ಹುಂಚ ಸೊಸೈಟಿಯ ಐವರು ನಿರ್ದೇಶಕರ ರಾಜೀನಾಮೆ!!!!!! ಸೂಪರ್ ಸೀಡ್ ಆಗುತ್ತಾ ಹೊಂಬುಜಾ ಸೊಸೈಟಿ!!!!??????

ಕಳೆದ ಹಲವು ದಿನಗಳಿಂದ ವಿವಾದಗಳಿಂದಲೇ ಸುದ್ದಿಯಲ್ಲಿರುವ ಹೊಂಬುಜ ವ್ಯವಸಾಯ ಸಹಕಾರ ಸಂಘದ ಐವರು ನಿರ್ದೇಶಕರು ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಹೊಂಬುಜಾ ಸೊಸೈಟಿಯ ನಿರ್ದೇಶಕ ಸ್ಥಾನಕ್ಕೆ ಐವರು ರಾಜೀನಾಮೆ ನೀಡಿದ್ದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.ಈ ಹಿಂದೆ ಹಲವು ಬಾರಿ ಹೊಂಬುಜಾ ಸೊಸೈಟಿಯಲ್ಲಿ ಅಕ್ರಮ ನಡೆದಿದೆ ಎಂದು ಷೇರುದಾರರು ಆರೋಪಿಸುತಿದ್ದರು ತಿಪ್ಪೆ ಸಾರಿಸುತ್ತಿದ್ದ ಸಹಕಾರ ಇಲಾಖೆ ಈಗ ನಡೆದ ಆಡಿಟ್ ವರದಿಯಿಂದ ದಂಗು ಬಡಿದು ಕೂತಿದೆ ಎನ್ನಲಾಗುತ್ತಿದೆ.


ಈಗಾಗಲೆ ಮೇಲ್ನೋಟಕ್ಕೆ ಹೆಚ್ಚು ಹಣದ ದುರುಪಯೋಗದ ವಾಸನೆ ಸಿಕ್ಕಿದ್ದು ಸೊಸೈಟಿ ಸೂಪರ್ ಸೀಡ್ ಆಗುವತ್ತ ಹೆಜ್ಜೆ ಇಟ್ಟಿದೆ ಎನ್ನಲಾಗುತಿದ್ದೂ ಇದರ ಸುಳಿವನ್ನು ಅರಿತ ಹಲವು ನಿರ್ದೇಶಕರು ರಾಜಿನಾಮೆ ಪತ್ರ ಕೊಟ್ಟು ತಮ್ಮ ಸ್ಥಾನ ಶಾಶ್ವತ ಕಪ್ಪು ಪಟ್ಟಿ ಸೇರದಂತೆ ತಡೆಯುವ ಪ್ರಯತ್ನಕ್ಕಿಳಿದಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಈ ಹಿಂದೆಯೂ ನಡೆದಿತ್ತು ಹಲವು ವಿವಾದ….


ಈ ಸೊಸೈಟಿಯ ಸಿಇಒ ವಿರುದ್ದ ತಿರುಗಿ ಬಿದ್ದ ನಿರ್ದೇಶಕರ ತಂಡ ಅವರನ್ನು ಅಮಾನತ್ತು ಪಡಿಸುವಲ್ಲಿಯೂ ಯಶಸ್ವಿಯಾಗಿದ್ದವು.ಅವರ ಬದಲಿಗೆ ಬಂದ ನೂತನ ಆಡಳಿತಾಧಿಕಾರಿ ನೇತೃತ್ವದಲ್ಲಿ ನಡೆದ ಆಡಿಟ್ ರಿಪೊರ್ಟ್ ಈಗ ಹೊರ ಬಂದಿದ್ದು ದೊಡ್ಡ ಹಗರಣದ ವಾಸನೆ ಮೂಗಿಗೆ ಬಡೆಯುತ್ತಿದೆ.
ಹಗರಣದ ಬಗ್ಗೆ ಸಹಕಾರ ಇಲಾಖೆ ತನಿಖೆ ಸರಿಯಾಗಿ ನಡೆಸಿದರೆ ಹಲವು ತಿಮಿಂಗಲಗಳ ಬಣ್ಣ ಬಯಲಾಗುವುದು ನಿಶ್ಚಿತ…



ತೀರ್ಥಹಳ್ಳಿ ತಾಲ್ಲೂಕಿನ ಗ್ರಾಮ ಪಂಚಾಯತ್ ಒಂದರ ಅಧ್ಯಕ್ಷರಾಗಿ ಹೊಸನಗರ ತಾಲ್ಲೂಕಿನ ವ್ಯವಸಾಯ ಸಹಕಾರ ಸಂಘಕ್ಕೆ ಉಪಾಧ್ಯಕ್ಷರಾಗಿರುವ ವಿವಾದ:


ಇತ್ತೀಚೆಗೆ ಸೊಸೈಟಿಯ ವಿವಾದಗಳ ನಡುವೆ ಸೊಸೈಟಿಯ ಉಪಾಧ್ಯಕ್ಷರ ಮೇಲೆ ಇನ್ನೊಂದು ಆರೋಪ ಕೇಳಿಬಂದಿತ್ತು . ಈಗಾಗಲೇ ತೀರ್ಥಹಳ್ಳಿ ತಾಲ್ಲೂಕಿನ ಗ್ರಾಮ ಪಂಚಾಯತ್ ಒಂದರ ಅಧ್ಯಕ್ಷರಾಗಿರುವವರು ಹೊಸನಗರ ತಾಲೂಕಿನ ಹೊಂಬುಜದಲ್ಲಿ ಜಮೀನು ಇರುವ ಕಾರಣಕ್ಕೆ  ಹೊಂಬುಜ ಸೌಹಾರ್ದ ಸಹಕಾರ ಸಂಘದಲ್ಲಿ ಅಕ್ರಮವಾಗಿ ನಿವಾಸಿ ದೃಡಿಕರಣ ನೀಡಿ ಷೇರು ಪಡೆದಿರುತ್ತಾರೆ , ಉಪಾಧ್ಯಕ್ಷರಾಗಲು ಕಾನೂನಿನಲ್ಲಿ ಯಾವುದೇ ಅವಕಾಶವಿಲ್ಲದೆ ಇದ್ದರೂ ತನ್ನ ರಾಜಕೀಯ ಪ್ರಭಾವ ಬಳಸಿ ಅಕ್ರಮ ಹುದ್ದೆ ಪಡೆದಿದ್ದರು. ಅಕ್ರಮ ನಿವಾಸಿ ಧೃಡೀಕರಣದ ಆರೋಪ ಸಾಬೀತಾದರೆ ತೀರ್ಥಹಳ್ಳಿ ತಾಲ್ಲೂಕಿನ ಗ್ರಾಪಂ ಅಧ್ಯಕ್ಷಗಿರಿಯೂ ರದ್ದಾಗಲಿದೆ ಎನ್ನಲಾಗುತ್ತಿದೆ.

ಒಟ್ಟಾರೆಯಾಗಿ ವಿವಾದಗಳಿಂದಲೇ ಪದೇ ಪದೇ ಕುಖ್ಯಾತಿ ಪಡೆಯುತ್ತಿರುವ ಹೊಂಬುಜ ವ್ಯವಸಾಯ ಸಹಕಾರ ಸಂಘದ ಹಗರಣಗಳು ಒಂದೊಂದೆ ಹೊರಬರುತ್ತಿದ್ದು ಈಗ ಸೊಸೈಟಿ ಸೂಪರ್ ಸೀಡ್ ಆಗುವ ಹಂತಕ್ಕೆ ಬಂದು ನಿಂತಿದೆ. ಒಟ್ಟಿನಲ್ಲಿ ಅಪ್ಪ ಅಮ್ಮನ ಜಗಳದಲ್ಲಿ ಕೂಸು ಬಡವಾದಂತೆ ನಿರ್ದೇಶಕರ ಕಿತ್ತಾಟದಲ್ಲಿ ಸೊಸೈಟಿಯ ಷೇರುದಾರರು ಬಡವಾಗುತ್ತಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 hour ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

2 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

24 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago