ಮಾಜಿ ಶಾಸಕ ಬಿ ಸ್ವಾಮಿರಾವ್ ರವರಿಗೆ ಡಿ.ದೇವರಾಜ್ ಅರಸು ಪ್ರಶಸ್ತಿ ನೀಡುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಗೃಹ ಸಚಿವರಿಗೆ ಮನವಿ :
ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ರವರ ಜನ್ಮ ದಿನದ ಅಂಗವಾಗಿ ನೀಡುವ ಡಿ. ದೇವರಾಜ ಅರಸು 2021-22 ರ ಸಾಲಿನ ಪ್ರಶಸ್ತಿಯನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಹಿರಿಯ ಮುಖಂಡರಾದ ಬಿ. ಸ್ವಾಮಿರಾವ್ ರವರಿಗೆ ನೀಡಲು ಕರ್ನಾಟಕ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ವತಿಯಿಂದ ಗೃಹ ಸಚಿವ ಆರಗ ಜ್ಞಾನೇಂದ್ರ ರವರಿಗೆ ಮನವಿ ಸಲ್ಲಿಸಲಾಯಿತು. ಕರ್ನಾಟಕ ರಾಜ್ಯದ ದಮನಿತರ ಮತ್ತು ಗೇಣಿ…