ರಿಪ್ಪನ್ ಪೇಟೆಯಲ್ಲಿ ಹೊಸನಗರ ತಾಲೂಕು ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರ ಕಾರ್ಯಗಾರ : ಆಧುನಿಕ ಸಮಾಜದಲ್ಲಿ ಎಲ್ಲಕ್ಕಿಂತಲೂ ಮಿಗಿಲಾದದ್ದು ಶಿಕ್ಷಣ : ಎಸ್ ಎಲ್ ಭೋಜೇಗೌಡ

ರಿಪ್ಪನ್ ಪೇಟೆ : ಆಧುನಿಕ ಸಮಾಜದಲ್ಲಿ ಎಲ್ಲಕ್ಕಿಂತ ಮಿಗಿಲಾದುದು ಶಿಕ್ಷಣ ಮತ್ತು ಆರೋಗ್ಯ ಎಂದು ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ ಹೇಳಿದರು.

ಪಟ್ಟಣದ ಆಶ್ರೀತಾ ಸಭಾಭವನದಲ್ಲಿ ಹೊಸನಗರ ತಾಲೂಕು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಕಾರ್ಯಾಗಾಗಾರ  ಹಾಗೂ ನಿವೃತ್ತ ಪ್ರಾಚಾರ್ಯರು ಮತ್ತು ಉಪನ್ಯಾಸಕರಿಗೆ  ಅಭಿನಂದನಾ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ಸರಕಾರಿ ಕಾಲೇಜುಗಳ ಹಾಗೂ ಶಾಲೆಗಳ ಪರಿಸ್ಥಿತಿ ಹೇಳಿಕೊಳ್ಳುವಷ್ಟು ಚೆನ್ನಾಗಿಲ್ಲ. ಇಡೀ ರಾಜ್ಯದಲ್ಲಿ ಎಲ್ಲಾ ಸರಕಾರಿ ಶಾಲಾ ಕಾಲೇಜುಗಳು  ಮೂಲ ಸೌಕರ್ಯಗಳಿಲ್ಲದೆ ಸೊರುಗುತ್ತಿವೆ. ಶಿಕ್ಷಣಕ್ಕೆ ಒತ್ತು ನೀಡಿ ಗುಣಮಟ್ಟದ ಶಿಕ್ಷಣವನ್ನು ಕೊಟ್ಟರೆ ಮಗು ಮುಂದಿನ ಜೀವನವನ್ನ ತಾನೇ ರೂಪಿಸಿಕೊಳ್ಳುತ್ತದೆ. ಆದರೆ ಸರಕಾರ ಶಿಕ್ಷಣವನ್ನು ನೀಡುವ ಶಿಕ್ಷಕರಿಗೆ ಮತ್ತು ಉಪನ್ಯಾಸಕರಿಗೆ ಮುಕ್ತ ವಾತಾವರಣ ನೀಡದೆ ಸಿಬ್ಬಂದಿಗಳ ಕೊರತೆಯಿಂದ ಶಾಲಾ ಕಾಲೇಜುಗಳ  ಎಲ್ಲಾ ಕಾರ್ಯಕ್ರಮಗಳ ಒತ್ತಡವನ್ನು ಹೊರಿಸುತ್ತಿದೆ. ಇದೆಲ್ಲದರ ನಡುವೆಯೂ ಶಿಕ್ಷಕರು ಮತ್ತು ಉಪನ್ಯಾಸಕರು  ಗುಣಮಟ್ಟದ ಶಿಕ್ಷಣವನ್ನು ನೀಡಿ ಉತ್ತಮ ಫಲಿತಾಂಶವನ್ನು ಕೊಡುತ್ತಿದ್ದಾರೆ. ಈ ಕಾರ್ಯಕ್ಕೆ ನಾವೆಲ್ಲರೂ ಗುರುವೃಂದದವರನ್ನು ಅಭಿನಂದಿಸಲೇಬೇಕಾಗಿದೆ ಎಂದರು.


ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿನ ಪ್ರಾಚಾರ್ಯರು ಮತ್ತು ಉಪನ್ಯಾಸಕರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು. ಸರ್ಕಾರಕ್ಕೆ.ಸಂಬಂಧಪಟ್ಟ ಮಂತ್ರಿಗಳಿಗೆ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಈ ಬಗ್ಗೆ ಹಲವಾರು ಬಾರಿ ಮಾಹಿತಿಗಳನ್ನು ನೀಡುವುದರ ಜೊತೆಗೆ ಸಂಬಂಧಪಟ್ಟ ವಿಷಯಗಳ ಕುರಿತು ಚರ್ಚಿಸಿದ್ದೇನೆ ಆದರೆ ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಶಿಕ್ಷಕರ ಹಾಗೂ ಉಪನ್ಯಾಸಕರ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಬೇಕೆಂದು ಹೇಳಿದರು.


 ಶಿವಮೊಗ್ಗ ಜಿಲ್ಲೆ ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕ ನಾಗರಾಜ್ ಕಾಗಲ್ಕರ್ ಮಾತನಾಡಿ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಇದಕ್ಕೆ ಜಿಲ್ಲೆಯ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರು ಹಾಗೂ ಉಪನ್ಯಾಸಕ ವರ್ಗದವರು ವಿದ್ಯಾರ್ಥಿಗಳಿಗೆ ನೀಡಿದ ಮಾರ್ಗದರ್ಶನ ಕಾರಣವಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಇದೇ ರೀತಿಯ ಸಹಕಾರ ನಿರಂತರವಾಗಿರಲಿ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೊಸನಗರ ತಾಲೂಕು ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ಗಣೇಶ್ ಐತಾಳ್ ವಹಿಸಿದ್ದರು.

ಶಿವಮೊಗ್ಗ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷ ಕೃಷ್ಣಪ್ಪ ಬಿ, ಉಪನ್ಯಾಸಕರ ಸಂಘದ ಅಧ್ಯಕ್ಷ ಯೋಗೀಶ್ ಪ್ರಾಚಾರ್ಯ ಸಂಘದ ಉಪಾಧ್ಯಕ್ಷ ಚಂದ್ರಪ್ಪ ಗುಂಡಪಲ್ಲಿ , ಸಾಗರ ತಾಲ್ಲೂಕು ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ಅಣ್ಣೋಜಿರಾವ್ , ಸಾಗರ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪರಮೇಶ್ವರಪ್ಪ, ರಾಜ್ಯ ಸಂಘದ ಸದಸ್ಯ ಮಲ್ಲಿಕಾರ್ಜುನ ಸ್ವಾಮಿ, ಜಿಲ್ಲಾ ಸಂಘದ ಉಪಾಧ್ಯಕ್ಷ ಹಾಲಪ್ಪ ಎಸ್ ಎಂ ,ತಾಲ್ಲೂಕಿನ ಪದವಿಪೂರ್ವ ಕಾಲೇಜಿನ ಎಲ್ಲಾ ಪ್ರಾಚಾರ್ಯರು ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಶೈಕ್ಷಣಿಕ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ತಾಲ್ಲೂಕು ಸಂಘದ ಸ್ವಾಮಿ ರಾವ್ ಸ್ವಾಗತಿಸಿ ರಾಜೇಶ್ ಬೋಳಾರ್ ವಂದಿಸಿದರು. ಫ್ರಾನ್ಸಿಸ್ ಬೆಂಜಮಿನ್ ನಿರೂಪಿಸಿದರು.


Leave a Reply

Your email address will not be published. Required fields are marked *