ಕೆಎಸ್ ಆರ್ ಟಿಸಿ ಬಸ್ಸು ಹಾಗೂ ಮಾರುತಿ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಚೋರಡಿ ಸಮೀಪದ ಹೆಗ್ಗೇರೆಯಲ್ಲಿ ನಡೆದಿದೆ.
ಈ ಅಪಘಾತದಲ್ಲಿ ಮಾರುತಿ ಓಮಿನಿ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು,ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಶಿವಮೊಗ್ಗದಿಂದ ಸಾಗರದ ಕಡೆಗೆ ತೆರಳುತಿದ್ದ ಕೆಎಸ್ ಆರ್ ಟಿಸಿ ಬಸ್ ಹಾಗೂ ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಮಾರುತಿ ಓಮಿನಿ ಕಾರು ಹೆಗ್ಗೆರೆ ಬಳಿ ಮುಖಾಮುಖಿ ಡಿಕ್ಕಿಯಾಗಿದೆ.
ಗಾಯಾಳುಗಳನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು,ಪ್ರಕರಣ ದಾಖಲಾಗಿದೆ.