ರಾಜ್ಯ ಗೃಹ ಮಂತ್ರಿಗಳ ಕ್ಷೇತ್ರ ಕರಡಿಗ-ಬೆಳಕೋಡು ಗ್ರಾಮದಲ್ಲಿ ಹೊಳೆದಾಟುವ ಹರಸಾಹಸಾದಲ್ಲಿ ಶಾಲಾ-ಕಾಲೇಜು ಮಕ್ಕಳು,ಗ್ರಾಮಸ್ಥರು : ಸಾರ್ವಜನಿಕರ ಗೋಳು ಕೇಳುವವರು ಯಾರು…..!?

ರಿಪ್ಪನ್‌ಪೇಟೆ;- ರಾಜ್ಯದ ಗೃಹ ಮಂತ್ರಿಗಳು ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರು ಆದ ಆರಗ ಜ್ಞಾನೇಂದ್ರ ರವರ ಕ್ಷೇತ್ರದ ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಬೆಳಕೋಡು-ಕರಡಿಗ ಗ್ರಾಮದ ಸಂಪರ್ಕವೂ ಮೃತ್ಯುವಿನ ಜೊತೆಗೆ ಸರಸವಾಡಿದಂತಾಗಿದ್ದು ಪ್ರತಿನಿತ್ಯ ನೂರಾರು ಜನ ಇಲ್ಲಿನ ಅಸುರಕ್ಷಿತ ಕಾಲಸಂಕ ಬಳಸಿ ತಮ್ಮ ದೈನಂದಿನ ಕಾರ್ಯಚಟುವಟಿಕೆಗಾಗಿ ಸಂಚರಿಸುವ ಅನಿವಾರ್ಯತೆ ಎದುರಾಗಿದೆ.

ಪ್ರತಿವರ್ಷದ ಮಳೆಗಾಲದಲ್ಲಿ ಗ್ರಾಮದ ಜನರು ನಿತ್ಯ ಸಂಚಾರದ ಮಾರ್ಗ ಹಳ್ಳದ ಹರಿವಿನಿಂದ ಕಡಿತಗೊಂಡು ಸುತ್ತಿಬಳಸಿ ದೂರದ ಪ್ರಯಾಣದಿಂದ ಜನರು ಶಾಲಾ ಕಾಲೇಜ್ ವಿದ್ಯಾರ್ಥಿಗಳು ಪೇಟೆ ಪಟ್ಟಣ ಸೇರಬೇಕಾಗಿದೆ.
ನೇರ ಸಂಪರ್ಕದ ದಾರಿ ನೀರಿನಿಂದ ಮುಳುಗಡೆಗೊಂಡು ಸಂಚಾರ ನಿರ್ಬಂಧಿತವಾಗುವುದರಿಂದ ಇಲ್ಲಿನ ಜನರು ಪಟ್ಟಣ ಸನಿಹ ಸಂಚಾರಕ್ಕಾಗಿ ಶರ್ಮಿಣ್ಯಾವತಿ ಹೊಳೆಯ ಎರಡು ಕಡೆಯಲ್ಲಿರುವ  ದಂಡೆಗೆ ಮರದ ಉದ್ದದ ಮರದ ದಿಮ್ಮಿಗಳನ್ನು ಬಳಸಿ ಏಕವ್ಯಕ್ತಿ ದಾಟುವ ಕಾಲಸಂಕವನ್ನು ನಿರ್ಮಿಸಿಕೊಂಡಿದ್ದಾರೆ.ಅದರೆ ಇಲ್ಲಿನ ಸಂಚಾರ ಬಹಳ ದುಸ್ತರವಾಗಿದ್ದು ವಯೋವೃದ್ದರು ಗರ್ಭೀಣಿಯರು ಮಹಿಳೆಯರು ಶಾಲಾ ಕಾಲೇಜ್ ವಿದ್ಯಾರ್ಥಿಗಳು ಸಂಕ ದಾಟುವಾಗ ಸ್ವಲ್ಪ ಅಜಾಗರೂಕರಾದರೂ ಹೊಳೆಯ ಪಾಲಾಗುವುದರಲ್ಲಿ ಯಾವುದೇ ಸಂದೇಹವಿಲ್ಲ.


ಇಂತಹ ರಭಸದಿಂದ ಹರಿಯುವ ಹೊಳೆಯ ನೀರಿಗೆ ಬಿದ್ದು ಕೊಚ್ಚಿಕೊಂಡು ಹೋಗುವ ಮಾರಣಾಂತಿಕ ಅಪಾಯ ಎದುರಿಸಬೇಕಾಗುತ್ತದೆ ಅದರೂ ಅನಿವಾರ್ಯದ ಬಳಕೆ ಇದಾಗಿದ್ದು ಜನಪ್ರತಿನಿಧಿಗಳ ನಿರ್ಲಕ್ಷದಿಂದಾಗಿ ನಮ್ಮ ಗೋಳು ಕೇಳೋರೀಲ್ಲದ ಸ್ಥಿತಿಯಾಗಿದೆ ಸ್ವಾಮಿ ಎಂದು ತಮ್ಮ ಅಸಹಾಯಕತೆಯನ್ನು ಪೋಸ್ಟ್ ಮ್ಯಾನ್ ಸುದ್ದಿ ಬಳಗದೊಂದಿಗೆ ಗ್ರಾಮಸ್ಥರು ಹಂಚಿಕೊಂಡರು.

ಈ ಗ್ರಾಮದ ಜನಗಳು ಕೃಷಿ ಮತ್ತು ಹೈನುಗಾರಿಕೆಯನ್ನು ನೆಚ್ಚಿಕೊಂಡಿದ್ದು ಜೀವನ ನಡೆಸುತ್ತಿದ್ದಾರೆ ಸುಮಾರು ನೂರಕ್ಕೂ ಅಧಿಕ ಕುಟುಂಬಗಳಿರುವ ಇಲ್ಲನ ಜನ ಮಕ್ಕಳು ಶಾಲೆ, ಅಸ್ಪತ್ರೆ, ಸಂತೆ ಇನ್ನಿತರ ದೈನಂದಿನ ಕಾರ್ಯಗಳಿಗೆ ರಿಪ್ಪನ್‌ಪೇಟೆ ಪಟ್ಟಣಕ್ಕೆ ಬರಬೇಕಾಗಿದೆ. ಗ್ರಾಮಗಳ ಸಮೀಪದ ಮಾರ್ಗ ಅಸುರಕ್ಷತ ಕಾಲಸಂಕವನ್ನು ಬಳಸಬೇಕಿದೆ ಸರಕುಸರಂಜಾಮುಗಳನ್ನು ವಾಹನದಲ್ಲಿ ಬದಲಿ ಮಾರ್ಗದಲ್ಲಿ ಕೊಂಕಣ ಸುತ್ತಿ ಮೈಲಾರಕ್ಕೆ ಹೋದಂತೆ ಕಣಬಂದೂರು ಮಾರ್ಗದ ಸುಮಾರು 10 ಕಿ.ಮೀ.ದೂರ ಸುತ್ತಾಡಿಕೊಂಡು ಸಾಗಬೇಕಿದೆ ಸಣ್ಣಪುಟ್ಟ ಮಕ್ಕಳನ್ನು ಅಂಗನವಾಡಿಗಳಿಗೆ ಹಾಗೂ ಪ್ರಾಥಮಿಕ ಶಾಲೆಗಳಿಗೆ ಕಳುಹಿಸುವುದು ಹರಸಾಹಸವಾಗಿದ್ದಯ ಮಕ್ಕಳ ಭವಿಷ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ.

ಕಳೆದ 10 ವರ್ಷದಲ್ಲಿ ಚಿಕ್ಕಜೇನಿ ಬಳಿಯಲ್ಲಿ ಕಾಲಸಂಕ ದಾಟುವಾಗ ಎರಡು ಮಕ್ಕಳು ಅಕಸ್ಮಿಕ ಕಾಲು ಜಾರಿ ನೀರಿಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದು ಕಳೆದ ವರ್ಷದಲ್ಲಿ ಸಹ ತೀರ್ಥಹಳ್ಳಿ ವ್ಯಾಪ್ತಿಯಲ್ಲಿ ಇಂತಹ ದುರ್ಘಟನೆಗಳು ಸಂಭವಿಸಿದ್ದರೂ ಕೂಡಾ ಕ್ಷೇತ್ರದ ಶಾಸಕರು ಹಾಗೂ ರಾಜ್ಯ ಗೃಹ ಸಚಿವರಿಗೆ ಬೆಳಕೋಡು ಕರಡಿಗ ಗ್ರಾಮಸ್ಥರುಗಳು ನೀಡಿರುವ ಮನವಿ ಗಮನಕ್ಕೆ ಬಂದಂತೆ ಕಾಣುತ್ತಿಲ್ಲವೇ,ವಿಧಾನಸಭಾ ಅಧಿವೇಶನದಲ್ಲಿ ಸಾಗರ-ಹೊಸನಗರ ತಾಲೂಕಿನ ಕಾಲಸಂಕ ವಿಚಾರವಾಗಿ ದ್ವನಿ ಎತ್ತಿದರೆ ಹೊರತು ಅನುಷ್ಟಾನಗೊಳಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದಾರೆಂದು ಗ್ರಾಮಸ್ಥರು ಅಕ್ರೋಶಿತರಾಗಿದ್ದಾರೆ.

ಇನ್ನಾದರೂ ಈ ಕ್ಷೇತ್ರದ ಜನಪ್ರತಿನಿದಿಗಳು ಗಮನಹರಿಸಿ ಜಂಬಳ್ಳಿ-ಯಡಗುಡ್ಡೆ,ಸಂಪಳ್ಳಿ, ಕಾರಗೋಡು, ಬೆಳಕೋಡು, ಕರಡಿಗ ಗ್ರಾಮಗಳ ಜನರ ಸಮಸ್ಯೆಗೆ ಪರಿಹಾರ ಕಲ್ಪಿಸಲು ಮುಂದಾಗುವರೇ ಕಾದು ನೋಡಬೇಕಾಗಿದೆ ಎಂದು ಗ್ರಾಮದ ರೈತ ರಾಮಪ್ಪ ಕರಡಿಗ ರವರು ಹೇಳಿದರು.

ನಮ್ಮೂರಿನ ಹಳ್ಳಕ್ಕೆ ಸೇತುವೆ ನಿರ್ಮಿಸಿ ಕೊಡುವಂತೆ ಸಚಿವರಿಗೆ ಸಂಸದರಿಗೆ ಮನವಿ ಸಲ್ಲಿಸಿದ್ದೇವೆ ಸಚಿವರು ಮಂಜೂರು ಮಾಡಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ ಇಲ್ಲಿನ ಜನಗಳಿಗೆ ಅತೀ ಅಗತ್ಯವಾಗಿರುವ ಈ ಕಾಲಸಂಕ ಕಾಮಗಾರಿಯನ್ನು ಕೂಡಲೇ ಮಾಡುವಂತೆ ನಾನು ಸತತ ಪ್ರಯತ್ನ ಮಾಡುತ್ತಿದ್ದೇನೆ ಎಂದು ಹೆದ್ದಾರಿಪುರ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ಲಲಿತಾ ರವರು ಹೇಳುತ್ತಾರೆ.

ಒಟ್ಟಾರೆಯಾಗಿ ಶಿವಮೊಗ್ಗ ಜಿಲ್ಲೆಯ ಮೂವರು ಮುಖ್ಯಮಂತ್ರಿಗಳನ್ನು ನೀಡಿದ್ದು ಮುಂದುವರಿದ ಜಿಲ್ಲೆಗಳ ಪೈಕಿ ಗೃಹ ಸಚಿವರ ತವರು ಕ್ಷೇತ್ರವಾದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಒಂದು ಕುಗ್ರಾಮ ಕರಡಿಗ-ಬೆಳಕೋಡು ಗ್ರಾಮಸ್ಥರಿಗೆ, ರೈತ, ಕೂಲಿ ಕಾರ್ಮಿಕರಿಗೆ ಸುವ್ಯವಸ್ತೆಯ ರಸ್ತೆ ಸಂಪರ್ಕ ವಿಲ್ಲದೆ ಇರುವುದು ನಾಚಿಕೆಗೇಡಿನ ವಿಷಯವಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

3 days ago