Headlines

ಕೊಡಚಾದ್ರಿ ಬೆಟ್ಟಕ್ಕೆ ಹೊರಟಿದ್ದ ಟಿಟಿ – ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ

ಬೆಂಗಳೂರಿನಿಂದ ಮಲೆನಾಡಿನ ಸುಂದರ ವಿಹಾರ ತಾಣವಾದ ಹೊಸನಗರ ತಾಲೂಕಿನ ಕೊಡಚಾದ್ರಿ ಬೆಟ್ಟಕ್ಕೆ ತೆರಳುತ್ತಿದ್ದ ಪ್ರವಾಸಿಗರು ಇದ್ದ ಟೆಂಪೋ ಟ್ರಾವಲರ್ ವಾಹನ ಹೊಸನಗರ ಸಮೀಪದ ಜಯನಗರದ ಚಾಮುಂಡಿಬೆಟ್ಟ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶನಿವಾರ ನಡೆದಿದೆ.



ಟಿಟಿ ವಾಹನ ಮಗುಚಿಬಿದ್ದ ಪರಿಣಾಮ ಅದರಲ್ಲಿದ್ದ ಪ್ರವಾಸಿಗರು ಸಣ್ಣ-ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಒಬ್ಬ ಪ್ರವಾಸಿಗರ ಕೈಗೆ ತೀವ್ರ ಪೆಟ್ಟಾಗಿದ್ದ ಕಾರಣ ಹೊಸನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಕರೆದೊಯ್ಯಲಾಗಿತ್ತು.


ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

About The Author

Leave a Reply

Your email address will not be published. Required fields are marked *

Exit mobile version