ಆಗುಂಬೆ ಘಾಟಿಯಲ್ಲಿ ವ್ಯಾಪಕ ಮಳೆಯಾಗಿರುವ ಹಿನ್ನಲೆಯಲ್ಲಿ ತಿರುವಿನಲ್ಲಿ ಮಣ್ಣುಕುಸಿದಿದ್ದು, ರಸ್ತೆಗೆ ಅಡ್ಡಲಾಗಿ ಭಾರೀ ಗಾತ್ರದ ಮರಬಿದ್ದಿದೆ. ಪರಿಣಾಮ ಸಂಚಾರ ಸಂಪೂರ್ಣ ಬಂದ್ ಆಗಿದೆ.
ಈ ಮಾರ್ಗದಲ್ಲಿ ಹೋದವರು ಸಂಚಾರ ಬಂದ್ ಆಗಿರುವ ಹಿನ್ನಲೆಯಲ್ಲಿ ವಾಪಾಸ್ ಆಗುತಿದ್ದಾರೆ. ಆಗುಂಬೆ ಘಾಟಿ ಕೆಳಗೆ ಸೋಮೇಶ್ವರ ಚೆಕ್ಪೋಸ್ಟ್ ಬಳಿಯಲ್ಲಿಯೇ ವಾಹನಗಳನ್ನು ತಡೆಯಲಾಗುತ್ತಿದೆ.
ಮೇಲ್ಬಾಗ ಆಗುಂಬೆ ಘಾಟಿ ಚೆಕ್ಪೋಸ್ಟ್ ಬಳಿಯೇ ವಾಹನಗಳನ್ನು ವಾಪಸ್ ಕಳುಹಿಸಲಾಗುತ್ತಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.
ವೀಡಿಯೋ ಇಲ್ಲಿ ವೀಕ್ಷಿಸಿ👇