ಆಗುಂಬೆ ಘಾಟಿಯಲ್ಲಿ ಗುಡ್ದ ಕುಸಿತ : ಮೂರು ಬದಲಿ ಮಾರ್ಗ ವ್ಯವಸ್ಥೆ!!!!!ಯಾವ್ಯಾವುದು ಗೊತ್ತಾ??? ಈ ಸುದ್ದಿ ನೋಡಿ

ತೀರ್ಥಹಳ್ಳಿ : ಆಗುಂಬೆ ಘಾಟಿಯ  10ನೇ ತಿರುವಿನಲ್ಲಿ ಗುಡ್ಡಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಬದಲಿ
ಮಾರ್ಗ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ (DC) ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ.

ಭೂ ಕುಸಿತದ ಮಣ್ಣು ಮತ್ತು ಮರಗಳನ್ನು ತೆರವುಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಜುಲೈ 12ರ ಮುಂಜಾನೆ 8ಗಂಟೆಯವರೆಗೆ ನಿರ್ಬಂಧಿಸಲಾಗಿದೆ. ಆ ಬಳಿಕ ಜುಲೈ 30ರವರೆಗೆ ಈ ಮಾರ್ಗದಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.

ಮೂರು ಬದಲಿ ಮಾರ್ಗ:

ಮಾರ್ಗ 1: ತೀರ್ಥಹಳ್ಳಿ – ಕೊಪ್ಪ- ಶೃಂಗೇರಿ- ಕಾರ್ಕಳ- ಮಂಗಳೂರು.

ಮಾರ್ಗ 2 : ತೀರ್ಥಹಳ್ಳಿ- ಆಗುಂಬೆ-ಶೃಂಗೇರಿ- ಕಾರ್ಕಳ- ಮಂಗಳೂರು.

ಮಾರ್ಗ 3 : ತೀರ್ಥಹಳ್ಳಿ-ಮಾಸ್ತಿಕಟ್ಟೆ- ಕುಂದಾಪುರ

ಈ ಮಾರ್ಗವನ್ನು ವಾಹನ ಸಂಚಾರಕ್ಕೆ ಬಳಸುವಂತೆ ಅವರು ತಿಳಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

8 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

9 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

2 days ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

2 days ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

2 days ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago