ಕ್ಯಾನ್ಸರ್ ರೋಗಿಗಳಿಗೆ ಕೂದಲು ದಾನ ನೀಡಿ ಯುವ ಸಮಾಜಕ್ಕೆ ಪ್ರೇರಣೆಯಾದ ಕಾಲೇಜಿನ ಯುವತಿ :

ರಿಪ್ಪನ್‌ಪೇಟೆ : ದಾನ ಮಾಡುವವರಿಗೆ ಇಂತಹದೇ ಎಂಬ ನಿಯಮವೇನು ಇಲ್ಲ ಯಾವುದಾದರೇನು ಕೊಡುವ ಮನಸ್ಸು ಇದ್ದರೆ ಏನು ಬೇಕಾದರೂ ಕೊಡಬಹುದು ಎಂಬುದಕ್ಕೆ ಇಲ್ಲಿನ ಶಬರೀಶ್ ನಗರದ ನಿವಾಸಿ ಕುಮಾರಿ ಚಂದನ ಜಿ.ನಾಯಕ್ ಮಾದರಿಯಾಗಿದ್ದಾಳೆ.

ಕಣ್ಣು-ರಕ್ತ – ವಸ್ತ-ಅನ್ನದಾನ-ವಿದ್ಯಾದಾನ ಗೋ ದಾನ, ಧನ ದಾನ ಹೀಗೆ ಹತ್ತು ಹಲವು ವಿಧದಲ್ಲಿ ದಾನ ಮಾಡುವುದನ್ನು ನಾವು  ಕೇಳಿರುತ್ತೇವೆ ಅದರೆ ಇಲ್ಲಿನ ಯುವತಿಯೊಬ್ಬಳು ತನ್ನ ಕೇಶವನ್ನು ಕ್ಯಾನ್ಸರ್ ರೋಗಿಗಳಿಗೆ ನೀಡಿ ಧೈರ್ಯ ತುಂಬುವ ಕೆಲಸ ಮಾಡಿದ್ದಾಳೆ.

ಕ್ಯಾನ್ಸರ್ ರೋಗಿಗಳಿಗೆ ಮಾರಕ ರೋಗದ ವಿರುದ್ದ ಹೋರಾಡಲು ಶಕ್ತಿಯನ್ನು ನೀಡಿದಂತಾಗುತ್ತದೆ ಅಲ್ಲದೆ ಕೂದಲು ಹೋದರೆ ಪುನ: ಬೆಳೆಯತ್ತದೆ ಹಾಗೇ ನಾವು ನೀಡುವ ದೈರ್ಯ ಅವರಿಗೆ ಬದುಕಲು ಸ್ಪೂರ್ತಿ ನೀಡುವಂತಾಗಲಿ ಎಂಬ ಉದ್ದೇಶದಿಂದ ನನ್ನ ಕೇಶವನ್ನು ದಾನ ನೀಡುತ್ತಿರುವುದಾಗಿ ಸಹ್ಯಾದ್ರಿ ಕಾಲೇಜ್‌ನ ಅಂತಿಮ ವರ್ಷದ ಕಲಾ ವಿಭಾಗದ ವಿದ್ಯಾರ್ಥಿನಿ ಕುಮಾರಿ ಚಂದನ ಜಿ.ನಾಯಕ್ ಹೇಳುತ್ತಾರೆ.

ಮಾಧ್ಯಮದವರೊಂದಿಗೆ ಮಾತನಾಡಿ ಜೀವನ ಎಲ್ಲರಿಗೂ ಸಮನಾಗಿರುವುದಿಲ್ಲ ಕಷ್ಟ ನೋವು ಪ್ರತಿಯೊಬ್ಬರಿಗೂ ಅನೆಕ ರೀತಿಯಲ್ಲಿ ಇರುತ್ತದೆ ನಮ್ಮಿಂದ ಸಾಧ್ಯವಾದಷ್ಟು ಮತ್ತೊಬ್ಬರ ನೋವಿಗೆ ಸ್ಪಂದಿಸುವ ಮೂಲಕ ಅಸರೆಯಾಗಬೇಕು.ಅನಾರೋಗ್ಯದ ಸಂದರ್ಭದಲ್ಲಿ ಹಲವಾರು ರೀತಿಯಲ್ಲಿ ನಮ್ಮ ದೇಹ ಮತ್ತು ಜೀವನ ಬದಲಾಗುತ್ತದೆ.ಅಂತಹ ಹಂತದಲ್ಲಿ ಅದರಲ್ಲೂ ಕ್ಯಾನ್ಸರ್ ಪೀಡಿತ ರೋಗಿಗಳಿಗೆ ಅತಿ ಹೆಚ್ಚು ನೋವು ನೀಡುವುದು ಕೂದಲು ಉದುರುವಿಕೆ ಅದರಲ್ಲೂ ಮಹಿಳೆಯರಿಗೆ ಇದು ಅತಿಯಾದ ನೋವು ನೀಡುವ ಮತ್ತು ಕುಗಿಸುವ ಹಂತ ಅಂತಹವರಿಗೆ ನಮ್ಮ ಕೂದಲನ್ನು ನೀಡುವುದರ ಮೂಲಕ ನಾವು ನಿಮ್ಮೊಂದಿಗಿದ್ದೇವೆ ಎಂದು ದೈರ್ಯ ಸ್ಥರ್ಯ ತುಂಬುವ ಮೂಲಕ ನನ್ನ ನೀಲಕಾಯದ  ಕೂದಲನ್ನು ರೋಗಿಗಳಿಗೆ ದಾನವಾಗಿ ನೀಡುತ್ತಿದ್ದೇನೆಂದು  ಬಹು ಹರ್ಷದಿಂದ ತನ್ನ ಅಂತರಾಳದ ಮಾತುಗಳನ್ನು ಹಂಚಿಕೊಂಡರು.

ಚಂದನ ರವರ ತಂದೆ ಗಂಗನಾಯಕ್ ರವರು ತಾಲ್ಲೂಕಿನ ತಮ್ಮಡಿಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಮುಖ್ಯೋಪಾದ್ಯಾಯರಾಗಿದ್ದಾರೆ. ತಾಯಿ ಶೀಲಾ ನಾಯ್ಕ್ ತಾಪಂ ಮಾಜಿ ಸದಸ್ಯರು.

ಇವರ ಪ್ರೇರಣೆ ಪ್ರೋತ್ಸಾಹದಿಂದಾಗಿ ನಾನು ಇಂತಹ ಕಾರ್ಯಕ್ಕೆ ಮುಂದಾಗಿದ್ದೇನೆ ಎಂದು ಚಂದನ ಹೇಳಿಕೊಂಡರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…

1 hour ago

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ – ಗ್ರಾಮಸ್ಥರಲ್ಲಿ ಅಚ್ಚರಿ

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…

2 hours ago

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ – ನಗದು ಸಹಿತ ಆರೋಪಿ ವಶಕ್ಕೆ

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…

23 hours ago

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…

23 hours ago

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…

23 hours ago

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…

2 days ago