ತೀರ್ಥಹಳ್ಳಿ : ಐದು ವರ್ಷ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ FTSC–II (POCSO) 20 ವರ್ಷ ಕಠಿಣ ಶಿಕ್ಷೆ 60 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
2020 ರಲ್ಲಿ ತೀರ್ಥಹಳ್ಳಿ ತಾಲ್ಲೂಕಿನ 05 ವರ್ಷದ ಅಪ್ರಾಪ್ತ ವಯಸ್ಸಿನ ಹೆಣ್ಣು ಮಗುವೊಂದು ತನ್ನ ಮನೆಯಲ್ಲಿ ಆಟವಾಡುತ್ತಾ ಇದ್ದಾಗ ವೆಂಕಟೇಶ್ ಎಂಬುವವನು ಸದರಿ ಬಾಲಕಿಯನ್ನು ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ನಡೆದಿತ್ತು. ಘಟನೆಯ ಬಗ್ಗೆ ನೀಡಿದ ದೂರಿನ ಮೇರೆಗೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ಆಗಿನ ತನಿಖಾಧಿಕಾರಿಗಳಾದ ಶ್ರೀ ಪ್ರವೀಣ್ ನೀಲಮ್ಮನವರ್, ಪ್ರಕರಣದ ತನಿಖೆ ಕೈಗೊಂಡು ಸದರಿ ಆರೋಪಿತನ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಶ್ರೀ ಹರಿಪ್ರಸಾದ್ ರವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

The Addl District and Sessions Court, FTSC–II (POCSO) Shivamogga ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಧೀಶರಾದ ಮೋಹನ ಜೆ.ಎಸ್. ರವರು ಇಂದು ಆರೋಪಿ ವೆಂಕಟೇಶ್, ಬಿ.ಸಿ, (29) ವಿರುದ್ಧ ತೀರ್ಪು ನೀಡಿದ್ದಾರೆ.
ಆರೋಪಿತನಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 60,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ ಆದೇಶ ನೀಡಿರುತ್ತಾರೆ.