ಆಗುಂಬೆ ಘಾಟಿಯಲ್ಲಿ ಗುಡ್ದ ಕುಸಿತ : ಮೂರು ಬದಲಿ ಮಾರ್ಗ ವ್ಯವಸ್ಥೆ!!!!!ಯಾವ್ಯಾವುದು ಗೊತ್ತಾ??? ಈ ಸುದ್ದಿ ನೋಡಿ

ತೀರ್ಥಹಳ್ಳಿ : ಆಗುಂಬೆ ಘಾಟಿಯ  10ನೇ ತಿರುವಿನಲ್ಲಿ ಗುಡ್ಡಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ (DC) ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಭೂ ಕುಸಿತದ ಮಣ್ಣು ಮತ್ತು ಮರಗಳನ್ನು ತೆರವುಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಜುಲೈ 12ರ ಮುಂಜಾನೆ 8ಗಂಟೆಯವರೆಗೆ ನಿರ್ಬಂಧಿಸಲಾಗಿದೆ. ಆ ಬಳಿಕ ಜುಲೈ 30ರವರೆಗೆ ಈ ಮಾರ್ಗದಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ. ಮೂರು…

Read More

ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ : ಸಂಚಾರ ಸಂಪೂರ್ಣ ಬಂದ್

ಆಗುಂಬೆ ಘಾಟಿಯಲ್ಲಿ ವ್ಯಾಪಕ ಮಳೆಯಾಗಿರುವ ಹಿನ್ನಲೆಯಲ್ಲಿ ತಿರುವಿನಲ್ಲಿ ಮಣ್ಣುಕುಸಿದಿದ್ದು, ರಸ್ತೆಗೆ ಅಡ್ಡಲಾಗಿ ಭಾರೀ ಗಾತ್ರದ ಮರಬಿದ್ದಿದೆ. ಪರಿಣಾಮ ಸಂಚಾರ ಸಂಪೂರ್ಣ ಬಂದ್ ಆಗಿದೆ.  ಈ ಮಾರ್ಗದಲ್ಲಿ ಹೋದವರು ಸಂಚಾರ ಬಂದ್ ಆಗಿರುವ ಹಿನ್ನಲೆಯಲ್ಲಿ ವಾಪಾಸ್ ಆಗುತಿದ್ದಾರೆ. ಆಗುಂಬೆ ಘಾಟಿ ಕೆಳಗೆ ಸೋಮೇಶ್ವರ ಚೆಕ್​​ಪೋಸ್ಟ್​ ಬಳಿಯಲ್ಲಿಯೇ ವಾಹನಗಳನ್ನು ತಡೆಯಲಾಗುತ್ತಿದೆ.  ಮೇಲ್ಬಾಗ ಆಗುಂಬೆ ಘಾಟಿ ಚೆಕ್​ಪೋಸ್ಟ್​ ಬಳಿಯೇ ವಾಹನಗಳನ್ನು ವಾಪಸ್​ ಕಳುಹಿಸಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ವೀಡಿಯೋ ಇಲ್ಲಿ ವೀಕ್ಷಿಸಿ👇

Read More

ಚಲಿಸುತ್ತಿದ್ದ ಕಾರಿನ ಚಾಲಕ ಹೃದಯಾಘಾತದಿಂದ ಸಾವು : ನಿಯಂತ್ರಣ ತಪ್ಪಿ ಸರಣಿ ಅಪಘಾತ

ಕಾರು ಚಲಾಯಿಸುವಾಗಲೇ ಚಾಲಕ ಹೃದಯಾಘಾತಕ್ಕೊಳಗಾದ ಹಿನ್ನಲೆಯಲ್ಲಿ ಎದುರುಗಡೆ ಇದ್ದ ನಾಲ್ಕೈದು ವಾಹನಗಳಿಗೆ ಡಿಕ್ಕಿ ಹೊಡೆದಿದೆ.ನಂತರ ಕಾಂಪೌಂಡ್ ಗೋಡೆಗೆ ವಾಹನ ಅಪ್ಪಳಿಸಿ ನಿಂತಿದೆ.ಅಷ್ಟರಲ್ಲಾಗಲೇ ಕಾರು ಚಾಲಕ ಮೃತಪಟ್ಟಿದ್ದಾನೆ. ಶಿವಮೊಗ್ಗ ಗೋಪಾಳದ ಚಾಲುಕ್ಯನಗರದಲ್ಲಿ ಈ ಘಟನೆ ಸಂಭವಿಸಿದೆ. ಮಲವಗೊಪ್ಪ ನಿವಾಸಿ ಬಾಬು ಯಾನೆ ಕ್ರೇನ್ ಬಾಬು (58) ಎಂಬ ವ್ಯಕ್ತಿ ಸಾವಿಗೀಡಾಗಿದ್ದು, ಅವರು ಕಾರು ಚಲಾಯಿಸುತ್ತಿರುವಾಗಲೇ ಹೃದಯಾಘಾತವಾಗಿದ್ದರಿಂದ ಈ ದುರಂತ ಸಂಭವಿಸಿದೆ. ಚಾಲಕ ಚಲಿಸುತಿದ್ದ ಹೊಂಡಾ ಸಿಟಿ ಕಾರು ನಾಲ್ಕಾರು ವಾಹನಗಳಿಗೆ ಡಿಕ್ಕಿ ಹೊಡೆದು, ಗೋಡೆಯೊಂದಕ್ಕೆ ಡಿಕ್ಕಿಯಾಗಿ ನಿಂತಿದೆ. ಸ್ಥಳೀಯರು…

Read More

ಕುಮುಧ್ವತಿ ನದಿಯಲ್ಲಿ ಕೊಚ್ಚಿಹೋದ ವೃದ್ದೆ : ಶೋಧ ಕಾರ್ಯಾಚರಣೆ ಚುರುಕು

ಮಲೆನಾಡು ಭಾಗದಲ್ಲಿ ಅಧಿಕ ಮಳೆಯಿಂದಾಗಿ ಕುಮಧ್ವತಿ ನದಿಯು ಭೋರ್ಗರೆಯುತ್ತಿದ್ದು ಇಂದು ಓರ್ವ ವೃದ್ದೆ ನದಿಯಲ್ಲಿ ಕೊಚ್ಚಿಕೊಂಡು ಹೋಗಿರುವುದಾಗಿ ತಿಳಿದುಬಂದಿದೆ. ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ವೃದ್ಧೆಯನ್ನು ನಾಗರತ್ನ(64) ಎಂದು ಗುರುತಿಸಲಾಗಿದೆ.  ಚೋರಡಿ ನದಿಯ ದಡದಲ್ಲಿರುವ ಚೌಡೇಶ್ವರಿ ದೇವಸ್ಥಾನಕ್ಕೆನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ವೃದ್ಧೆಯನ್ನು ನಾಗರತ್ನ ಎಂದು ಗುರುತಿಸಲಾಗಿದೆ.  ಪೂಜೆಗೆ ಹೋಗಿದ್ದ 64 ವರ್ಷದ ವೃದ್ಧೆ ಕುಮಧ್ವತಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.  ನೀರಿನಲ್ಲಿ ಮುಳುಗಿರುವ ವೃದ್ದೆಗಾಗಿ ಶೋಧಕಾರ್ಯ ನಡೆದಿದೆ.ವೃದ್ದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೊ ಅಥವಾ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾರೋ…

Read More

ಕಾಲುಜಾರಿ ತೋಟದ ಬಾವಿಗೆ ಬಿದ್ದು ವ್ಯಕ್ತಿ ಸಾವು :

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೊಡ್ಡಬಿಳಗೋಡು ಗ್ರಾಮದ ಜಿ.ಕೆ.ಗಣಪತಿ (74) ಕೃಷಿ ಕೆಲಸದ ನಿಮಿತ್ತ ತೋಟಕ್ಕೆ ಹೋಗಿದ್ದಾಗ ಕಾಲುಜಾರಿ ತೋಟದ ರಿಂಗ್ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಪುರಪ್ಪೆಮನೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಗಿರಿಜಮ್ಮ ರವರ ಪತಿಯಾದ ಜಿ ಕೆ ಗಣಪತಿ ರವರು ಬೆಳಿಗ್ಗೆ 9.30 ರ ಸಮಯದಲ್ಲಿ ಕೃಷಿ ಕೆಲಸದ ನಿಮಿತ್ತ ತೋಟಕ್ಕೆ ಕೆಲಸಕ್ಕೆ ಹೋದಾಗ ಕಾಲು ಜಾರಿ ರಿಂಗ್ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರಿಗೆ…

Read More

ಬುಕ್ಕಿವರೆ – ಬೆಳ್ಳೂರು – ರಿಪ್ಪನ್‌ಪೇಟೆ ಮಾರ್ಗಕ್ಕೆ ನೂತನ KSRTC ಬಸ್ ಸೌಲಭ್ಯ : ಕುಗ್ರಾಮದ ಜನರ ಮೊಗದಲ್ಲಿ ಮೂಡಿದ ಸಂತಸ

ರಿಪ್ಪನ್‌ಪೇಟೆ : ಬೆಳ್ಳೂರು-ಬುಕ್ಕಿವರೆ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಸರ್ಕಾರಿ ಬಸ್ ಸೌಲಭ್ಯವು ಪ್ರಾರಂಭವಾಗಿದ್ದು ಎಲ್ಲರ ಮೊಗದಲ್ಲಿ ಮಂದಹಾಸ ತಂದಿದೆ. ಶರಾವತಿ, ಚಕ್ರಾ, ವರಾಹಿ, ಮಾಣಿ, ಮಡೆನೂರು ಡ್ಯಾಂ ನಿರ್ಮಾಣಕ್ಕಾಗಿ ಮನೆ ಮಠಗಳನ್ನು ಕಳೆದುಕೊಂಡು ನಿರಾಶ್ರಿತರಾಗಿರುವ ಮುಳುಗಡೆ ಸಂತ್ರಸ್ತ ಕುಟುಂಬದವರೇ ಹೆಚ್ಚು ವಾಸಿಸುತ್ತಿರುವ ಕುಗ್ರಾಮಗಳಾದ ಬೆಳ್ಳೂರು, ಬುಕ್ಕಿವರೆ, ಚಾಣಬೈಲು, ದೋಬೈಲು, ಮಸ್ಕಾನಿ, ಕಳಸೆ, ಹಾರೋಹಿತ್ತಲು, ಬಸವಾಪುರ, ಕಲ್ಲುಹಳ್ಳ, ಗುಳಿಗುಳಿ ಶಂಕರ, ಗುಬ್ಬಿಗಾ ಇನ್ನಿತರ ಗ್ರಾಮಗಳ ಗ್ರಾಮಸ್ಥರು ಮತ್ತು ಶಾಲಾ – ಕಾಲೇಜ್ ವಿದ್ಯಾರ್ಥಿಗಳು ಮತ್ತು ಅನಾರೋಗ್ಯ ಪೀಡಿತರು…

Read More

ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ : ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರುವಂತೆ ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಆರೆಂಜ್ ಅಲರ್ಟ್ ಇದ್ದು ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಖಡಕ್ ಸೂಚನೆ ನೀಡಿದ್ದಾರೆ. ಮಳೆಯಿಂದ ಆಗಬಹುದಾದ ಹಾನಿಯನ್ನು ಎದುರಿಸಲು ಯುದ್ದೋಪಾದಿಯಲ್ಲಿ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಡಿಯೋ ಕಾನ್ಫೆರೆನ್ಸ್ ನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಾಲ್ಲೂಕುಗಳ ತಹಶೀಲ್ದಾರರು, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಮತ್ತು ಇತರೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಳೆ ಹಾನಿ ನಿರ್ವಹಣೆ ಕುರಿತು ಅಗತ್ಯ…

Read More

ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದ MSIL ಉದ್ಯೋಗಿ ನವೀನ್ ಕುಮಾರ್ ಕುಟುಂಬಕ್ಕೆ 5 ಲಕ್ಷದ ಚೆಕ್ ವಿತರಿಸಿದ ಶಾಸಕ ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ : ಇತ್ತೀಚೆಗೆ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದ ಪಟ್ಟಣದ MSIL ಮದ್ಯ ಮಾರಾಟ ಮಳಿಗೆಯಲ್ಲಿ ADO ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅರಸಾಳು ನಿವಾಸಿ ನವೀನ್ ಕುಮಾರ್ ರವರ ಕುಟುಂಬಕ್ಕೆ MSIL ಅಧ್ಯಕ್ಷರು ಹಾಗೂ ಶಾಸಕರಾದ ಹೆಚ್.ಹಾಲಪ್ಪ ರವರು MSIL ವತಿಯಿಂದ 5 ಲಕ್ಷ ರೂ ಪರಿಹಾರ ಧನದ ಚೆಕ್ ಹಸ್ತಾಂತರಿಸಿ ಸಾಂತ್ವನ ಹೇಳಿದರು. ಇತ್ತೀಚೆಗೆ ಸಮೀಪದ ಅರಸಾಳು – ಬೆನವಳ್ಳಿ ನಡುವಿನ ರಸ್ತೆಯಲ್ಲಿ ಟೊಯೋಟಾ ಇಟಿಯೋಸ್ ಕಾರ್ ಹಾಗೂ ಬಜಾಜ್ ಡಿಸ್ಕವರ್ ಬೈಕ್ ನಡುವೆ ನಡೆದ ಭೀಕರ…

Read More

ಹಿಂದೂ ಹರ್ಷನ ಸಹೋದರಿ ಅಶ್ವಿನಿ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು??? ಈ ಸುದ್ದಿ ನೋಡಿ

ನ್ಯಾಯ ಕೇಳಲು ಹೋದರೆ, ಗೃಹ ಸಚಿವರು ಬೈದು ಕಳಿಸಿದ್ದಾರೆ ಎನ್ನುವ ಹರ್ಷ ಸಹೋದರಿ ಆರೋಪಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಅವರು ಏನೇನೋ ಮಾತನಾಡಿದ್ರು, ಆ ರೀತಿ ಮಾತನಾಡಿದ್ರೆ ನಾವೇನು ಮಾಡೋಣ ಎಂದು ಸಚಿವರು ಪ್ರಶ್ನಿಸಿದರು. ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅರಗ ಜ್ಞಾನೇಂದ್ರ, ರಾಜು ನನ್ನ ಅತ್ಯಂತ ಆಪ್ತ ಮಿತ್ರ ಎಂದು ಮೊದಲು ಹೇಳಿದರು. ಈ ವೇಳೆ ಪತ್ರಕರ್ತರು ರಾಜು ಅಲ್ಲ ಹರ್ಷ ಎಂದು ನೆನಪಿಸಿದ್ದು, ಈ ವೇಳೆ ಸಚಿವರು, ಸಾರಿ ಹರ್ಷ ನನ್ನ…

Read More

ಮುಂದುವರಿದ ಭಾರಿ ಮಳೆ : ಹೊಸನಗರ, ಸಾಗರ ಹಾಗೂ ತೀರ್ಥಹಳ್ಳಿ ತಾಲೂಕಿನ ಶಾಲೆಗಳಿಗೆ ನಾಳೆಯೂ ರಜೆ :

ಶಿವಮೊಗ್ಗ ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ. ಭಾರಿ ಮಳೆ ಹಿನ್ನೆಲೆ ಜಿಲ್ಲೆಯ ಮೂರು ತಾಲೂಕುಗಳ ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ. ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜುಲೈ 8ರಂದು ರಜೆ ಘೋಷಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

Read More