ಸಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ವಿಧ್ಯಾರ್ಥಿನಿಯೊಬ್ಬರ ಮೇಲೆ ಹಿರಿಯ ವೈದ್ಯರೊಬ್ಬರಿಂದ ನಡೆದಿರುವ ಲೈಂಗಿಕ ದೌರ್ಜನ್ಯದ ಪ್ರಕರಣವನ್ನು ಮುಚ್ಚಿಹಾಕಲಾಗಿದ್ದು, ಈ ಕೂಡಲೆ ತನಿಖೆ ನಡೆಸಿ ತಪ್ಪಿತಸ್ಥ ವೈದ್ಯರ ವಿರುದ್ಧ ಕಠಿಣ ಕ್ರಮವನ್ನು ಕೈಗೊಂಡು ಪೀಪಲ್ಸ್ ಲಾಯರ್ ಗಿಲ್ಡ್ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ಕಳೆದ ಶುಕ್ರವಾರ ಅಂದರೆ ದಿನಾಂಕ:15-07-2022 ರಂದು ಸಿಮ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಹಿರಿಯ ಶಸ್ತ್ರ ಚಿಕಿತ್ಸೆ ವೈದ್ಯರಾದ ಆಶ್ವಿನ್ ಹೆಬ್ಬಾರ್, ಎಂಬುವರಿಂದ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಉತ್ತರಭಾರತೀಯ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಸಿಮ್ಸ್ ನಿರ್ದೇಶಕರಿಗೆ ಲಿಖಿತ ದೂರನ್ನು ನೀಡಿದ್ದಾರೆ.
ದೂರನ್ನು ಗಂಭೀರವಾಗಿ ಪರಿಗಣಿಸದ ಸಿಮ್ಸ್ ನಿರ್ದೇಶಕ ಡಾ|| ಓ.ಎಸ್. ಸಿದ್ದಪ್ಪ ಮತ್ತು ತನಿಖಾ ಸಂಸ್ಥೆಯ ಮುಖ್ಯಸ್ಥರಾದ ಡಾ| ರೇಖಾ ದೌರ್ಜನ್ಯಕೊಳಗಾದ ವಿದ್ಯಾರ್ಥಿನಿಯ ಮೇಲೆ ಒತ್ತಡ ಹೇರಿ ನೀಡಿರುವ ದೂರನ್ನು ಹಿಂಪಡೆಯುವಂತೆ ಮಾಡಿರುವುದು ಖಂಡನೀಯ ಎಂದು ಗಿಲ್ಡ್ ಆಗ್ರಹಿಸಿದೆ.
ಲೈಂಗಿಕ ದೌರ್ಜನ್ಯದ ವಿಷಯವ ಹಲವು ಪತ್ರಿಕೆಗಳಲ್ಲಿ ಸುದ್ದಿಯಾಗಿದ್ದು, ಸಾರ್ವಜನಿಕವಾಗಿ ಈ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ವೈದ್ಯಕೀಯ ಕಾಲೇಜೊಂದರಲ್ಲಿಯೇ ಈ ಪರಿಸ್ಥಿತಿ ಆದರೆ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರಿಗೆ ರಕ್ಷಣೆ ಇದೆಯೇ ಎಂಬ ಅನುಮಾನಗಳು ವ್ಯಕ್ತವಾಗಿರುತ್ತದೆ ಎಂದು ಗಿಲ್ಡ್ ಮನವಿಯಲ್ಲಿ ಆಕ ವ್ಯಕ್ತಪಡಿಸಿದೆ.
ನೊಂದ ಮಹಿಳೆ ಉತ್ತರ ಭಾರತೀಯದವಳಾಗಿರುವುದರಿಂದ ಅವರಿಗೆ ಇಲ್ಲಿ ಯಾವುದೇ ಬೆಂಬಲ್ಲವಿಲ್ಲದೇ ಇರುವುದರಿಂದಾಗಿ ಅಸಹಾಯಕರಾಗಿರುವುದನ್ನು ದುರುಪಯೋಗ ಪಡಿಸಿಕೊಂಡು ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ ಎಂದು ವಕೀಲರ ಸಂಘಟನೆ ಆರೋಪಿಸಿದೆ.
ಮನವಿ ನೀಡುವ ಸಂದರ್ಭದಲ್ಲಿ ಪೀಪಲ್ಸ್ ಲಾಯರ್ ಗಿಲ್ಡ್ ನ ಶ್ರೀಪಾಲ್, ವಿಜಯ ಕುಮಾರ್, ರಾಜ್ ಚರಣ್ ಮೊದಲಾದ ವಕೀಲರು ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್