ಹೊಸನಗರ : ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತರ ನಡುವೆ ಜಗಳ – ಸ್ನೇಹಿತನ ತಲೆಗೆ ಬಿಯರ್ ಬಾಟಲ್ ನಿಂದ ಹಲ್ಲೆ :

ಹೊಸನಗರ : ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತರು ಜಗಳವಾಡಿಕೊಂಡು ಒಬ್ಬನ ತಲೆಗೆ ಬಿಯರ್ ಬಾಟಲ್ ನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ನಾಗರಾಜ್ ಎಂಬ ಯುವಕನ ಮೇಲೆ ಬಿಯರ್ ಬಾಟಲಿಯಿಂದ ಹೊಡೆದು ಹಲ್ಲೆ ನಡೆಸಲಾಗಿದೆ. ಕ್ಷುಲ್ಲಕ ಕಾರಣಕ್ಕೆ ತಮ್ಮ ತಮ್ಮಲ್ಲಿಯೇ ಜಗಳವಾಡಿಕೊಂಡು ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಲಾಗಿದೆ.ಗಾಯಾಳುವನ್ನು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಗರಾಜ್ ಹೊಸನಗರ ಬಸ್ ನಿಲ್ದಾಣದ ಬಳಿಯಿರುವ ಕೋರಿಯರ್ ಕಚೇರಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿರುತ್ತಾನೆ. ಆ. 24 ರಂದು ಹೊಸನಗರ ಟೌನ್…

Read More

ರಿಪ್ಪನ್‌ಪೇಟೆ ಮೂಲದ ಟೆಂಪಲ್ ಆಫ್ ಸಕ್ಸಸ್ ನ ಶ್ರೀ ರಘುನಾಥ್ ಗುರೂಜಿ ಇನ್ನಿಲ್ಲ : ರಾಷ್ಟ್ರದ ಪ್ರಮುಖ ಗುರೂಜಿಗಳಲ್ಲಿ ಒಬ್ಬರಾಗಿದ್ದರು.

ರಿಪ್ಪನ್‌ಪೇಟೆ : ಟೆಂಪಲ್ ಆಫ್ ಸಕ್ಸಸ್ ನ ಸಾಯಿದತ್ತ ರಘುನಾಥ್ ಗುರೂಜಿಯವರು ಬೆಂಗಳೂರಿನಲ್ಲಿ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ತೀವ್ರ ಅಸೌಖ್ಯ ಗೊಂಡಿದ್ದ ರಘುನಾಥ್ ಗುರೂಜಿ ಅವರು ಬೆಂಗಳೂರಿನ ಜಯನಗರದಲ್ಲಿರುವ ಅಪೋಲೋ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುರೂಜಿಯವರು ಅಪಾರ ಭಕ್ತವೃಂದವನ್ನು ಹೊಂದಿದ್ದಾರೆ. ನಿನ್ನೆ (30th August 2022) ವಿಧಿವಶರಾದ ರಘುನಾಥ್ ಗುರೂಜಿ ಅವರ ಅಂತ್ಯಕ್ರಿಯೆ ಸೆಪ್ಟೆಂಬರ್ 2 ರಂದು ಮಣಿಪಾಲದಲ್ಲಿ ನಡೆಯಲಿದೆ. ಅನುಯಾಯಿಗಳು ಬೆಂಗಳೂರು ಬಸವನಗುಡಿಯ ವಾಣಿ ನಿಲಾಸ ರಸ್ತೆಯಲ್ಲಿರುವ ಟೆಂಪಲ್ ಆಫ್ ಸಕ್ಸಸ್…

Read More

ಹದಗೆಟ್ಟ ರಸ್ತೆ – ರಾಜ್ಯ ಹೆದ್ದಾರಿಯ ಮಧ್ಯೆ ಬಾಳೆಗಿಡ ನೆಟ್ಟು ಪ್ರತಿಭಟನೆ

ಸೂಡೂರು :  ಶಿವಮೊಗ್ಗ-ಹೊಸನಗರ ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿಯು ಸಂಪೂರ್ಣ ಹದಗೆಟ್ಟಿದ್ದು ಹೊಂಡ ಗುಂಡಿಗಳಿಂದ ಕೂಡಿದ್ದು ಪ್ರತಿ ನಿತ್ಯ ಒಂದೆರಡು ಅಪಘಾತಗಳು ನಡೆಯುತಿದ್ದು ಈ ರಸ್ತೆಯನ್ನು ತಕ್ಷಣ ಸರಿಪಡಿಸಿ ಎಂದು ಒತ್ತಾಯಿಸಿ ಕೂರಂಬಳ್ಳಿ ಗ್ರಾಮಸ್ಥರು ರಸ್ತೆ ಮಧ್ಯದಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ ನಡೆಸಿದರು. ಐದನೇ ಮೈಲಿಕಲ್ಲು ಹಾಗೂ ಚಿನ್ನಮನೆ ಗ್ರಾಮದ ನಡುವಿನ ರಸ್ತೆಯಲ್ಲಿ ಹಲವಾರು ಗುಂಡಿಗಳು ಬಿದ್ದಿದ್ದು ಹಲವಾರು ಅಪಘಾತಗಳು ನಡೆದಿದ್ದವು ಈ ಹಿನ್ನಲೆಯಲ್ಲಿ ಕೂರಂಬಳ್ಳಿ ಗ್ರಾಮಸ್ಥರು ಇಂದು ರಸ್ತೆ ಮಧ್ಯೆ ಬಾಳೆ ಗಿಡ ನೆಟ್ಟು ವಿನೂತನವಾಗಿ…

Read More

ಬೋನಿಗೆ ಬಿದ್ದ ಚಿರತೆ – ನಿಟ್ಟುಸಿರು ಬಿಟ್ಟ ಜನತೆ

ಕಳೆದ ಎರಡು ತಿಂಗಳಿಂದ ಕಾಟ ಕೊಡುತ್ತಿದ್ದ ಚಿರತೆ ಶಿವಮೊಗ್ಗ ಗ್ರಾಮಾಂತರದ ಆಲದಹಳ್ಳಿ ಸೋಮಿನಕೊಪ್ಪದಲ್ಲಿ  ಬೋನಿಗೆ ಬಿದ್ದಿದೆ.ನಂತರ ಚಿರತೆಯನ್ನು ಅರಣ್ಯ ಇಲಾಖೆಯವರು ಬೇರೆಡೆ ಸಾಗಿಸಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ಬಾಳಿ ತಾಲೂಕಿನ ಪಲವನಹಳ್ಳಿ ಯಲ್ಲಿ ಮಹಿಳೆಯನ್ನು ಬಲಿ ತೆಗೆದುಕೊಂಡ ಚಿರತೆ ಆಲದಹಳ್ಳಿ ಸೋಮಿನಕೊಪ್ಪದಲ್ಲಿ ಬೋನಿಗೆ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ. ಸಾಕಿದ ನಾಯಿಯನ್ನು ಬೋನಿನಲ್ಲಿಟ್ಟು ಚಿರತೆಯನ್ನ ಹಿಡಿಯಲಾಗಿದೆ. ಹೊಲದಲ್ಲಿ ಸೌತೆಕಾಯಿ ಕೀಳಲು ಬಂದ ರೈತರು ಬೋನಿಗೆ ಬಿದ್ದ ಚಿರತೆಯನ್ನು ಮೊದಲು ನೋಡಿದ್ದಾರೆ. ನಂತರ ಸ್ಥಳದಲ್ಲಿ ಜನ ಜಾತ್ರೆಯೇ ನಿರ್ಮಾಣವಾಗಿದೆ. ಕಳೆದ  ಮೂರು…

Read More

ಅಭಿವೃದ್ಧಿಯನ್ನು ಸಹಿಸದೆ ಪುಕ್ಕಟೆ ಪ್ರಚಾರಕ್ಕಾಗಿ ಪರಿತಪಿಸುತ್ತಿರುವ ಬೇಳೂರು : ಬಿಜೆಪಿ ಅರೋಪ

ರಿಪ್ಪನ್‌ಪೇಟೆ;-ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕಾಂಗ್ರೇಸ್ ಪಕ್ಷದ ವಕ್ತಾರ ಗೋಪಾಲಕೃಷ್ಣ ಬೇಳೂರು ಹಾಲಿ ಶಾಸಕ ಹರತಾಳು ಹಾಲಪ್ಪನವರ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ಪುಕ್ಕಟೆ ಪ್ರಚಾರಕ್ಕಾಗಿ ತಮ್ಮ ಬೆಂಬಲಿಗರೊAದಿಗೆ ಸುಳ್ಳು ಹಾಗೂ ನಿರಾಧಾರ ಅರೋಪ ಮಾಡುತ್ತಿದ್ದಾರೆಂದು ಕೆರೆಹಳ್ಳಿ-ಹುಂಚಾ ಬಿಜೆಪಿ ಮಹಾಶಕ್ತಿಕೇಂದ್ರದ ಅಧ್ಯಕ್ಷ ಎಂ.ಬಿ.ಮಂಜುನಾಥ ಅರೋಪಿಸಿದರು.  ರಿಪ್ಪನ್‌ಪೇಟೆ ಬಿಜೆಪಿ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಇತ್ತೀಚೆಗೆ ಸುರಿದ ಭಾರಿಮಳೆಯಿಂದಾಗಿ ಕೆರೆಹಳ್ಳಿ ಹೋಬಳಿಯ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ-ಮಳವಳ್ಳಿ ಕನ್ನೇಹೊಂಡದ ನೀರು ನುಗ್ಗಿ ರಸ್ತೆ ಕೊಚ್ಚಿಹೋಗಿ ಸಾರ್ವಜನಿಕರು ಓಡಾಡದಂತಾಗಿರುವ ಬಗ್ಗೆ…

Read More

ಡಕಾಯಿತಿಗೆ ಹೊಂಚು ಹಾಕಿದ್ದ ಯುವಕರ ಹೆಡೆಮುರಿ ಕಟ್ಟಿದ ಪೊಲೀಸರು :

ಶಿವಮೊಗ್ಗ : ವಿನೋಬಾನಗರದ ಪೊಲೀಸರು ಖಡಕ್ ಕಾರ್ಯಾಚರಣೆ ನಡೆಸಿ ಡಕಾಯಿತಿ ನಡೆಸಲು ಹೊಂಚು ಹಾಕಿ ಕುಳಿತಿದ್ದ ಯುವಕರನ್ನು ಬಂಧಿಸಿದ್ದಾರೆ. ಪಶು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಹೋಗುವ ಚಾನೆಲ್ ಬಳಿ ಡಕಾಯಿತಿ ನಡೆಸಲು ಹೊಂಚು ಹಾಕಿ ಕುಳಿತಿದ್ದ ಐವರು ಹುಡುಗರು ಮಾರಕಾಸ್ತ್ರಗಳನ್ನ ಹಿಡಿದು ಕಾದುಕುಳಿತಿದ್ದರು. ಈ ಮಾಹಿತಿ ಪಡೆದ ವಿನೋಬ ನಗರ ಪೊಲೀಸರ ತಂಡ ಖಡಕ್ ದಾಳಿ ನಡೆಸಿದೆ. ವಿನೋಬ ನಗರ ಪೊಲೀಸ್ ಠಾಣೆಯ ಪಿಎಸ್ಐ ಮಂಜುನಾಥ್ ಕುರಿ ನೇತೃತ್ವದಲ್ಲಿ , ಸಿಬ್ಬಂದಿಗಳಾದ ಧನಂಜಯ್ ಹೆಚ್ ಸಿ, ಮಲ್ಲಪ್ಪ ಸಿಪಿಸಿ,…

Read More

ರಾಜಕಾರಣಿಗಳ ನಡವಳಿಕೆ ಜನರಲ್ಲಿ ಅಸಹ್ಯವುಂಟುಮಾಡಿದೆ,ಅದು ಪರಿವರ್ತನೆಯಾಗಬೇಕು: ಕೆ ದಿವಾಕರ್

ರಿಪ್ಪನ್‌ಪೇಟೆ: ಸ್ವಾತಂತ್ರ್ಯ ನಂತರ ನಮ್ಮ ರಾಷ್ಟ, ರಾಜ್ಯದ ರಾಜಕಾರಣಿಗಳು ನಡೆದುಕೊಂಡಿರುವ ರೀತಿ ಜನರಲ್ಲಿ ಅಸಹ್ಯವುಂಟುಮಾಡಿದೆ. ಇದು ಪರಿವರ್ತನೆಯಾಗಬೇಕು ಎಂದು ಆಮ್ ಆದ್ಮಿ ಪಕ್ಷದ ಸಾಗರ ವಿಧಾನಸಭಾ ಕ್ಷೇತ್ರ ಸಂಭಾವ್ಯ ಅಭ್ಯರ್ಥಿ ಕೆ. ದಿವಾಕರ್ ಹೇಳಿದರು. ಪಟ್ಟಣದ ಸಾಗರ ರಸ್ತೆಯ ಗೌರಿಶಂಕರ ಕಾಂಪ್ಲೆಕ್ಸ್ ನಲ್ಲಿ ಆಮ್‌ಆದ್ಮಿ ಪಕ್ಷದ ನೂತನ ಕಛೇರಿ ಉದ್ಘಾಟನೆಯ ನಂತರ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿ ಇದುವರೆಗೆ ನಮ್ಮನ್ನಾಳಿದ ಶಾಸಕರುಗಳು ಉಂಡುಹೋದ ಕೊಂಡುಹೋದ ಮನಸ್ಥಿತಿಯವರಾಗಿರುವುದು ದುರಂತ. ನಮ್ಮಿಂದ ಆಯ್ಕೆಯಾದ ಕಳ್ಳರು, ಕಾಕರು, ದರೋಡೆ ಕೋರರು ಸಮಾಜವನ್ನು ಏನು…

Read More

ಅರಸಾಳು ಮಾಲ್ಗುಡಿ ಮ್ಯೂಸಿಯಂಗೆ ರೈಲ್ವೆ ಪ್ರಧಾನ ವ್ಯವಸ್ಥಾಪಕ ಭೇಟಿ :

ರಿಪ್ಪನ್‌ಪೇಟೆ: ಸಮೀಪದ ಅರಸಾಳು ರೈಲ್ವೆ ನಿಲ್ದಾಣದಲ್ಲಿರುವ ಮಾಲ್ಗುಡಿ ಮ್ಯೂಸಿಯಂಗೆ ನೈರುತ್ಯ ರೈಲ್ವೆಯ ವಲಯದ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅರಸಾಳು ಗ್ರಾಮ ಪಂಚಾಯತಿ ಅಧ್ಯಕ್ಷ ಉಮಾಕರ ನೇತೃತ್ವದಲ್ಲಿ ಗ್ರಾಮಸ್ಥರು, ವಿವಿಧ ಸಂಘಸಂಸ್ಥೆಗಳ  ಮುಖಂಡರು ಜಿಎಂ ರವರನ್ನು ಭೇಟಿಮಾಡಿ ಹರಿಹರ-ಬೈಂದೂರು ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ಅರಸಾಳು ರೈಲು ನಿಲ್ದಾಣಕ್ಕೆ ರೈಲು ನಿಲುಗಡೆಗಾಗಿ 4 ಕೋಟಿ ರೂ. ಅನುದಾನದಲ್ಲಿ ಪ್ಲಾಟ್‌ಫಾರಂ ಜೊತೆಗೆ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಿದೆ. ಬ್ರಿಟೀಷರ ಕಾಲದಿಂದಲೂ ಜನನಿಬಿಡ ಪ್ರದೇಶವಾಗಿದ್ದ…

Read More

ಸಮಾಜದಲ್ಲಿ ನೊಂದವರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು : ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಸಮಾಜದಲ್ಲಿ ನೊಂದವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಹಾಗೂ ಮಕ್ಕಳಿಗೆ ಸೂಕ್ತ ವಿದ್ಯಾಭ್ಯಾಸ ಒದಗಿಸಿ ಸುಸಂಸ್ಕೃತ ಬದುಕು ಕಟ್ಟಿಕೊಳ್ಳಲು ನೆರವಾಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಅವರು ಭಾನುವಾರ ಪಟ್ಟಣದ ಜಿಎಸ್ ಬಿ ಸಭಾಂಗಣದಲ್ಲಿ ಹೊಸನಗರ ತಾಲ್ಲೂಕ್ ಗಂಗಾಮತಸ್ಥರ ನೌಕರರ ಕ್ಷೇಮಾಭಿವೃದ್ದಿ ಸಂಘ ಮತ್ತು ತಾಲ್ಲೂಕ್ ಗಂಗಾಮತಸ್ಥರ ಸಮಾಜ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕೊರೊನಾದಿಂದಾಗಿ…

Read More

ಭಾರಿ ಮಳೆಗೆ ಧರೆ ಕುಸಿತ : ಶಾಸಕರ ನಿರ್ಲಕ್ಷ್ಯ ಧೋರಣೆ ಖಂಡಿಸಿ ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ ಗ್ರಾಮಸ್ಥರ ಪ್ರತಿಭಟನೆ

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಳವಳ್ಳಿ-ತಮ್ಮಡಿಕೊಪ್ಪ ಸಂಪರ್ಕ ರಸ್ತೆಯ ಧರೆ ಕುಸಿದು ಸಂಪರ್ಕ ಕಡಿತಗೊಳ್ಳುವ ಅಪಾಯದ ಅತಂಕದಲ್ಲಿ  ಇರುವ ಹಿನ್ನೆಲೆಯಲ್ಲಿ  ಮಳವಳ್ಳಿ ಮತ್ತು ತಮ್ಮಡಿಕೊಪ್ಪ ಗ್ರಾಮಸ್ಥರು ಇಂದು ಮಾಜಿ ಶಾಸಕ  ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ನೇತ್ರತ್ವದಲ್ಲಿ ಶಾಸಕ ಹರತಾಳು ಹಾಲಪ್ಪ ರವರ ನಿರ್ಲಕ್ಷ್ಯ ಧೋರಣೆ ಖಂಡಿಸಿ ಪ್ರತಿಭಟನೆ ನಡೆಸಿದರು. ನಂತರ ಮಾತನಾಡಿದ ಬೇಳೂರು ಮಳವಳ್ಳಿ-ತಮ್ಮಡಿಕೊಪ್ಪದ ಗ್ರಾಮದ  ಸಂಪರ್ಕ ರಸ್ತೆಯು ಸಂಪೂರ್ಣ ಅಪಾಯದ ಸ್ಥಿತಿಯಲ್ಲಿದ್ದು ಈಗಾಗಲೇ ಈ…

Read More