ರಿಪ್ಪನ್ ಪೇಟೆ : ಅರಸಾಳು ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಅರಸಾಳು ಹೊನ್ನಪ್ಪ ಎಂ. ಬಿ.(76) ಇಂದು ಸಂಜೆ 4 ಗಂಟೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಘಾತದಿಂದ ನಿಧನರಾಗಿದ್ದಾರೆ.
ಕಳೆದ ಕೆಲವು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಹೊನ್ನಪ್ಪ ರವರು ಪಕ್ಷದ ಕಾರ್ಯ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದರು.
ಮೃತರು ಪತ್ನಿ.ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ನಾಳೆ ಮಧ್ಯಾಹ್ನ ಅರಸಾಳು ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಂತಾಪ : ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹೊನ್ನಪ್ಪರವರ ನಿಧನಕ್ಕೆ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ಶಿವಮೊಗ್ಗ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್. ಎಪಿಎಂಸಿ ಮಾಜಿ ಅಧ್ಯಕ್ಷ ಈಶ್ವರಪ್ಪ ಗೌಡ. ಸಹಕಾರ ಬ್ಯಾಂಕಿನ ನಿರ್ದೇಶಕ ಎಂ ಎಂ ಪರಮೇಶ್ ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಆಸಿಫ್ ಭಾಷಾ ಸಾಬ್, ಡಿ ಇ ಮಧುಸೂದನ್, ಗವಟೂರು ಗಣಪತಿ, ಮುಖಂಡರುಗಳಾದ ಅರಸಾಳು ದಿನೇಶ್, ಶ್ರೀಧರ್, ಸಂತಾಪ ಸೂಚಿಸಿದ್ದಾರೆ.