ಶಿವಮೊಗ್ಗ : ಕಾರ್ಯಕರ್ತರಿಗೆ ಮೆಚ್ಯುರಿಟಿ ಇಲ್ಲ ಎಂಬ ಶಾಸಕ ಈಶ್ವರಪ್ಪ ಹೇಳಿಕೆ ಹಿನ್ನೆಲೆಯಲ್ಲಿ ಮಾಜಿ ಸಚಿವರ ಮನೆಗೆ ಹೆಚ್ಚಿನ ಪೊಲೀಸ್ ಭದ್ರತೆ ನೀಡಲಾಗಿದೆ. 30 ಕ್ಕೂ ಹೆಚ್ಚು ಪೊಲೀಸರ ಸಿಬ್ಬಂದಿಯನ್ನ ನಿಯೋಜಿಸಲಾಗಿದೆ.
ಶಿವಮೊಗ್ಗದ ಗುಡ್ಡಪ್ಪ ಶೆಡ್ ನಲ್ಲಿ ಇರುವ ಕೆ.ಎಸ್.ಈಶ್ವರಪ್ಪ ಮನೆಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕುವ ಸಾಧ್ಯತೆಗಳಿವೆ ಎಂಬ ಕಾರಣಕ್ಕೆ ಮುಂಜಾಗ್ರತ ಕ್ರಮವಾಗಿ ಮನೆಗೆ ಹೆಚ್ಚಿನ ಭದ್ರತೆ ನೀಡಲಾಗುತ್ತಿದೆ.
ಬಿಜೆಪಿಯಲ್ಲಿ ಯುವ ಮೋರ್ಚಾದ ಕಾರ್ಯಕರ್ತರಿಗೆ ಮೆಚ್ಯುರಿಟಿ ಇಲ್ಲ ಎಂದು ಮಾಜಿ ಸಚಿವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಬಿಜೆಪಿ ಪಾಳಯದಲ್ಲಿ ಬಾರಿ ವಿರೋಧ ವ್ಯಕ್ತವಾಗಿತ್ತು. ಬೆಳಗ್ಗೆ ಬೆಂಗಳೂರಿನಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಮನೆಗೆ ಎಬಿವಿಪಿ ಕಾರ್ಯಕರ್ತರು ದಿಡೀರ್ ಮುತ್ತಿಗೆ ಹಾಕಿದ್ದರ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗದಲ್ಲಿ ಈಶ್ವರಪ್ಪ ಮನೆಗೂ ಬಿಗಿ ಭದ್ರತೆ ನೀಡಲಾಗಿದೆ.
ಗುಂಡಪ್ಪ ಶೆಡ್ ನ ರೈಲ್ವೆ ಗೇಟ್ ಬಳಿಯಲ್ಲೇ ಕಾರ್ಯಕರ್ತರನ್ನು ತಡೆಯಲು ಚೆಕ್ ಫೊಸ್ಟ್ ಗಳನ್ನ ನಿರ್ಮಿಸಲಾಗಿದೆ ಎಂದು ಎಸ್ಪಿ ಡಾ.ಲಕ್ಷ್ಮೀ ಪ್ರಸಾದ್ ಸ್ಪಷ್ಟನೆ ನೀಡಿದ್ದಾರೆ.