w
Headlines
Home » ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ : ಮಾಜಿ ಸಚಿವ ಈಶ್ವರಪ್ಪರಿಗೆ ಬಿಗ್ ರಿಲೀಫ್

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ : ಮಾಜಿ ಸಚಿವ ಈಶ್ವರಪ್ಪರಿಗೆ ಬಿಗ್ ರಿಲೀಫ್

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪರಿಗೆ ಕ್ಲೀನ್ ಚೀಟ್ ಸಿಕ್ಕ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಮಾಜಿ ಸಚಿವ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಈ ಸಂಬಂಧ ನಾನು ಮೊದಲೇ ಹೇಳಿದ್ದೆ ಈ ಪ್ರಕರಣದಿಂದ ಮುಕ್ತನಾಗಿ ಬರುತ್ತೇನೆ ಎಂದು ಮನೆ ದೇವರಾದ ತಾಯಿ ಚೌಡೇಶ್ವರಿ ಆಶೀರ್ವಾದದಿಂದ ನಾನು ಗೆದ್ದು ಬರುತ್ತೇನೆ ಎಂದಿದ್ದೆ. ಇದೀಗ ಹಾಗೆ ಆಗಿದೆ. ದೇವರು ನನ್ನ ಪರವಾಗಿರುವುದಕ್ಕೆ ಸಂತೋಷವಾಗಿದೆ ಎಂದರು.

ನನ್ನಿಂದಾಗಿ ನನ್ನ ಪಕ್ಷದ ಹಿರಿಯರು ಮತ್ತು ಕಾರ್ಯಕರ್ತರಿಗೆ ಮುಜುಗರವಾಗಿತ್ತಲ್ಲ ಎಂಬ ನೋವಿತ್ತು. ಏನೂ ತಪ್ಪು ಮಾಡದ ನನ್ನ ಮೇಲೆ ಬಂದ ಆರೋಪದಲ್ಲಿ ನನ್ನ ಪಾತ್ರವಿಲ್ಲ ಎಂದು ಮೊದಲೇ ಹೇಳಿದ್ದೆ. ಈ ವಿಚಾರದಲ್ಲಿ ಸಂತೋಷ್ ಪಾಟೀಲ್ ಪತ್ನಿಗೆ ಯಾರೋ ಪ್ರಚೋದಿಸಿ ರಾಜ್ಯಪಾಲರಿಗೆ ದೂರು ಕೊಡಿಸಿದ್ದಾರೆ ಎಂದು ಅಭಿಪ್ರಾಯ ಪಟ್ಟರು.



ಇನ್ನೂ ಇದೇ ವೇಳೆ ಪಕ್ಷ ನೀಡುವ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ ಎಂದ ಮಾಜಿ ಸಚಿವರು ನಾನು ಯಾವುದೇ ಹುದ್ದೆ ಬಯಸಿಲ್ಲ. ಬಯಸುವುದೂ ಇಲ್ಲ. ಪಕ್ಷದ ನಾಯಕರ ತೀರ್ಮಾನಕ್ಕೆ ನಾನು ಬದ್ಧ. ನಾನು ಯಾರಿಗೂ ಹೆದರುವ ಪ್ರಶ್ನೆಯೇ ಇಲ್ಲ .ಪಕ್ಷದ ಹಿರಿಯರ, ಮಠಾಧೀಶರ ಆಶೀರ್ವಾದ ನನಗೆ ಇದೆ ಎಂದರು

Leave a Reply

Your email address will not be published. Required fields are marked *

Newsmatic - News WordPress Theme 2026. Powered By BlazeThemes.
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.