ತೋಟದ ಕೆಲಸಕ್ಕೆ ಹೋದ ರೈತ ಮಹಿಳೆ ಹಳ್ಳಕ್ಕೆ ಬಿದ್ದು ಸಾವು : ತಡರಾತ್ರಿ ಮೃತದೇಹ ಪತ್ತೆ

ತೋಟದ ಕೆಲಸಕ್ಕೆ ಹೋದ ರೈತ ಮಹಿಳೆಯೊಬ್ಬರು ಹಳ್ಳದಲ್ಲಿ ಕೊಚ್ಚಿಹೋಗಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಮೇಲಿನಕುರುವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಳುಗೋಡು ಗ್ರಾಮದಲ್ಲಿ ನಡೆದಿದೆ.

ಮೃತ ದುರ್ಧೈವಿಯನ್ನು ಭವಾನಿ ಶಂಕರ್ ನಾರಾಯಣ(52) ಎಂದು ಗುರುತಿಸಲಾಗಿದೆ.


ಸುಳುಗೋಡು ಗ್ರಾಮದ ಬಾಳೆಹಿತ್ತಲು ಹಳ್ಳದಲ್ಲಿ ಭವಾನಿ ರವರು ಎಂದಿನಂತೆ ಬೆಳಿಗ್ಗೆ ತೋಟಕ್ಕೆ ಕೆಲಸಕ್ಕೆ ಹೋಗಿದ್ದಾರೆ ಆದರೆ ಸಂಜೆಯವರೆಗೂ ಮನೆಗೆ ಬಾರದಿದ್ದಾಗ ಕುಟುಂಬದವರು ಇವರನ್ನು ಹುಡುಕಲು ಪ್ರಾರಂಭಿಸಿದ್ದು 
ಎಷ್ಟೇ ಹುಡುಕಿದರೂ ಇವರ ಸುಳಿವು ಸಿಗಲಿಲ್ಲ.ತಡರಾತ್ರಿಯವರೆಗೂ ಹುಡುಕಿದಾಗ ರಾತ್ರಿ ಹನ್ನೊಂದರ ಸಮಯಕ್ಕೆ ಹಳ್ಳದಲ್ಲಿ ಇವರ ಮೃತದೇಹ ಪತ್ತೆಯಾಗಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು,ಕಂದಾಯ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತಿ ಸದಸ್ಯರಾದ ಅಣ್ಣಪ್ಪ,
ಗ್ರಾಮಸ್ಥರು ಘಟನಾ ಸ್ಥಳಕ್ಕೆ ಆಗಮಿಸಿದ್ದು ಮೃತದೇಹವನ್ನು 
ಮರಣೋತ್ತರ ಪರೀಕ್ಷೆಗೆ ತೀರ್ಥಹಳ್ಳಿ ಜಯಚಾಮರಾಜೇಂದ್ರ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.

ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *