ನಗರ ಪ್ರದೇಶಗಳಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ಸ್ಥಳವನ್ನು ಗುರುತಿಸಿ ಅಪರಾಧಿಗಳನ್ನ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡುವ ಮೂಲಕ ಕಣ್ಣು ಮುಚ್ಚಿಕೊಂಡು ಆಡಳಿತ ನಡೆಸುತ್ತಿರುವ ರಾಜ್ಯ ಸರ್ಕಾರಕ್ಕೆ ಎಚ್ಚರಿಸುವ ಕೆಲಸ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಮಾಡಿದ್ದಾರೆ.
ಹೌದು, ಕೇವಲ ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ರೀತಿಯ ಬೆಳೆಗಳ ನಡುವೆ ಗೌಪ್ಯವಾಗಿ ಬೆಳೆಯುತ್ತಿರುವ ಮತ್ತು ಮಾರಾಟ ಮಾಡುವ ವಿಷಯ ಕೇಳಲಾಗುತ್ತಿತ್ತು. ಆದರೀಗ ಇದು ನಗರ ಪ್ರದೇಶದವರೆಗೂ ಹಬ್ಬಿರುವುದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ತೆಹಚ್ಚಿದ್ದಾರೆ.
ಬೆಂಗಳೂರಿನ ಆರ್ ಟಿ ನಗರದ ಅವರ ನಿವಾಸದ ಆಸುಪಾಸಿನಲ್ಲಿಯೇ ಬೆಳೆದಿದ್ದನ್ನು ಗಮನಿಸಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದರು. ಪೊಲೀಸ್ ಅಧಿಕಾರಿಗಳು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು, ಕೇವಲ ಗ್ರಾಮೀಣ ಪ್ರದೇಶಗಳಲ್ಲಿ ಗಾಂಜಾ ಬೆಳೆಯುವ ಅಥವಾ ಮಾರಾಟ ಮಾಡುವುದನ್ನ ಕೇಳಿ ಬರುತ್ತಿತ್ತು ಆದರೀಗ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿಯೂ ಆಶ್ಚರ್ಯದ ಸಂಗತಿಯೆಂದರೆ ತಪ್ಪಾಗಲಾರದು. ಯುವ ಸಮುದಾಯವನ್ನು ಹಾಳು ಮಾಡುವ ಗಾಂಜಾ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿದ್ದ ಪೋಲೀಸ್ ಇಲಾಖೆ ಇಲ್ಲಿ ಗಾಂಜ ಬೆಳೆಯುವವರಿಗೆ ಸಹಕಾರ ನೀಡುವ ಎಲ್ಲಾ ಲಕ್ಷಣಗಳು ಕಂಡುಬರುತ್ತಿವೆ.
ಬೆಂಗಳೂರಿನಂತಹ ಮಹಾನಗರದಲ್ಲಿಯೇ ಈ ರೀತಿ ರಾಜಾರೋಷವಾಗಿ ಗಾಂಜಾವನ್ನು ಬೆಳೆಯುತ್ತಿದ್ದಾರೆ ಎಂದರೆ ರಾಜ್ಯ ಸರ್ಕಾರದ ಗೃಹ ಸಚಿವರೇನು ಕಣ್ಣು ಮುಚ್ಚಿಕೊಂಡಿದ್ದಾರೆಯೇ ? ರಾಜ್ಯದ ಆಡಳಿತ ನಡೆಸುತ್ತಿರುವವರೇ ಇದಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ? ಎಂಬ ಪ್ರಶ್ನೆ ಮೂಡುವುದರಲ್ಲಿ ಅನುಮಾನವಿಲ್ಲ ಎಂದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್