ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಅಮಲಿನಲ್ಲಿ ತೂರಾಡುತ್ತ ರಸ್ತೆ ಮೇಲೆ ಬಿದ್ದು ಹೊರಳಾಡುವ ವಿಡಿಯೋ ವೈರಲ್ ಆಗಿದೆ. ಕಾಲೇಜು ಗೇಟ್ ಮುಂದೆಯೇ ಘಟನೆ ಸಂಭವಿಸಿದ್ದು, ವಿದ್ಯಾರ್ಥಿಗಳ ಮೊಬೈಲ್ ನಲ್ಲೇ ವಿಡಿಯೋ ರೆಕಾರ್ಡ್ ಆಗಿದೆ ಎಂದು ತಿಳಿದು ಬಂದಿದೆ.
ಶಿವಮೊಗ್ಗ ನಗರದ ಪ್ರತಿಷ್ಠಿತ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಅಮಲಿನಲ್ಲಿ ತೇಲಾಡುತ್ತ ಕಾಲೇಜು ಮುಂಭಾಗದ ಫುಟ್ ಪಾತ್ ಮೇಲೆ ಬಿದ್ದು ಹೊರಳಾಡಿದ್ದಾರೆ.
ಅಮಲಿನಲ್ಲಿರುವ ಇಬ್ಬರು ವಿದ್ಯಾರ್ಥಿಗಳನ್ನು ವಿಡಿಯೋದಲ್ಲಿ ಸೆರೆ ಹಿಡಿಯಲಾಗಿದೆ. 57 ಸೆಕೆಂಡ್ ನ ವಿಡಿಯೋವನ್ನು ಬಸ್ ಒಂದರಲ್ಲಿ ಕುಳಿತವರು ಚಿತ್ರೀಕರಣ ಮಾಡಿದ್ದಾರೆ. ವಿದ್ಯಾರ್ಥಿಯೊಬ್ಬ ಮುಖ ಕೆಳಗೆ ಮಾಡಿ ಫುಟ್ ಪಾತ್ ಮೇಲೆ ಬಿದ್ದಿದ್ದಾನೆ. ಮತ್ತೊಬ್ಬ ವಿದ್ಯಾರ್ಥಿ ತಲೆ ಬಗ್ಗಿಸಿ ಕುಳಿತಿರುತ್ತಾನೆ. ಅವರ ಸ್ನೇಹಿತರು ಇಬ್ಬರನ್ನು ಸಂತೈಸುತ್ತಾರೆ. ಈ ವೇಳೆ ತಲೆ ಕೆಳಗೆ ಹಾಕಿಕೊಂಡು ಕುಳಿತಿದ್ದ ವಿದ್ಯಾರ್ಥಿ ದಿಢೀರ್ ಎದ್ದು ಮುಂದಕ್ಕೆ ನಡೆಯುತ್ತಾನೆ. ಕೆಲವು ಹೆಜ್ಜೆ ಹಾಕುವಷ್ಟರಲ್ಲಿ ತೂರಾಡಿ ಕೆಳಗೆ ಬೀಳುತ್ತಾನೆ.
ಇದೆ ವೇಳೆ ಅಲ್ಲಿಗೆ ಬಂದ ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳನ್ನು ತಡೆದು ನಿಲ್ಲಿಸಲು ಯತ್ನಿಸುತ್ತಾರೆ. ಅದರೆ ಅವರ ಮಾತು ಕೇಳದೆ ತೂರಾಡುತ್ತಲೆ ವಿದ್ಯಾರ್ಥಿ ಓಡಲು ಯತ್ನಿಸುತ್ತಾನೆ.
ಕಾಲೇಜು ಮುಂಭಾಗ ವಿದ್ಯಾರ್ಥಿಗಳು ಅಮಲಿನಲ್ಲಿ ತೂರಾಡುತ್ತಾ ಓಡಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಾಟ್ಸಪ್ ಗ್ರೂಪ್ ಗಳಲ್ಲಿಯು ವಿಡಿಯೋ ಶೇರ್ ಆಗುತ್ತಿದೆ.
ಬ್ಯಾಗು, ಯುನಿಫಾರಂ ಧರಿಸಿಕೊಂಡು ಎಲ್ಲೆಂದರಲ್ಲಿ ಬೀಳುತ್ತಿದ್ದ ವಿದ್ಯಾರ್ಥಿಗಳನ್ನು ಜನರು ಗಾಬರಿಯಿಂದ ನೋಡುತ್ತಿದ್ದರು. ಕಾಲೇಜು ಸಮೀಪ ನಿಂತಿದ್ದ ಸಾರ್ವಜನಿಕರು ವಿದ್ಯಾರ್ಥಿಗಳು ಅಮಲಿನಲ್ಲಿ ತೇಲಾಡುತ್ತಿರುವುದನ್ನು ಗಮನಿಸಿ ಚಕಿತಗೊಂಡಿದ್ದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸರು, ಘಟನೆಯ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿದ್ದು, ತನಿಖೆಯಲ್ಲಿ ವಿದ್ಯಾರ್ಥಿಗಳು ಸಾಗರ ರಸ್ತೆಯಲ್ಲಿರುವ ಬಾರ್ ಒಂದರಲ್ಲಿ ಮದ್ಯ ಸೇವನೆ ಮಾಡಿಕೊಂಡು ಬಸ್ ಹತ್ತಲು ಕಾಲೇಜಿನ ಹತ್ತಿರ ಬಂದಾಗ ಕಾಲೇಜಿನ ಗೇಟ್ ನಲ್ಲಿ ತಡೆಯಲಾಗಿತ್ತು. ಬಳಿಕ ಅವರ ಪೋಷಕರಿಗೆ ಈ ವಿಚಾರವನ್ನು ತಿಳಿಸಿ, ಕಾಲೇಜು ಆಡಳಿತ ಮಂಡಳಿಯು ಪೋಷಕರೊಂದಿಗೆ ವಿದ್ಯಾರ್ಥಿಗಳಿಗೆ ಈ ವಿಷಯವಾಗಿ ಸಮಾಲೋಚನೆ ನಡೆಸಿದೆ ಎಂದಿದ್ದಾರೆ.
ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…