ಯ ಗೃಹಮಂತ್ರಿ ಆರಗ ಜ್ಞಾನೇಂದ್ರ ಹಾಗೂ ಕಾರ್ಯಧ್ಯಕ್ಷ ರಾದ  ಟಿ. ಡಿ ಸೋಮಶೇಖರ್  ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರುಗಳು . ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು, ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

 ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ  ರಿಪ್ಪನ್ ಪೇಟೆಯ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇಕಡ 75ಫಲಿತಾಂಶ ಬಂದಿದೆ.
ವಿಜ್ಞಾನ ವಿಭಾಗದಲ್ಲಿ.46  ವಾಣಿಜ್ಯ ವಿಭಾಗದಲ್ಲಿ 73  ಕಲಾವಿಭಾಗದಲ್ಲಿ 83 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ವಿಜ್ಞಾನ ವಿಭಾಗದಲ್ಲಿ ಅಶ್ವಿನಿ ಎಸ್.550ವಾಣಿಜ್ಯ ವಿಭಾಗದಲ್ಲಿ  ಅಭಿಷೇಕ್ ಎಂ. ವೈ.561. ಮಮತಾ ಕೆ.561ಕಲಾವಿಭಾಗದಲ್ಲಿ  ಹರ್ಷ. ಎಸ್. ಎನ್.551ಅತಿ ಹೆಚ್ಚು ಅಂಕಗಳನ್ನು ಪಡೆದಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು ವಿದ್ಯಾರ್ಥಿಗಳು ಹಾಜರಾಗಿದ್ದು. 268ವಿದ್ಯಾರ್ಥಿಗಳು 202ಉತ್ತೀರ್ಣರಾಗಿದ್ದಾರೆ.

ಉತ್ತಮ ಫಲಿತಾಂಶಗಳನ್ನು ನೀಡಿ ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ. ಕಾಲೇಜಿನ ಪ್ರಾಚಾರ್ಯರಾದ ಎ ಮಂಜುನಾಥ್ ಹಾಗೂ ಉಪನ್ಯಾಸಕ ವೃಂದಕ್ಕೆ ಮತ್ತು ಪೋಷಕರುಗಳಿಗೆ   ರಿಪ್ಪನ್ ಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷರಾದ  ಹರತಾಳು ಹಾಲಪ್ಪ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರುಗಳು. ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಉಪಾಧ್ಯಕ್ಷರು. ಸದಸ್ಯರು ಹಾಗೂ ಗ್ರಾಮಸ್ಥರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *