ಹೊಸನಗರ ತಾಲೂಕಿನ ನಗರ ಹೋಬಳಿಯ ಶಾಲೆಗಳಿಗೆ ಮಾತ್ರ ರಜೆ : ಸಾಗರ ತಾಲ್ಲೂಕಿನಾದ್ಯಂತ ಶಾಲೆಗಳಿಗೆ ರಜೆ : ತೀರ್ಥಹಳ್ಳಿಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಪತ್ತೆ

ಹೊಸನಗರ ತಾಲ್ಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವುದರಿಂದ ಮಕ್ಕಳ ಸುರಕ್ಷತೆಯ ಹಿತ ದೃಷ್ಟಿಯಿಂದ ನಾಳೆ ಗುರುವಾರ ದಿನಾಂಕ 14/07/2022 ರಂದು ಹೊಸನಗರ ತಾಲ್ಲೂಕಿನ ನಗರ ಹೋಬಳಿಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ರವರು ತಿಳಿಸಿದ್ದಾರೆ.

 (ಹೆಚ್ ಆರ್ ಕೃಷ್ಣಮೂರ್ತಿ BEO ಹೊಸನಗರ)


ತಾಲ್ಲೂಕಿನ ಇತರೆ 3 ಹೋಬಳಿಗಳಲ್ಲಿ ಎಡಬಿಡದೆ ಸುರಿಯುತ್ತಿರುವ
ಮಳೆಯಿಂದ ಮಕ್ಕಳಿಗೆ ಶಾಲೆಗೆ ಬರಲು ತೊಂದರೆಯಾಗುತ್ತಿದ್ದಲ್ಲಿ ಅಂತಹ ಮಕ್ಕಳ ಪೋಷಕರಿಗೆ ಶಾಲೆಗೆ ಮಕ್ಕಳನ್ನು ಕಳಿಸಿವುದು ಬೇಡವೆಂದು ತಿಳಿಸುವುದು.

ಒಂದು ವೇಳೆ ಹೆಚ್ಚು ಮಕ್ಕಳಿಗೆ ತೊಂದರೆಯಾಗುತಿದ್ದಲ್ಲಿ SDMC ಯವರೊಂದಿಗೆ ಮುಖ್ಯೋಪಾಧ್ಯಾಯರು ಸಮಾಲೋಚಿಸಿ, ರಜೆಯನ್ನು ನೀಡುವುದು. ರಜೆ ನೀಡಿದ್ದರಿಂದ ಕೊರತೆಯಾಗುವ ಶಾಲಾ ದಿನಗಳನ್ನು ಮುಂಬರುವ ಶನಿವಾರಗಳಂದು ಪೂರ್ಣ ತರಗತಿ ನಡೆಸುವುದರ ಮೂಲಕ ಸರಿದೂಗಿಸುವುದು ಎಂದು ತಿಳಿಸಿದ್ದಾರೆ.

ಸಾಗರ ತಾಲೂಕಿನಾದ್ಯಂತ ಶಾಲೆಗಳಿಗೆ ರಜೆ ಘೋಷಣೆ:

ಸಾಗರ ತಾಲ್ಲೂಕಿನಾದ್ಯಂತ ವಿಪರೀತ ಮಳೆಯಾಗುತ್ತಿದೆ ಮಳೆಯ ಅಬ್ಬರದಿಂದ ವಿದ್ಯಾರ್ಥಿಗಳು ಶಾಲೆಗೆ ತೆರಳುವುದು ಸಾಕಷ್ಟು ತೊಂದರೆಯಾಗುತ್ತಿರುವುದರಿಂದ ದಿನಾಂಕ 14/07/2022 ರ ಗುರುವಾರದಂದು ಸಾಗರ ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ.

ತೀರ್ಥಹಳ್ಳಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಾಪತ್ತೆ:

ತೀರ್ಥಹಳ್ಳಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಾಪತ್ತೆಯಾಗಿದ್ದು ಯಾವುದೇ ಕರೆಗಳನ್ನು ಸ್ವೀಕರಿಸುತ್ತಿಲ್ಲ ,ಸಾರ್ವಜನಿಕರು ಹಾಗೂ ಪೋಷಕರು ಶಾಲೆಯ ರಜೆಯ ಬಗ್ಗೆ ಮಾಹಿತಿ ಪಡೆಯಲು ಕ್ಷೇತ್ರ ಶಿಕ್ಷಣ ಅಧಿಕಾರಿ ಆನಂದ್ ಕುಮಾರ್ ರವರ ನಂಬರ್ ಗೆ ಕರೆ ಮಾಡಿದರೆ ಯಾವುದೇ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ.

ಭಾರಿ ಮಳೆಯ ನಡುವೆ ಶಾಲೆ ರಜೆಯ ಬಗ್ಗೆ ಪೋಷಕರಲ್ಲಿ ಗೊಂದಲ ಉಂಟಾಗುವುದು ಸಹಜ,ಹಾಗಾಗಿ ಪೋಷಕರು ಮಾಹಿತಿಗಾಗಿ ಪರಿತಪಿಸುತ್ತಿರುತ್ತಾರೆ.ಶಾಲೆಯ ರಜೆಗಳ ಬಗ್ಗೆ ಮಾಹಿತಿ ನೀಡಬೇಕಾದ ಜಡ್ಡುಗಟ್ಟಿದ, ಗಟ್ಟಿ ಚರ್ಮದ  ಅಧಿಕಾರಿ ವರ್ಗದವರು ಈ ರೀತಿ ನಿರ್ಲಕ್ಷ್ಯ ವಹಿಸಿದರೆ ಹೇಗೆ ಎಂಬುದು ಸಾರ್ವಜನಿಕರಲ್ಲಿ ಮೂಡಿರುವ ಯಕ್ಷ ಪ್ರಶ್ನೆಯಾಗಿದೆ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 hour ago

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

9 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

10 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

14 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

18 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

20 hours ago