ಈಶ್ವರಪ್ಪರವರಿಗೆ ಮತ್ತೆ ಸಚಿವ ಸ್ಥಾನ ನೀಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರ : ಆರಗ ಜ್ಞಾನೇಂದ್ರ

ರಿಪ್ಪನ್ ಪೇಟೆ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರಿಗೆ ಬಿ ರಿಪೋರ್ಟ್ ಸಿಕ್ಕ ಹಿನ್ನೆಲೆಯಲ್ಲಿ  ಮರಳಿ ಅವರಿಗೆ ಸರ್ಕಾರದಲ್ಲಿ ಸಚಿವ ಸ್ಥಾನ ದೊರೆಯಲಿದೆಯೇ ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸ್ಥಾನಮಾನ ನೀಡುವುದು ವರಿಷ್ಟರಿಗೆ ಬಿಟ್ಟ ವಿಚಾರ ಎಂದರು.

ಇಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ವಡಾಹೊಸಳ್ಳಿ ಗ್ರಾಮದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.

ಈಶ್ವರಪ್ಪ ರವರ ವಿರುದ್ಧದ ಆತ್ಮಹತ್ಯೆ ಪ್ರಕರಣ ತ್ವರಿತವಾಗಿ ವಿಚಾರಣೆ ನಡೆಸಿ ತರಾತುರಿಯಲ್ಲಿ ಬಿ ರಿಪೋರ್ಟ್ ಸಲ್ಲಿಸುವ ಔಚಿತ್ಯವೇನಿತ್ತು ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು ತರಾತುರಿಯ ಪ್ರಮೇಯವೇ ಇಲ್ಲಿ ಉದ್ಭವಿಸುವುದಿಲ್ಲ, ಈ ಪ್ರಕರಣ ಇಡೀ ರಾಜ್ಯದಲ್ಲಿ  ಸಂಚಲನ ಮೂಡಿಸಿತ್ತು.ನಮ್ಮ ಇಲಾಖೆಯಲ್ಲಿ ಇಂತಹ ಹಲವಾರು ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸಲಾಗುತ್ತಿದೆ.ಈ ಕೇಸ್
ವಿಶೇಷ ಪ್ರಕರಣ ಹಾಗೂ ಮಾಧ್ಯಮಗಳ ಕೇಂದ್ರ ಬಿಂದುವಾಗಿದ್ದರಿಂದ ಮುನ್ನೆಲೆಗೆ ಬಂದಿದೆ. ಉಡುಪಿಯ ಪೊಲೀಸರು ತನಿಖೆ ನಡೆಸಿ ಸತ್ಯಸತ್ಯಾತೆಯ ಸಾರಾಂಶವನ್ನು ನ್ಯಾಯಾಂಗಕ್ಕೆ ಸಲ್ಲಿಸಿದ್ದಾರೆ ಎಂದರು.

Leave a Reply

Your email address will not be published. Required fields are marked *