ಪೊಲೀಸ್ ಇಲಾಖೆ ಜನರ ರಕ್ಷಣೆ ಹಾಗೂ ಸೇವೆಗಾಗಿ ಹಗಲಿರುಳು ಶ್ರಮಿಸುತ್ತಿದೆ.ಜನ ಹಾಗೂ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ವಾಹನ ಸವಾರರಿಗೆ ಅನೇಕ ರೀತಿಯ ಅಭಿಯಾನ ಹಾಗೂ ಅರಿವು ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆ ಮೂಡಿಸುತ್ತಿದೆ.
ಇತ್ತೀಚಿನ ದಿನಗಳಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅದೆಷ್ಟೋ ಕುಟುಂಬಗಳು ಅನಾಥವಾಗಿವೆ.ಈ ದಿಸೆಯಲ್ಲಿ ಅಪಘಾತ ತಡೆಯಲು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆ ಪೊಲೀಸ್ ಇಲಾಖೆ ವಿಶಿಷ್ಟ ರೀತಿಯಲ್ಲಿ ಕಾರ್ಯೋನ್ಮುಖರಾಗಿದ್ದಾರೆ.
ರಿಪ್ಪನ್ ಪೇಟೆಯ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಶಿವಾನಂದ ಕೋಳಿ ಮತ್ತು ಅವರ ತಂಡ ಅಪಘಾತ ವಲಯಗಳಲ್ಲಿ ರಿಫ್ಲೆಕ್ಟರ್ ರೇಡಿಯಂ ನಾಮಫಲಕವನ್ನು ಮರಗಳಿಗೆ ಅಳವಡಿಸುವುದರ ಮೂಲಕ ವಾಹನ ಸವಾರರಿಗೆ ಹಾಗೂ ಪಾದಚಾರಿಗಳಿಗೆ ರಸ್ತೆ ಸುರಕ್ಷತೆಯ ಅರಿವು ಮೂಡಿಸುವ ಕಾರ್ಯವನ್ನು ಮಾಡುತ್ತಿದ್ದಾರೆ.
ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ್ ಕೋಳಿ ಮತ್ತು ಅವರ ಸಿಬ್ಬಂದಿ ವರ್ಗದ ಮಾಡುತ್ತಿರುವ ಈ ಸಮಾಜಮುಖಿ ಕಾರ್ಯವು ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ.
ಈ ಸಂದರ್ಭದಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಉಮೇಶ್,ಶಿವಕುಮಾರ್, ಮಧುಸೂದನ್ ಎನ್,ಮಂಜುನಾಥ್ ,ಬಾಬು ಪ್ರಸಾದ್ ಇದ್ದರು