ತೀರ್ಥಹಳ್ಳಿ ಗಾಂಧಿಚೌಕ್ ನಲ್ಲಿ ದಂಪತಿಗಳ ಹೈಡ್ರಾಮ : ಮಗುವಿಗೆ ಹಿಂಸೆ ನೀಡಿದ ಪ್ರಕರಣದಲ್ಲಿ ತಂದೆ ಅರೆಸ್ಟ್

ತೀರ್ಥಹಳ್ಳಿ: ಹುಚ್ಚುತನದ ಪರಮಾವಧಿಯಾಗಿ ಧರ್ಮದ ಅಮಲಿನಲ್ಲಿ ತನ್ನ ಎಳೆಯ ಕಂದಮ್ಮನನ್ನು ಮಳೆಯಲ್ಲಿ ನೆನೆಸುತ್ತಾ ಹುಚ್ಚು ಹುಚ್ಚಾಗಿ ಅರಚುತ್ತಿದ್ದ ತಂದೆಯನ್ನು ಅನುಮಾನದ ಮೇಲೆ ಪೊಲೀಸರು ವಿಚಾರಣೆ ನಡೆಸಿ ಆತನನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.

ತೀರ್ಥಹಳ್ಳಿಯ ಗಾಂಧಿ ಚೌಕದಲ್ಲಿ ಸಣ್ಣ ಮಗುವನ್ನು ಹಿಡಿದುಕೊಂಡು ಮಳೆಯಲ್ಲೇ ಅದನ್ನು ಮೇಲೆತ್ತಿ ಹಾಕುತ್ತ ಹಿಂಸೆ ನೀಡುತ್ತಿರುವ ದೃಶ್ಯವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ತೀರ್ಥಹಳ್ಳಿಯ ಫರ್ನಾಂಡಿಸ್ ಎಂದು ಗುರುತಿಸಿದ್ದು ಈತ ಕಾರಿನ ಮೇಲೆ ವಿವಿಧ ಧರ್ಮದ ಅಮಲಿನಲ್ಲಿ ಬರಹ ಬರೆದು ಹುಚ್ಚು ಹುಚ್ಚಾಗಿ ವರ್ತನೆ ಮಾಡುತ್ತಿದ್ದ.

ಪುಟ್ಟ ಕಂದಮ್ಮನನ್ನು ಬಾಹುಬಲಿಯ ಶಿವಗಾಮಿ ಸ್ಟೈಲ್​ನಲ್ಲಿ ಮೇಲಕ್ಕೆ ಎತ್ತಿ, ಅನ್ಯಾಯವಾಗ್ತಿದೆ ಎಂದಿದ್ದಾನೆ.ಪುಟ್ಟ ಕಂದಮ್ಮನನ್ನು ಮಳೆಯಲ್ಲಿ ಎತ್ತಿ ಹಿಡಿದು ಅಯ್ಯಯ್ಯೋ ಅನ್ಯಾಯ ಅನ್ನುತ್ತಾ ಮಗುವನ್ನು ಮಳೆಯಲ್ಲಿ ನೆನೆಸುತ್ತಿರುವುದನ್ನು ತೀರ್ಥಹಳ್ಳಿ ಗಾಂಧಿ ಚೌಕದ ಜನ ಸುಮ್ಮನೇ ನೋಡುತ್ತಾ ನಿಂತಿದ್ದಾಗ ಅಲ್ಲಿಗೆ ಬಂದ ಭಿಕ್ಷುಕಿ ಅಜ್ಜಿಯೊಬ್ಬಳು ಮಗುವಿಗೆ ಕೊಡೆ ಹಿಡಿದು ಆಸರೆಯಾದ ಘಟನೆ ನಡೆಯಿತು.ಭಿಕ್ಷುಕಿ ಅಜ್ಜಿ ಆ ಸಂದರ್ಭದಲ್ಲಿ ತೋರಿದ ಕರುಣೆ ನಿಜಕ್ಕೂ ಅಲ್ಲಿದ್ದವರ ಮನದ ಕದ ತಟ್ಟಿತ್ತು.

ಹೋಟೆಲ್‌ ಅಲಂಕಾರ್‌ ಎದುರ ಈ ವ್ಯಕ್ತಿಯ ಕಾರು ಸುಮಾರು ಸಮಯದಿಂದ ಪಾರ್ಕ್​ ಆಗಿತ್ತು. ಕಾರಿನ ತುಂಬಾ ದೇವರ ಸಂದೇಶಗಳನ್ನು ಬರೆಯಲಾಗಿತ್ತು. ಇದು ಸ್ಥಳೀಯರ ಗಮನಕ್ಕೆ ಬಿದ್ದು ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಲು ಆರಂಭಿಸಿತು.

ಈತ ನೆಲಮಂಗಲ ಮೂಲದ  ಮಾರ್ಕಮ್ಮ ಎಂಬ 24 ವರ್ಷದ ಯುವತಿ ತನ್ನ ಹೆಂಡತಿ, ಇದು ನನ್ನ ಮಗು ಎಂದಿದ್ದಾನೆ.

ಮಗು ಕೊಲ್ಲುವ ಪ್ರಯತ್ನ ಕೇಸು ದಾಖಲಿಸಿಕೊಂಡ ಪೊಲೀಸರು ಆತನನ್ನು ವಶಕ್ಕೆ ಪಡೆದು ಮಗುವನ್ನು ರಕ್ಷಿಸಿದ್ದಾರೆ.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

7 hours ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

9 hours ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

9 hours ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

9 hours ago

ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು ಆರೋಪ , ಸ್ಥಳಕ್ಕೆ ಅಧಿಕಾರಿಗಳ ದೌಡು

ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…

19 hours ago

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

1 day ago