w
Headlines
Home » ಕಾರು ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿದ ಕಾರು : ಚಾಲಕ ಸ್ಥಳದಲ್ಲಿಯೇ ಸಾವು

ಕಾರು ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿದ ಕಾರು : ಚಾಲಕ ಸ್ಥಳದಲ್ಲಿಯೇ ಸಾವು

ತೀರ್ಥಹಳ್ಳಿ ಸಮೀಪದ ಮುಡುಬ ಬಳಿ ಸ್ವಿಫ್ಟ್ ಕಾರ್ ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.


ತರೀಕೆರೆ ನಿವಾಸಿ ವಕೀಲರಾದ ಸಂಪತ್ ಕುಮಾರ್ (50) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮುಡುಬಾ ಹತ್ತಿರದ ತಿರುವಿನಲ್ಲಿ ಅತೀ ವೇಗದಿಂದ ಚಲನೆ ಮಾಡುತ್ತಿದ್ದ ಸ್ವಿಫ್ಟ್ ಡಿಜ಼ೈರ್ ಕಾರ್ ಚಾಲಕನ ನಿಯಂತ್ರಣಕ್ಕೆ ಸಿಗದೇ ತೋಟಕ್ಕೆ ಹಾರಿದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಟ್ಟಿದ್ದಾರೆ.


ಸಂಪತ್ ಕುಮಾರ್ ರವರ ಮಗನಿಗೆ ಪಡುಬಿದ್ರೆ ಸಮೀಪದ ಆಳ್ವಾಸ್ ಕಾಲೇಜಿನಲ್ಲಿ ದಾಖಲಾತಿ ಮಾಡಿಸಿ ಹಿಂದಿರುಗುತ್ತಿರುವಾಗ ಈ ಘಟನೆ ನಡೆದಿದೆ.


ಘಟನೆಯಲ್ಲಿ ಸಂಪತ್ ಕುಮಾರ್ ರವರ ಪತ್ನಿಗೆ ಗಂಭೀರವಾದ ಗಾಯಗಳಾಗಿದ್ದು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.ಮಗನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.