w
Headlines
Home » ಅಪಘಾತಕ್ಕೀಡಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಬೈಕ್ ಸವಾರ : ಮಾನವೀಯತೆ ಮೆರೆದ ಶಾಸಕ ಹರತಾಳು ಹಾಲಪ್ಪ

ಅಪಘಾತಕ್ಕೀಡಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಬೈಕ್ ಸವಾರ : ಮಾನವೀಯತೆ ಮೆರೆದ ಶಾಸಕ ಹರತಾಳು ಹಾಲಪ್ಪ

ಬೈಕ್ ಸವಾರನೊಬ್ಬ ಅಪಘಾತವಾಗಿ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುವಾಗ, ಅದೇ ದಾರಿಯಲ್ಲಿ ಸಾಗುತ್ತಿದ್ದ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ  ಅಪಘಾತಕ್ಕೀಡಾದ ವ್ಯಕ್ತಿಯನ್ನು ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದಿದ್ದಾರೆ.

ಇಂದು ಹೊಸನಗರ ತಾಲ್ಲೂಕಿನ ಪ್ರವಾಸದಲ್ಲಿದ್ದ ಶಾಸಕ ಹರತಾಳು ಹಾಲಪ್ಪರವರು ಕೊಡಚಾದ್ರಿ ಕಾಲೇಜಿನ ಮುಂಭಾಗ ತೆರಳುತ್ತಿದ್ದಾಗ ಬೈಕ್ ಅಪಘಾತವಾಗಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಬಿದ್ದಿದ್ದರು.ಕೂಡಲೇ ವಾಹನ ನಿಲ್ಲಿಸಿ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯ ಸಹಾಯಕ್ಕೆ ತೆರಳಿದ ಶಾಸಕರು ಅಪಘಾತಕ್ಕೀಡಾದ ವ್ಯಕ್ತಿಗೆ ಧೈರ್ಯ ಹೇಳಿ ,
ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಿ ಸೂಕ್ತ ಚಿಕಿತ್ಸೆ ಕೊಡಿಸಿದರು.

ಬೈಕ್ ಸವಾರ ಹೊಳೆಕೇವಿ ನಿವಾಸಿಯಾಗಿದ್ದು ಕೂಡಲೇ ಕುಟುಂಬಕ್ಕೆ ಮಾಹಿತಿ ನೀಡಿ ಧೈರ್ಯ ತುಂಬಿದರು

ಶಾಸಕರ ಈ ಕಾರ್ಯ ವೈಖರಿಗೆ ಸಾರ್ವಜನಿಕರು ಪ್ರಶಂಸೆಯ ಮಾತುಗಳನ್ನಾಡಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.