POSTMAN NEWS

ನೈಜ ಸುದ್ದಿ ನೇರ ಬಿತ್ತರ..

ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿನಿ ಕೆ ಎಂ ಮಾನಸ ರವರಿಗೆ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ಮಾನಸಳಿಗೆ ಭಾಷಣ  ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ದೊರೆತಿದೆ.

ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಹೊಸನಗರದಲ್ಲಿ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳ ಸಾಗಾಣಿಕೆ ವಿರುದ್ಧ ಜಾಗೃತಿ ಮಾಸಾಚರಣೆ ಅಂಗವಾಗಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಹೊಸನಗರ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ  ರಿಪ್ಪನ್ ಪೇಟೆಯ  ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮಾನಸ.ಕೆ.ಎಂ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. 


ಸೋಮವಾರ ಶಿವಮೊಗ್ಗದಲ್ಲಿ ಜಿಲ್ಲಾ ರಕ್ಷಣಾ ಇಲಾಖೆಯ ವತಿಯಿಂದ  ಗೌರವಿಸಿ ಸನ್ಮಾನಿಸಲಾಯಿತು

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.