ತೀರ್ಥಹಳ್ಳಿ : ತಾಲೂಕಿನ ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ವಿಠಲನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಪಶ್ಚಿಮ ಬಂಗಾಳ ಮೂಲದ ನಾಲ್ವರನ್ನು ಗಾಂಜಾ ಕೇಸ್ ನಲ್ಲಿ ಅರೆಸ್ಟ್ ಮಾಡಲಾಗಿದೆ.
ನಾಲ್ವರು ಕೂಡ ಪಶ್ಚಿಮ ಬಂಗಾಳದ ಮೂಲದವರಾಗಿದ್ದು ತೀರ್ಥಹಳ್ಳಿಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಖಚಿತ ಮಾಹಿತಿ ಮೇರೆಗೆ ತೀರ್ಥಹಳ್ಳಿಯ ಡಿವೈಎಸ್ಪಿ ಇವರ ನೇತೃತ್ವದಲ್ಲಿ ಮಾರುವೇಷದಲ್ಲಿ ಹೋಗಿ ಆರೋಪಿಗಳನ್ನು ಬಂಧಿಸಿದ್ದು ಒಂದೂವರೆ ಕೆಜಿ ಗಾಂಜಾ ಕೂಡ ವಶಕ್ಕೆ ಪಡೆಯಲಾಗಿದೆ.
ಪಶ್ಚಿಮ ಬಂಗಾಳ ಮೂಲದವರಾದ ಬಾಷಾ ಸರ್ಕಾರ್, ಅಲೋಕ್ ಮಂಡಲ್, ಅಮೃತ್ ಮಂಡಲ್, ಸಂಕರ್ ಬ್ಯಾಪಾರಿ ಎಂಬುವರನ್ನು ಈಗಾಗಲೇ ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.
> ಕಾರ್ಯಾಚರಣೆಯಲ್ಲಿ ಸಿಪಿಐ ಅಶ್ವಥ್, ಪಿಎಸ್ಐ ಸಂತೋಷ್ ಕುಮಾರ್, ಸಿಬ್ಬಂದಿಗಳಾದ ಪುನೀತ್, ಪ್ರವೀಣ್ ಕುಮಾರ್, ದೀಪಕ್, ಅವಿನಾಶ್, ಪ್ರದೀಪ್, ಸುರೇಶ ನಾಯ್ಕ್, ವೀರೇಂದ್ರ, ರವಿ, ಅವಿನಾಶ್ ವಿಜಯ್ ಮುಂತಾದವರು ಪಾಲ್ಗೊಂಡಿದ್ದರು.
ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
class=”separator” style=”clear: both; text-align: center;”>
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್