ಮಾದಕ ವಸ್ತುಗಳ ನಿಗ್ರಹದ ಬಗ್ಗೆ ಗೃಹಸಚಿವರಿಂದ ಸಭೆ :

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಮಾದಕ ವಸ್ತುಗಳ ನಿಗ್ರಹದ ಬಗ್ಗೆ ಸಭೆ ನಡೆಸಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆ ಪದಾಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.ಮಾದಕ ವಸ್ತುಗಳ ಮಾಫಿಯಾ ವಿರುದ್ಧ ಕಾರ್ಯಕ್ರಮ ಯೋಜನೆ ರೂಪಿಸುವುದು, ಬಗರ್ ಹುಕುಂ ಜಾಗದಲ್ಲಿ ಗಾಂಜಾ ಬೆಳೆಸುವುದನ್ನ ನಿಯಂತ್ರಿಸುವುದರ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಮಾದಕ ವಸ್ತುಗಳ ದಾಳಿ ವಿಚಾರವನ್ನ‌ ಪೊಲೀಸ್ ಇಲಾಖೆಯಿಂದಲೇ ಲೀಕ್ ಆಗುವುದರಿಂದ  ಮಾದಕ ವಸ್ತು ಮಾರುವವನು ಎಚ್ಚರಗೊಳ್ಳುತ್ತಿದ್ದಾರೆ ಎಂಬ ಮಾಹಿತಿ ಸಭೆಯಲ್ಲಿ ಕೇಳಿಬಂದಿತು. ಈ ಬಗ್ಗೆ ಪ್ರತಿಕ್ರಿಯಿಸಿದ ಗೃಹಸಚಿವರು, ಅಂತಹ ಅಧಿಕಾರಿಗಳ ಬಗ್ಗೆ ಮಾಹಿತಿ ಇದ್ದರೆ ನಮಗೆ ಕೊಡಿ  ಸಿಬ್ಬಂದಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಸೂಚಿಸಿದರು.

ಎಸ್ಪಿ ಡಾ.ಬಿ.ಎಂ. ಲಕ್ಷ್ಮೀ ಪ್ರಸಾದ್ ಮಾತನಾಡಿ ಶಾಲೆಯ ವ್ಯಾಪ್ತಿಯಲ್ಲಿ ವಾಟ್ಸಪ್ ಗ್ರೂಪ್ ರಚಿಸಿ ಅದರ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಪೊಲೀಸರು ಕ್ರಮ ಜರುಗಿಸುತ್ತಿದ್ದಾರೆ ಎಂದರು. ಗ್ರಾಮೀಣ ಭಾಗದಲ್ಲಿ ಊರಿನ ಆಚೆ ಶಾಲೆಗಳಿರುತ್ತವೆ. ಗಾಂಜಾ ಸೇವನೆ ಗ್ರಾಮೀಣಮಕ್ಕಳನ್ನೂ ಬಿಟ್ಟಿಲ್ಲ ಎಂದು ಧರ್ಮಸ್ಥಳದ ಗ್ರಾಮೀಣಾಭಿವೃದ್ಧ ಯೋಜನೆ ಪದಾಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಈ ಬಗ್ಗೆ ಮಾತನಾಡಿದ ಗೃಹ ಸಚಿವ  ಪೊಲಿಸರಿಗಂತ ದೊಡ್ಡ ಜಾಲ ಇದೆ.  ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆಯ ಪದಾಧಿಕಾರಿಗಳು ಎಷ್ಟು ಹೊತ್ತಿನಿಂದ ಎಷ್ಟು ಹೊತ್ತಿನವರೆಗೆ ಮಕ್ಕಳು ಗಾಂಜಾ ಸೇವನೆ ಮಾಡುತ್ತಾರೆ ಎಂಬುದರ ಬಗ್ಗೆ ಮಾಹಿತಿ ನೀಡಿದರೆ  ಪೊಲೀಸರೊಂದಿಗೆ ದಾಳಿ ನಡೆಸುತ್ತಾರೆ ಎಂದರು.

ವೈಟ್ನರ್ ಬಳಕೆಗೆ ಸುತ್ತೋಲೆ :

ಮಕ್ಕಳು ವೈಟ್ನರ್ ಬಳಕೆ ಬಗ್ಗೆ ಚರ್ಚಿಸಲಾಯಿತು. ವೈಟ್ನರ್ ಬಳಕೆ ಕುರಿತು ಮಾತನಾಡಿದ ಡಿಸಿ ಡಾ.ಸೆಲ್ವಮಣಿ ವೈಟ್ನರ್ ಬಳಕೆ ಬಗ್ಗೆ ಸುತ್ತೋಲೆ ಹೊರಡಿಸಿ ವೈಟ್ನರ್ ಶಿಕ್ಷಕರು ಬಿಟ್ಟರೆ ಮಕ್ಕಳು ಬಳಸದಂತೆ ಆದೇಶಿಸಲಾಯಿತು. ವಿದ್ಯಾರ್ಥಿಗಳಿಗೆ ವೈಟ್ನರ್ ಬೇಕು ಎಂದಾದರೆ ಮುಖ್ಯೋಪದ್ಯಾಯರ ಅನುಮತಿ ಪತ್ರ ಪಡೆದು ವೈಟ್ನರ್ ಪಡೆಯಬಹುದು ಎಂದರು.  ಮಾದಕ ವಸ್ತುಗಳ ಸೇವನೆ, ಸಾಗಾಣಿಕೆ ಮತ್ತು ಪೂರೈಕೆಯಾಗುವ ಬಗ್ಗೆ ಜಾಗೃತಿ ಮೂಡಿಸಲು ಯೋಜನೆ ರೂಪಿಸಲು ಚರ್ಚಿಸಲಾಯಿತು.

ಡ್ರಗ್ಸ್, ಗಾಂಜಾ ಮತ್ತು ಮದ್ಯಸೇವನೆ ನಿಯಂತ್ರಣದ ಬಗ್ಗೆ ಜನಜಾಗೃತಿ ಕಾರ್ಯಕ್ರಮ ರೂಪಿಸಲು ಸಭೆ ತೀರ್ಮಾನಿಸಿತು. ಸಭೆಯಲ್ಲಿ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಅಧಿಕಾರಿಗಳು ಉಪಸ್ಥಿತಿತರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

1 hour ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

2 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

6 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

10 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

13 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago