ಶಿವಮೊಗ್ಗ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಆರಂಭವಾಗಿದ್ದು, ಈಗಾಗಲೇ ನೂರಾರು ಕಾರ್ಯಕರ್ತರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಪ್ರತಿಕ್ರಿಯಿಸಿದ್ದು ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡಿದ್ದಾರ ಎಂಬ ಪ್ರೆಶ್ನೆ ಉದ್ಭವವಾಗಿದೆ
ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ಕೆ.ಎಸ್ ಬಿಜೆಪಿ ಕಾರ್ಯಕರ್ತರಿಗೆ ಪ್ರಭುದ್ಧತೆ ಇಲ್ಲ ಎನ್ನುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಶ್ಯಾಮಪ್ರಸಾದ್ ಮುಖರ್ಜಿಗೆ ಸಾಯುತ್ತೇನೆ ಎಂದು ಗೊತ್ತಿದ್ದರೂ ಏಕೆ ಸಾಯಲು ಹೋದರು. ನಾನು ರಾಜಿನಾಮೆ ನೀಡಿ ಹೋಗುತ್ತೇನೆ ಎಂದು ಹೇಳಿದ್ದರಾ ಅವರು. ಪಂಡಿತ್ ದೀನದಯಾಳು ಉಪಾದ್ಯಾಯ ಅವರನ್ನು ರೈಲಿನಲ್ಲಿ ಕೊಂದು ಹಾಕಿದರು. ದೀನ ದಯಾಳು ಅವರು ನನಗೆ ಪಕ್ಷ ಬೇಡ ಎಂದು ಹೋರಹೋಗಿದ್ದರಾ..? ಆದರೆ ನಮ್ಮ ಹುಡುಗರಿಗೆ ಮೆಚ್ಯುರಿಟಿ ಕಡಿಮೆ ಹಾಗಾಗಿ ಹಿರಿಯರ ಬಗ್ಗೆ ಮಾತನಾಡುತ್ತಾರೆ. ನಾವು ಅವರನ್ನು ಸಮಾಧಾನ ಮಾಡುತ್ತೇವೆ. ಹಿರಿಯರಾಗಿ ಅವರು ಬೈದರು ಎಂದು ನಾವು ಅವರಿಗೆ ವಾಪಸ್ ಬೈಯುವುದೇ..? ಅವರು ರಾಜೀನಾಮೆ ಕೊಟ್ಟರು ಎಂದಾಕ್ಷಣ ಅವರ ರಾಜೀನಾಮೆ ಸ್ವೀಕರಿಸಿ ಮನೆಗೆ ಕಳುಹಿಸುವುದು ಕೇವಲ ಐದು ನಿಮಿಷದ ಕೆಲಸ. ಆದರೆ ಅವರಿಗೆ ಸಮಾಧಾನ ಮಾಡುತ್ತೇವೆ. ಬದಲಾಗುತ್ತಾರೆ ಎಂಬ ನಂಬಿಕೆ ನಮಗಿದೆ ಎಂದಿದ್ದಾರೆ.
ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇
ವರದಿ : ಅಕ್ಷಯ್ ಕುಮಾರ್