Headlines

ಆಗುಂಬೆ ಘಾಟಿಯಲ್ಲಿ ಮತ್ತೇ ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ಮರಗಳು: ಸಂಚಾರ ಸಂಪೂರ್ಣ ಅಸ್ತವ್ಯಸ್ತ

ಆಗುಂಬೆ : ಶಿವಮೊಗ್ಗ ಜಿಲ್ಲೆಯ ಗಡಿ ಭಾಗವಾದ ಆಗುಂಬೆ ಘಾಟಿಯಲ್ಲಿ ಮತ್ತೆ ಬೃಹತ್ ಗಾತ್ರದ ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದೂ, ಸಂಚಾರ ಅಸ್ತವ್ಯಸ್ತವಾಗಿದೆ.


ಇತ್ತೀಚೆಗೆ ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರವನ್ನು ಬಂದ್ ಮಾಡಲಾಗಿತ್ತು ಹಾಗೂ ನೆನ್ನೆಯಿಂದ ಲಘ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.

ಮರ ಬಿದ್ದು ಗಂಟೆಗಳಾದರೂ ಇನ್ನೂ ತೆರವು ಕಾರ್ಯಾಚರಣೆ ಪ್ರಾರಂಭವಾಗಿಲ್ಲ,ಸುಮಾರು 4 ರಿಂದ 5 ಕಿಮೀ ರಸ್ತೆಯಲ್ಲಿ ಲಘು ವಾಹನಗಳಿದ್ದು ಸಂಬಂಧಪಟ್ಟ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಹಿಡಿಶಾಪ ಹಾಕುತಿದ್ದಾರೆ.

ರೋಗಿಗಳನ್ನು ಮಣಿಪಾಲ, ಮಂಗಳೂರು, ಉಡುಪಿ ಆಸ್ಪತ್ರೆಗಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್ ಮೂಲಕ ಸಂಚಾರ ಮಾಡಲು ಆಗದೇ ಪ್ರಯಾಣಿಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಹಿಡಿಶಾಪ ಹಾಕುತಿದ್ದಾರೆ.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇


About The Author

Leave a Reply

Your email address will not be published. Required fields are marked *