ಮಾಸ್ತಿಕಟ್ಟೆ ಸಮೀಪ ಕೆಎಸ್ಆರ್ ಟಿಸಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ :
ಮಾಸ್ತಿಕಟ್ಟೆ : ಇಲ್ಲಿನ ಸಮೀಪದ ಯಡೂರು ಗ್ರಾಮದ ಮೇಕೇರಿಯಲ್ಲಿ ಈಚರ್ ಲಾರಿಯೊಂದು ಕೆಎಸ್ಆರ್ ಟಿಸಿ ಬಸ್ ಗೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ನಡೆದಿದೆ.
ಈ ಅಪಘಾತದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಚಾಲಕ ಮತ್ತು ಹಲವು ಕಾಲೇಜ್ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಈಚರ್ ಲಾರಿಯು ಕುಂದಾಪುರದಿಂದ ಶಿವಮೊಗ್ಗಕ್ಕೆ ಇಟ್ಟಿಗೆಯನ್ನು ತುಂಬಿಸಿಕೊಂಡು ಹೋಗುತ್ತಿತ್ತು.ಕೆ ಎಸ್ ಆರ್ ಟಿ ಸಿ ಬಸ್ ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತಿತ್ತು.ಈ ಸಂಧರ್ಭದಲ್ಲಿ
ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ.
ಅಪಘಾತದಿಂದ ಸ್ಥಳದಲ್ಲಿ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿದೆ.
ಬಸ್ ಚಾಲಕ ಹಾಗೂ ಮೂವರು ಪ್ರಯಾಣಿಕರಿಗೆ ಗಾಯಳಾಗಿವೆ ಎಂದು ತಿಳಿದು ಬಂದಿದೆ. ಬಸ್ ನಲ್ಲಿ ವಿದ್ಯಾರ್ಥಿಗಳೇ ಹೆಚ್ಚಿದ್ದು ಅಪಘಾತದಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡವರನ್ನ ಯಡೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
