ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕೋಡೂರು ಸಮೀಪದ ಶಾಂತಪುರ ಗ್ರಾಮದ ನಾಗರಾಜ್ ಎಂಬುವರ ಪತ್ನಿ ಅನುರಾಧ (45) ಎಂಬ ಮಹಿಳೆ ಸೋಮವಾರ ತೀವ್ರ ರಕ್ತದೊತ್ತಡದಿಂದ ಅನಾರೋಗ್ಯಕ್ಕೆ ತುತ್ತಾಗಿ ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.
ಸೋಮವಾರ ಮೃತ ಮಹಿಳೆಯ ಶವವನ್ನು ಮನೆಗೆ ತರಲಾಯಿತು ಆದರೆ ಮಂಗಳವಾರ ಮೃತ ಮಹಿಳೆ ಅನುರಾಧ ರವರ ಮಗಳು ಸ್ಪೂರ್ತಿ ಎಂಬ ಯುವತಿ ಬಿಎಸ್ ಸಿ ಕೃಷಿ ಪದವಿಗೆ ಕೃಷಿ ಕೋಟದಲ್ಲಿ ಪ್ರವೇಶ ಪಡೆಯಲು ಪ್ರಾಯೋಗಿಕ ಪರೀಕ್ಷೆ ಇತ್ತು .ಅಮ್ಮನ ಶವ ಮನೆಯಲ್ಲಿದ್ದರೂ ಹಿರಿಯರ ಮನವೊಪ್ಪಿಸಿ ನೋವಿನಲ್ಲೇ ಪರೀಕ್ಷೆ ಬರೆದು ನಂತರ ಮನೆಗೆ ಬಂದ ಮೇಲೆ ಅಮ್ಮನ ಶವ ಸಂಸ್ಕಾರವನ್ನು ನೆರವೇರಿಸಿದ ಹೃದಯವಿದ್ರಾವಕ ಘಟನೆ ನಡೆದಿದೆ.

ಯುವತಿ ಸ್ಪೂರ್ತಿ ಶಿವಮೊಗ್ಗದ ಮಹೇಶ್ ಪಿಯು ಕಾಲೇಜಿನಲ್ಲಿ ಶೇಕಡ 90 ಅಂಕ ಪಡೆದು ಸಿಇಟಿ ಬರೆದಿದ್ದಾಳೆ ಬಿಎಸ್ ಸಿ ಕೃಷಿ ಪದವಿ ಮಾಡುವ ಕನಸು ಹೊಂದಿದ್ದ ಈಕೆ ಇಂತಹ ನೋವಿನ ಸಂದರ್ಭದಲ್ಲೂ ಪರೀಕ್ಷೆ ಬರೆದಿದ್ದಾಳೆ.
ಇವಳ ಕುಟುಂಬದ ದುಃಖದ ನಡುವೆಯಲ್ಲಿ ತೆಗೆದುಕೊಂಡ ದೃಡ ನಿರ್ಧಾರಕ್ಕೆ ಗ್ರಾಮಸ್ಥರಿಂದ ಹಾಗೂ ಸಾರ್ವಜನಿಕರಿಂದ ಪ್ರಶಂಸೆಯ ಮಾತುಗಳ ಮಹಾಪೂರವೇ ಹರಿದು ಬಂದಿದೆ.