w
Headlines
Home » ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿದ ಗೃಹಸಚಿವ ಆರಗ ಜ್ಞಾನೇಂದ್ರ

ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿದ ಗೃಹಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ: ಪಟ್ಟಣದಲ್ಲಿ ಈ ಬಾರಿ ಅನೇಕ ವಿದ್ಯಾರ್ಥಿಗಳು ಸಾಧನೆ ಮಾಡಿ ತೀರ್ಥಹಳ್ಳಿಗೆ ಕೀರ್ತಿ ತಂದಿದ್ದಾರೆ. ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಆಡಳಿತವು ಎಸ್ ಎಸ್ ಎಲ್ ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಎಂಬಿಬಿಎಸ್ ನಲ್ಲಿ ಹೆಚ್ಚು ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದ ವಿದ್ಯಾರ್ಥಿಗಳಿಗೆ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರರವರ ಉಪಸ್ಥಿತಿಯಲ್ಲಿ ಸನ್ಮಾನ ಕಾರ್ಯಕ್ರಮವನ್ನು ಶನಿವಾರ ಏರ್ಪಡಿಸಲಾಗಿತ್ತು.
ಈ ಕಾರ್ಯಕ್ರಮ ದಲ್ಲಿ ಸುಮಾರು 60 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೃಹಸಚಿವ ಆರಗ ಜ್ಞಾನೇಂದ್ರ ಒಂದು ಲಕ್ಷ ಐವತ್ತಾರು ಸಾವಿರ ಪ್ರೋತ್ಸಾಹ ಧನವನ್ನು ಹಾಗೂ ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಿದರು.  
ಈ ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಅರಗ ಜ್ಞಾನೇಂದ್ರ, ತಹಶೀಲ್ದಾರ್ ಅಮೃತ್ ಅತ್ರೇಶ, ಮುಖ್ಯಾಧಿಕಾರಿ ಕುರಿಯಾಕೋಸ್ ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಶಬನಮ್ ಉಪಾಧ್ಯಕ್ಷ ಜಯಪ್ರಕಾಶ್ ಶೆಟ್ಟಿ, ಸೊಪ್ಪುಗುಡ್ಡೆ ರಾಘವೇಂದ್ರ, ಸಂದೇಶ್ ಜವಳಿ, ದತ್ತಣ್ಣ ಸುಶೀಲ ಶೆಟ್ಟಿ, ರೆಹಮತುಲ್ಲಾ ಅಸಾದಿ, ಬಿ.ಗಣಪತಿ , ಗೀತಾ ರಮೇಶ್ ಸೇರಿ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.