ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ: ಈ ಹುದ್ದೆಗೇರಿದ ಮೊದಲ ಬುಡಕಟ್ಟು ಮಹಿಳೆ!

 ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಭಾರತದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದು ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಬುಡಕಟ್ಟು ಮಹಿಳೆಯೊಬ್ಬರು ಈ ಹುದ್ದೆಗೇರಿದ್ದಾರೆ. ತೀವ್ರ ಕುತೂಹಲ ಕೆರಳಿಸಿರುವ ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆಯಲ್ಲಿ ದ್ರೌಪದಿ ಮುರ್ಮು ಅವರು ವಿಪಕ್ಷ ಅಭ್ಯರ್ಥಿ ಯಶವಂತ್ ಸಿನ್ಹಾ ವಿರುದ್ಧ ಗೆಲುವು ಸಾಧಿಸಿದ್ದಾರೆ. ದ್ರೌಪದಿ ಮುರ್ಮು ಅವರಿಗೆ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವರು ಶುಭಾಶಯ ಕೋರಿದ್ದು ಬಿಜೆಪಿ ಪಾಳಯದಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ದ್ರೌಪದಿ ಮುರ್ಮು…

Read More

ಅಪಘಾತಕ್ಕೀಡಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಬೈಕ್ ಸವಾರ : ಮಾನವೀಯತೆ ಮೆರೆದ ಶಾಸಕ ಹರತಾಳು ಹಾಲಪ್ಪ

ಬೈಕ್ ಸವಾರನೊಬ್ಬ ಅಪಘಾತವಾಗಿ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುವಾಗ, ಅದೇ ದಾರಿಯಲ್ಲಿ ಸಾಗುತ್ತಿದ್ದ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ  ಅಪಘಾತಕ್ಕೀಡಾದ ವ್ಯಕ್ತಿಯನ್ನು ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದಿದ್ದಾರೆ. ಇಂದು ಹೊಸನಗರ ತಾಲ್ಲೂಕಿನ ಪ್ರವಾಸದಲ್ಲಿದ್ದ ಶಾಸಕ ಹರತಾಳು ಹಾಲಪ್ಪರವರು ಕೊಡಚಾದ್ರಿ ಕಾಲೇಜಿನ ಮುಂಭಾಗ ತೆರಳುತ್ತಿದ್ದಾಗ ಬೈಕ್ ಅಪಘಾತವಾಗಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಬಿದ್ದಿದ್ದರು.ಕೂಡಲೇ ವಾಹನ ನಿಲ್ಲಿಸಿ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯ ಸಹಾಯಕ್ಕೆ ತೆರಳಿದ ಶಾಸಕರು ಅಪಘಾತಕ್ಕೀಡಾದ ವ್ಯಕ್ತಿಗೆ…

Read More

ಈಶ್ವರಪ್ಪರವರಿಗೆ ಮತ್ತೆ ಸಚಿವ ಸ್ಥಾನ ನೀಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರ : ಆರಗ ಜ್ಞಾನೇಂದ್ರ

ರಿಪ್ಪನ್ ಪೇಟೆ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರಿಗೆ ಬಿ ರಿಪೋರ್ಟ್ ಸಿಕ್ಕ ಹಿನ್ನೆಲೆಯಲ್ಲಿ  ಮರಳಿ ಅವರಿಗೆ ಸರ್ಕಾರದಲ್ಲಿ ಸಚಿವ ಸ್ಥಾನ ದೊರೆಯಲಿದೆಯೇ ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸ್ಥಾನಮಾನ ನೀಡುವುದು ವರಿಷ್ಟರಿಗೆ ಬಿಟ್ಟ ವಿಚಾರ ಎಂದರು. ಇಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ವಡಾಹೊಸಳ್ಳಿ ಗ್ರಾಮದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಈಶ್ವರಪ್ಪ…

Read More

ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಪೂಜ್ಯ ಶ್ರೀ ಡಾ|| ವೀರೇಂದ್ರ ಹೆಗಡೆ :

 ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭಾ ಸದಸ್ಯರಾಗಿ ಇಂದು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು. ಈ ತಿಂಗಳ ಆರಂಭದಲ್ಲಿ ವೀರೇಂದ್ರ ಹೆಗ್ಗಡೆ ಸೇರಿದಂತೆ ದಕ್ಷಿಣ ಭಾರತದ ನಾಲ್ವರು ಗಣ್ಯರನ್ನು ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತ್ತು. ಈ ಪೈಕಿ ಇಳೆಯರಾಜಾ ಹಾಗೂ ಪಿ.ಟಿ. ಉಷಾ ಕೂಡಾ ರಾಜ್ಯಸಭೆಗೆ ನಾಮನಿರ್ದೇಶನ ಗೊಂಡಿದ್ದರು. ಕರ್ನಾಟಕದ ಕರಾವಳಿ ಭಾಗದಿಂದ ಪ್ರಸ್ತುತವಾಗಿ ರಾಜ್ಯಸಭೆಗೆ ಆಯ್ಕೆ ಯಾಗಿರುವ ಡಾ| ವೀರೇಂದ್ರ ಹೆಗ್ಗಡೆಯವರು ಇಂದು ರಾಜ್ಯಸಭೆಯ ಸ್ಪೀಕರ್ ವೆಂಕಯ್ಯ ನಾಯ್ಡು…

Read More

ನಾಳೆ (21-07-2022) ರಿಪ್ಪನ್‌ಪೇಟೆಯಲ್ಲಿ ಶಾಂತವೇರಿ ಗೋಪಾಲಗೌಡರ ಜನ್ಮ ಶತಮಾನೋತ್ಸವ ಸಪ್ತಾಹದ ಸಮಾರೋಪ ಕಾರ್ಯಕ್ರಮ

ರಿಪ್ಪನ್‌ಪೇಟೆ : ಸ್ವಾತಂತ್ರ್ಯ ಹೋರಾಟಗಾರ ಹಾಗೂ ಸಮಾಜವಾದಿ ನಾಯಕ ಶಾಂತವೇರಿ ಗೋಪಾಲಗೌಡರ ಜನ್ಮ ಶತಮಾನೋತ್ಸವ ಸಪ್ತಾಹದ ಸಮಾರೋಪ ಕಾರ್ಯಕ್ರಮವನ್ನು ನಾಳೆ (21-07-2022)ರಂದು ಮಧ್ಯಾಹ್ನ 3.30ಕ್ಕೆ ಪಟ್ಟಣದ ಜಿ ಎಸ್ ಬಿ ಕಲ್ಯಾಣ ಮಂದಿರದಲ್ಲಿ ಆಯೋಜಿಸಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು,ಕರ್ನಾಟಕ ಜನಪದ ಪರಿಷತ್ತು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ರಿಪ್ಪನ್‌ಪೇಟೆ ಹೋಬಳಿ ಸಮಿತಿ ವತಿಯಿಂದ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಶಾಂತವೇರಿ ಗೋಪಾಲಗೌಡರ ಒಡನಾಡಿಗಳು ಹಾಗೂ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ,ಗೋಪಾಲಗೌಡರ ಒಡನಾಡಿಗಳಾದ ಬಿ ಆರ್ ಜಯಂತ್…

Read More

ಹಂದಿ ಅಣ್ಣಿ ಹತ್ಯೆ ಆರೋಪಿಗಳು 7 ದಿನ ಪೊಲೀಸ್ ಕಸ್ಟಡಿಗೆ : ಹಂದಿ ಅಣ್ಣಿ ಹಂತಕರ ಫೋಟೋಗಳು ವೈರಲ್

ಶಿವಮೊಗ್ಗ : ಹಂದಿ ಅಣ್ಣಿ ಕೊಲೆ ಪ್ರಕರದ 8 ಜನ ಆರೋಪಿಗಳನ್ನ ಇಂದು ಶಿವಮೊಗ್ಗದ ನ್ಯಾಯಾಲಯದ ಮುಂದೆ ಹಾಜರಿ ಪಡಿಸಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಯಿತು. 5 ನೇ ಹೆಚ್ಚುವರಿ ವ್ಯವಹಾರ ನ್ಯಾಯಾಧೀಶರ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳಾದ ಶಿವು ಕುಮಾರ್ ಜಿ.ಎನ್ ಮುಂದೆ ಇಂದು ಮಧ್ಯಾಹ್ನ ವಿನೋಬ‌ನಗರ ಪೊಲೀಸರು ಅಣ್ಣಿ ಹತ್ಯೆಯ ಆರೋಪಿಗಳನ್ನ ಹಾಜರಿಪಡಿಸಿದರು. ಆರೋಪಿಗಳನ್ನ ಒಂದು ವಾರ ಪೊಲೀಸ್ ಕಸ್ಟಡಿಗೆ ಮಾನ್ಯ ನ್ಯಾಯಾಧೀಶರು ನೀಡಿ ಆದೇಶಿಸಿದ್ದಾರೆ. ಜು. 27 ರಂದು ಮಧ್ಯಾಹ್ನ 3 ಗಂಟೆಗೆ…

Read More

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ : ಮಾಜಿ ಸಚಿವ ಈಶ್ವರಪ್ಪರಿಗೆ ಬಿಗ್ ರಿಲೀಫ್

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪರಿಗೆ ಕ್ಲೀನ್ ಚೀಟ್ ಸಿಕ್ಕ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಮಾಜಿ ಸಚಿವ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ನಾನು ಮೊದಲೇ ಹೇಳಿದ್ದೆ ಈ ಪ್ರಕರಣದಿಂದ ಮುಕ್ತನಾಗಿ ಬರುತ್ತೇನೆ ಎಂದು ಮನೆ ದೇವರಾದ ತಾಯಿ ಚೌಡೇಶ್ವರಿ ಆಶೀರ್ವಾದದಿಂದ ನಾನು ಗೆದ್ದು ಬರುತ್ತೇನೆ ಎಂದಿದ್ದೆ. ಇದೀಗ ಹಾಗೆ ಆಗಿದೆ. ದೇವರು ನನ್ನ ಪರವಾಗಿರುವುದಕ್ಕೆ ಸಂತೋಷವಾಗಿದೆ ಎಂದರು. ನನ್ನಿಂದಾಗಿ ನನ್ನ ಪಕ್ಷದ ಹಿರಿಯರು ಮತ್ತು ಕಾರ್ಯಕರ್ತರಿಗೆ ಮುಜುಗರವಾಗಿತ್ತಲ್ಲ ಎಂಬ ನೋವಿತ್ತು. ಏನೂ ತಪ್ಪು ಮಾಡದ…

Read More

ನಿಟ್ಟೂರು ಸಮೀಪದ ಹೊಳೆಯಲ್ಲಿ ಪುರುಷನ ಶವ ಪತ್ತೆ :

ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಮರಕುಟುಕ ಗ್ರಾಮದ ಸೇತುವೆ ಬಳಿ ಪುರುಷನೊಬ್ಬನ ಶವ ಪತ್ತೆಯಾಗಿದೆ. ನಿಟ್ಟೂರು ಸಮೀಪದ ಮರಕುಟುಕ ಸೇತುವೆ ಬಳಿಯ ಹೊಳೆಯಲ್ಲಿ ಪುರುಷನೊಬ್ಬನ ಶವ ಗಿಡಗಂಟಿಯಲ್ಲಿ ಸಿಲುಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯವರು ಎಂದು ಶಂಕಿಸಲಾಗಿದ್ದು,ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ಸ್ಥಳಕ್ಕೆ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳು ತೆರಳಿದ್ದು ತನಿಖೆ ಕೈಗೊಂಡಿದ್ದಾರೆ.

Read More

ರಿಪ್ಪನ್ ಪೇಟೆಯಲ್ಲಿ ಜುಲೈ 25 ರಂದು ಗ್ರಾಮಾಡಳಿತದ ವಿರುದ್ಧ ಪಕ್ಷಾತೀತವಾಗಿ ಪ್ರತಿಭಟನೆ :

ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದ ಬಳಿಯ ಹೊಸನಗರ-ತೀರ್ಥಹಳ್ಳಿ ರಸ್ತೆಗೆ ಹೊಂದಿಕೊಂಡಿರುವ ಸಾರ್ವಜನಿಕ ಬಸ್‌ಪ್ರಯಾಣಿಕರ ತಂಗುದಾಣಕ್ಕೆ ಹೋಗಿ ಬರುವ ಜಾಗದಲ್ಲಿ ಅವೈಜ್ಞಾನಿಕ ಕಬ್ಬಿಣದ ರಾಡುಗಳ ಮೂಲಕ ತಡೆಗೋಡೆ ಮಾಡಿರುವುದರಿಂದ ಮಹಿಳೆಯರು, ವೃದ್ದರು ಮತ್ತು ಅನಾರೋಗ್ಯ ಪೀಡಿತರು ಬಿದ್ದು ಕಾಲು ಕೈ  ಮುರಿದುಕೊಂಡ ಗಾಯಗಳಾದ ಘಟನೆಗಳು ನಡೆದಿರುತ್ತವೆ ಈ ಬಗ್ಗೆ ಸಾಕಷ್ಟು ಭಾರಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಲಾದರೂ ಕೂಡಾ ಅದನ್ನು ತೆರವುಗೊಳಿಸದೇ ನಿರ್ಲಕ್ಷ ವಹಿಸಿದ್ದಾರೆಂದು ಆರೋಪಿಸಿ ಬರುವ ಜುಲೈ 25 ರಂದು ಸೋಮವಾರ ಪಕ್ಷಾತೀತವಾಗಿ ಪ್ರತಿಭಟನೆ ಏರ್ಪಡಿಸಲಾಗಿದೆ…

Read More

ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ :

ರಿಪ್ಪನ್‌ಪೇಟೆ: ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ದ 55ನೇ ವರ್ಷದ ಗಣೇಶೋತ್ಸವ ಸೇವಾ ಸಮಿತಿಯ ಅಧ್ಯಕ್ಷರಾಗಿ ವೈ.ಜೆ.ಕೃಷ್ಣ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಪಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪದಾದಿಕಾರಿಗಳ ವಿವರ : ನಾಗರಾಜ ಪವಾರ್, ರಾಜೇಶ್ ಎಲ್.ಕೆ, ಸಂದೀಪ್‌ಶೆಟ್ಟಿ, ರವಿಚಂದ್ರ, ಹೆಚ್.ಆರ್.ಆಶೋಕ್, (ಉಪಾಧ್ಯಕ್ಷ), ತೀರ್ಥಶ್ ಅಡಿಕಟ್ಟು (ಕಾರ್ಯಾಧ್ಯಕ್ಷರು), ಶ್ರೀಧರ್, ಲಕ್ಷ್ಮಣ ಬಳ್ಳಾರಿ (ಸಹ ಕಾರ್ಯದರ್ಶಿ), ಶ್ರೀನಿವಾಸ ಆಚಾರ್ ಗ್ಯಾರೇಜ್, ಮಂಜುನಾಥ ಅಚಾರ್, ರಾಘವೇಂದ್ರ…

Read More