ತೀರ್ಥಹಳ್ಳಿ : ಎಬಿವಿಪಿ ತಾಲೂಕು ಅಧ್ಯಕ್ಷ ಮತ್ತು ಆತನ ಸ್ನೇಹಿತನ ಮೇಲೆ 15 ಜನ ಯುವಕರು ಹಲ್ಲೆ ನಡೆಸಿದ್ದು ಗಲಾಟೆಯನ್ನ ಬಿಡಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿರುವ ಘಟನೆ ಪಟ್ಟಣದ ಬಾಳೆಬೈಲು ಸಮೀಪ ಇಂದು ನಡೆದಿದೆ.
ತೀರ್ಥಹಳ್ಳಿಯ ಜಿಪಿಎಸ್ ಸಿ ಕಾಲೇಜಿನಲ್ಲಿ ಬಿಸಿಎ ಓದುತ್ತಿರುವ ಹಾಗೂ ಎಬಿವಿಪಿ ಸಂಘಟನೆಯ ತಾಲೂಕು ಅಧ್ಯಕ್ಷ ಪ್ರತೀಕ್ ಗೌಡ ಮಳೆ ಅಧಿಕವಾಗಿರುವುದರಿಂದ ಮನೆಗೆ ತೆರಳಲು ಸ್ನೇಹಿತನಿಗೆ ಕಾರು ತರಲು ಹೇಳಿರುತ್ತಾನೆ. ಅದೇ ಸಮಯಕ್ಕೆ ನಿಶಾಂತ್ ಟಾಟಾ ಇಂಡಿಕಾ ಕಾರನ್ನ ತಂದಿದ್ದಾನೆ.
ಪ್ರತೀಕ್ ಗೌಡ ಕಾರಿನಲ್ಲಿ ಕುಳಿತುಕೊಂಡು ಕಾಲೇಜಿನ ಕಾಂಪೌಂಡ್ ನಿಂದ ಹೋಗುತ್ತಿದ್ದಂತೆ ಕಾಲೇಜಿನ ಹೊರಭಾಗದಲ್ಲಿದ್ದ ಅದೇ ಕಾಲೇಜಿನ ಮತ್ತು ಇತರೆ ಇಬ್ಬರು ಯುವಕರು ಕಾರನ್ನ ತಡೆದು ಕಾರಿನ ಡೋರನ್ನ ಒಡೆದು ಕಾರಿನಲ್ಲಿರುವ ಇಬ್ಬರು ಯುವಕರನ್ನ ಹೊರಗೆ ಎಳೆಯಲು ಯತ್ನಿಸಿದ್ದಾರೆ.
ಅಬ್ದುಲ್ ವಾಜಿದ್, ನಿಹಾರ್, ನಿಹಾನ್ ,ಹ್ಯಾರಿಸ್, ಸದಾಪ್ ಸಾವಿದ್ ರಿಜ್ವಾನ್, ಜೇಶನ್,ಮಾಸೂಮ್ ಇನ್ನಿತರೆ ಹೊರಗಿನ ಯುವಕರು ಈ ಇಬ್ಬರು ಯುವಕರನ್ನ ಕಾರಿನಿಂದ ಹೊರಗೆ ಎಳೆದು ತಳಿಸಿ ನೆಲಕ್ಕೆ ಉರುಳಿಸಿ ಥಳಿಸಿದ್ದಾರೆ. ಕೈಕಾಲುಗಳಿಗೆ ಕಲ್ಲುಗಳಿಂದ ಥಳಿಸಿದ್ದಾರೆ. ನಮ್ಮ ತಂಟೆಗೆ ಬಂದರೆ ನಿಮ್ಮನ್ನ ಜೀವಂತವಾಗಿ ಬಿಡುವುದಿಲ್ಲವೆಂದು ಬೆದರಿಕೆ ಹಾಕಿದ್ದಾರೆ.
ಈ ವೇಳೆ ಪೊಲೀಸರು ಸ್ಥಳಕ್ಕೆ ಬಂದಿದ್ದು ಜಗಳ ಬಿಡಿಸಲು ಯತ್ನಿಸಿದ್ದು ಇಬ್ಬರು ಯುವಕರನ್ನ 15 ಜನರ ಗ್ಯಾಂಗ್ ಬಿಡಲು ಸಿದ್ದವಿರಲಿಲ್ಲ. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ಲಾಠಿ ಪ್ರಹಾರ ಮಾಡುತ್ತಿದ್ದಂತೆ ಹಲ್ಲೆ ನಡೆಸಿದ ಗ್ಯಾಂಗ್ ಅಲ್ಲಿಂದ ಜಾಗ ಖಾಲಿಮಾಡಿದ್ದಾರೆ .
ಈ ಘಟನೆ ಹಳೇಯ ದ್ವೇಷದಿಂದ ನಡೆದಿದೆ ಎಂದು ಆರೋಪಿಸಿ ಪ್ರತೀಕ್ ಗೌಡ ಅಬ್ದುಲ್ ವಾಜಿದ್, ನಿಹಾರ್, ನಿಹಾನ್ ,ಹ್ಯಾರಿಸ್, ಸದಾಪ್ ಸಾವಿದ್ ರಿಜ್ವಾನ್, ಜೇಶನ್,ಮಾಸೂಮ್ ಇನ್ನಿತರೆ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್