ಸಾಗರದಲ್ಲಿ ಪೊಲೀಸ್ ವೈಫಲ್ಯ ಖಂಡಿಸಿ ಬೃಹತ್ ಪ್ರತಿಭಟನೆ : ಪೊಲೀಸರು ಸಾಗರ ಶಾಸಕರ ಕೈಗೊಂಬೆಯಾಗಿದ್ದಾರೆ : ಬೇಳೂರು ಗೋಪಾಲಕೃಷ್ಣ

ಮಾರ್ಚ್17 ರಂದು ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಸರ್ವಸದಸ್ಯರ ಸಭೆಯಲ್ಲಿ ನಡೆದ ಗಲಾಟೆಯಲ್ಲಿ ಉಪಾಧ್ಯಕ್ಷ ಶ್ರೀಪಾದ ಹೆಗಡೆ ಮತ್ತು ಪ್ರಧಾನ ಕಾರ್ಯದರ್ಶಿ ಜಗದೀಶ್ ಗೌಡ ಅವರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ದೂರು ದಾಖಲಿಸದ ಕ್ರಮ ಖಂಡಿಸಿ ಗುರುವಾರ ಬ್ರಾಹ್ಮಣ ವೀರಶೈವ ಒಕ್ಕೂಟದ ವತಿಯಿಂದ ಡಿವೈಎಸ್‌ಪಿ ಕಚೇರಿ ಎದುರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.


ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರ ಹಾಗೂ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು, ಎಂಡಿಎಫ್‌ನಲ್ಲಿ ಬ್ರಾಹ್ಮಣ ಸಮುದಾಯದ ಮುಖಂಡ ಶ್ರೀಪಾದ ಹೆಗಡೆ ಮತ್ತು ಲಿಂಗಾಯಿತ ಸಮಾಜದ ಮುಖಂಡ ಜಗದೀಶ್ ಗೌಡ ಅವರ ಮೇಲೆ ನಡೆದ ಹಲ್ಲೆ ಅತ್ಯಂತ ಅಮಾನವೀಯವಾಗಿದೆ. ಶಾಸಕ ಹರತಾಳು ಹಾಲಪ್ಪ ಅವರೇ ಹಲ್ಲೆಗೆ ನೇರ ಕಾರಣವಾಗಿದ್ದಾರೆ. ಶಾಸಕರಾಗಿ ತಾವೊಬ್ಬರೇ ಅಲ್ಲಿನ ಸರ್ವಸದಸ್ಯರ ಸಭೆಗೆ ಹೋಗದೆ, ಗೂಂಡಾಗಳನ್ನು ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ. ಘಟನೆ ನಡೆದು ಮೂರ‍್ನಾಲ್ಕು ತಿಂಗಳು ಕಳೆದರೂ ಈತನಕ ಪೊಲೀಸರು ತಪ್ಪಿತಸ್ಥರ ವಿರುದ್ಧ ಎಫ್‌ಐಆರ್ ದಾಖಲು ಮಾಡದೆ ಇರುವುದು ನೋಡಿದರೆ ಪೊಲೀಸರು ಶಾಸಕರ ಕೈಗೊಂಬೆಯಂತೆ ವರ್ತಿಸುತ್ತಿರುವುದು ಎದ್ದು ಕಾಣುತ್ತಿದೆ. ಇವತ್ತು ಶ್ರೀಪಾದರನ್ನು ಬಂಧಿಸಿ ಎಂದು ಪ್ರತಿಭಟನೆ ನಡೆಸಲಾಗುತ್ತಿದೆ. ಹಲ್ಲೆ ಮಾಡಿದವರ ಬದಲು ಹಲ್ಲೆಗೊಳಗಾದವರನ್ನು ಬಂಧಿಸುವ ಆಗ್ರಹ ಮಾಡುತ್ತಿರುವುದು ವಿಚಿತ್ರ ಬೆಳವಣಿಗೆಯಾಗಿದೆ. ಸರ್ಕಾರ ಅವರದ್ದಿರುವಾಗ ಶ್ರೀಪಾದರಾವ್ ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಅನುಮಾನವಿದ್ದರೆ, ಅವರದೇ ಸರ್ಕಾರವಿರುವಾಗ ತನಿಖೆ ನಡೆಸಬಹುದಿತ್ತು. ಅಧಿಕಾರ ಇದೆ ಎಂದು ಹಲ್ಲೆ ಮಾಡಿಸಿರುವುದರಿಂದ ಶಾಸಕರ ಮೇಲೂ ಎಫ್‌ಐಆರ್ ದಾಖಲಾಗಬೇಕು ಎಂದು ಆಗ್ರಹಿಸಿದರು.

ಆಮ್‌ಆದ್ಮಿ ಪಕ್ಷದ ರಾಜ್ಯ ಮುಖಂಡ ಕೆ.ದಿವಾಕರ್ ಮಾತನಾಡಿ, ಘಟನೆ ನಡೆದು ನಾಲ್ಕು ತಿಂಗಳು ಕಳೆದರೂ ಈತನಕ ಪೊಲೀಸರು ಎಫ್‌ಐಆರ್ ದಾಖಲು ಮಾಡದಿರುವುದನ್ನು ನೋಡಿದರೆ ಪೊಲೀಸರು ಆಳುವ ಸರ್ಕಾರ ಮತ್ತು ಶಾಸಕರ ವಾಚ್‌ಮನ್‌ನಂತೆ ಕೆಲಸ ಮಾಡುತ್ತಿರುವುದಕ್ಕೆ ನಾವು ದಿಕ್ಕಾರ ಹೇಳುತ್ತಿದ್ದೇವೆ. ವಿದ್ಯಾದೇಗುಲದಲ್ಲಿ ಇಂತಹ ಘಟನೆ ನಡೆದಿರುವುದನ್ನು ಸಮಸ್ತ ಜನರು ಖಂಡಿಸಬೇಕು. ಕಳೆದ ಮೂರು ತಿಂಗಳಿನಲ್ಲಿ ಸಾಗರದಲ್ಲಿ ನಡೆದ ಎಲ್ಲ ಪ್ರಕರಣಗಳನ್ನು ಸಿಓಡಿ ತನಿಖೆಗೆ ಒಳಪಡಿಸಲಿ. ಸಾಗರದ ಪೊಲೀಸರ ಮೇಲೆ ನಮಗೆ ನಂಬಿಕೆ ಇಲ್ಲ ಎಂದರು.

ಸಾಗರ ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಮಾತನಾಡಿ, ಎಂಡಿಎಫ್ ಎಜಿಎಂನ ಮುಂಚಿನ ದಿನವೇ ಹಲ್ಲೆ ನಡೆಸುವ ಏರ್ಪಾಡು ನಡೆದಿದೆ. ಇಲ್ಲದಿದ್ದರೆ ಅವತ್ತಿನ ಸಭೆಗೆ ಹಾಲಪ್ಪ ಒಬ್ಬರೇ ಬರುತ್ತಿದ್ದರೇ ವಿನಃ ತಮ್ಮ ಪಡೆಯನ್ನು ತರುತ್ತಿರಲಿಲ್ಲ. ಸಾಂಗ್ಲಿಯಾನ, ಕೆಂಪಯ್ಯ, ಅರುಣ್ ಚಕ್ರವರ್ತಿಯಂತಹ ಪೊಲೀಸರನ್ನು ಕಂಡ ಸಾಗರದಲ್ಲಿ ಹಲ್ಲೆಗೊಳಗಾದವರ ದೂರಿಗೆ ಎಫ್‌ಐಆರ್ ಮಾಡದ ಎಎಸ್‌ಪಿಯಂತವರನ್ನೂ ಕಾಣುವಂತಾಗಿದೆ ಎಂದು ವ್ಯಂಗ್ಯವಾಡಿದರು.

ಈ ಸಂದರ್ಭದಲ್ಲಿ ಶ್ರೀಪಾದ ಹೆಗಡೆ ನಿಸ್ರಾಣಿ, ಜಗದೀಶ್ ಗೌಡ, ಅನಿತಾಕುಮಾರಿ, ಕೆ.ಎನ್.ಶ್ರೀಧರ್, ಯು.ಎಚ್.ರಾಮಪ್ಪ, ಬಿ.ಎಚ್.ರಾಘವೇಂದ್ರ, ಚಂದ್ರಮೌಳಿ ಹೊಸನಗರ, ವಿರೇಶ್ ಗೌಡ, ರವೀಶ್ ಕುಮಾರ್, ಸೋಮಶೇಖರ ಲ್ಯಾವಿಗೆರೆ, ವಿಜಯಕುಮಾರ್, ಸಂತೋಷ್ ಶಿವಾಜಿ, ದಾನಪ್ಪ ದಳವಾಯಿ, ಲಿಂಗರಾಜು, ರವಿ ವಿಜಯನಗರ ಇನ್ನಿತರರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

1 hour ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

5 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

8 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

20 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

20 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

22 hours ago