ರಿಪ್ಪನ್‌ಪೇಟೆ: ಪಟ್ಟಣದ ರೋಟರಿ ಕ್ಲಬ್‌ನ ನೂತನ ಪಧಾದಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜುಲೈ 17ರ ಭಾನುವಾರ ವಿಶ್ವಮಾನವ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ನೂತನ ಕಾರ್ಯದರ್ಶಿ ಸವಿತಾ ರಾಧಾಕೃಷ್ಣ ತಿಳಿಸಿದರು.
ಪಟ್ಟಣದ ರೋಟರಿ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಮ್ಮ ಸಂಸ್ಥೆಯ ಸದಸ್ಯರು ಪ್ರಪ್ರಥಮವಾಗಿ ಮಹಿಳಾ ಅಧ್ಯಕ್ಷರು ಮತ್ತು ಕಾರ್ಯದರ್ಶಿಯನ್ನು ಆಯ್ಕೆ ಮಾಡಿದ್ದಾರೆ, ಇದರ ಉದ್ದೇಶ ಮಹಿಳಾ ಸಬಲೀಕರಣವಾಗಿದ್ದು ಸೇವೆಯಲ್ಲಿ ಮಹಿಳೆಯರ ಹೆಚ್ಚು ಪಾಲ್ಗೊಳ್ಳುವಿಕೆಯನ್ನು ಪ್ರತಿನಿಧಿಸುತ್ತದೆ. ಸಂಸ್ಥೆಯು ಇಮ್ಯಾಜಿನ್ ರೋಟರಿ ಎಂಬ ಕಲ್ಪನೆಯನ್ನು ಕೊಟ್ಟಿದ್ದು ಸಮಾನ ಶಿಕ್ಷಣ, ಅಂಗಾಂಗ ದಾನ, ಸ್ತ್ರೀ ಸಬಲೀಕರಣ ಹಾಗೂ ಜಲಯಾತ್ರೆಯನ್ನು ಹಮ್ಮಿಕೊಂಡಿದ್ದು ಈ ಎಲ್ಲಾ ಕಾರ್ಯಕ್ರಮಗಳಿಂದ ಸ್ವಾಸ್ಥ ಸಮಾಜ ನಿರ್ಮಿಸಲು ಶ್ರಮಿಸುತ್ತಿದೆ, ಒಟ್ಟಾರೆಯಾಗಿ ಫಲಾನುಭವಿಗಳಿಗೆ ಯೋಜನೆಗಳು ತಲುಪಿ ಆ ಮೂಲಕ ಸಮ ಸಮಾಜ ನಿರ್ಮಾಣದ ಕಲ್ಪನೆ ಹೊಂದಲಾಗಿದೆ ಎಂದರು.
ಪದಗ್ರಹಣ ಸಮಾರಂಭದಲ್ಲಿ ಮಾಜಿ ಜಿಲ್ಲಾ ಗವರ್ನರ್ ಹೆಚ್.ಎಲ್.ರವಿ ಪದವಿ ಪ್ರಧಾನ ಅಧಿಕಾರಿಗಳಾಗಿ ಆಗಮಿಸುತ್ತಿದ್ದು ಅಸಿಸ್ಟಂಟ್ ಗವರ್ನರ್ ಡಾ|| ಗುಡದಪ್ಪ ಕಸಬಿ ಹಾಗೂ ಕಿರಣ್ ಜೆ.ಪಿ ಉಪಸ್ಥಿತರಿರುತ್ತಾರೆ ಎಂದು ತಿಳಿಸಿದರು.
ಇದೇ ಸಮಾರಂಭದಲ್ಲಿ ಎಸ್. ಎಸ್. ಎಲ್. ಸಿ. ದ್ವಿತೀಯ ಪಿಯುಸಿ ಹಾಗೂ ಅಂತಿಮ ಪದವಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾಯಕ್ರಮ ಏರ್ಪಡಿಸಲಾಗಿದೆ ಎಂದರು.
ಪತ್ರಿಕಾ ಗೋಷ್ಠಿಯಲ್ಲಿ ನೂತನ ಅಧ್ಯಕ್ಷೆ ಪ್ರಮೀಳಾ ಲಕ್ಷ್ಮಣಗೌಡ, ಎಂ.ಬಿ.ಲಕ್ಷಣ ಗೌಡ,ವರ್ತೆಶ್ ಹೆಚ್.ಎಂ, ಎಂ.ಬಿ.ಮಂಜುನಾಥ, ರಾಧಾಕೃಷ್ಣ.ಜೆ , ಗಣೇಶ ಕಾಮತ್ , ಡಾಕಪ್ಪ, ರಾಧಾಕೃಷ್ಣ ಎಚ್. ಎ.ಇನ್ನಿತರಿದ್ದರು.
ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇
ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…
ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…
RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…