ಕಸ್ತೂರಿ ರಂಗನ್ ವರದಿಯನ್ನು ಜಾರಿಯಾಗಲು ಬಿಡುವುದಿಲ್ಲ – ದೆಹಲಿಗೆ ಮಲೆನಾಡ ಶಾಸಕರ ನಿಯೋಗ : ಹರತಾಳು ಹಾಲಪ್ಪ
ಮಲೆನಾಡಿನ ಜನಜೀವನಕ್ಕೆ ಮಾರಕವಾಗಿರುವ ಕಸ್ತೂರಿ ರಂಗನ್ ವರದಿಯನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ಸೋಮವಾರ ನವದೆಹಲಿಯಲ್ಲಿ ಮಲೆನಾಡು ಭಾಗದ ಸಂಸದರು ಮತ್ತು ಶಾಸಕರು ಅರಣ್ಯ ಮತ್ತು ಪರಿಸರ ಖಾತೆ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತಿದ್ದೇವೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದರು. ಸಾಗರ ನಗರಸಭೆ ಆವರಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿ ಕೈಬಿಡಲು ರಾಜ್ಯ ಸರ್ಕಾರ ಹಿಂದಿನಿಂದಲೂ ಒತ್ತಾಯಿಸುತ್ತಾ ಬಂದಿದೆ. ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ, ಈ ವರದಿಯನ್ನು ಕೈಬಿಡಬೇಕು. ಇಲ್ಲವಾದಲ್ಲಿ ಮಲೆನಾಡು…